ಕಡಿಮೆ ಅಂಕ ಕೊಟ್ಟಿದ್ದಕ್ಕೆ ಹೀಗಾ ಮಾಡೋದು! – ಶಿಕ್ಷಕಿಯ ವಾಟರ್ ಬಾಟಲ್‌ಗೆ ಮಾತ್ರೆ ಹಾಕಿದ ವಿದ್ಯಾರ್ಥಿನಿಯರು!
ಪರೀಕ್ಷೆ ಅಂದಾಗ ಹೆಚ್ಚು ಅಂಕ, ಕಡಿಮೆ ಅಂಕ ಬರುವುದು ಕಾಮನ್. ಹೆಚ್ಚು ಅಂಕ ಬಂದ್ರೆ ಮಕ್ಕಳು ಖುಷಿಯಿಂದ ಹೇಳಿಕೊಂಡು ತಿರುಗಾಡುತ್ತಾರೆ. ಇನ್ನು ಕಡಿಮೆ ಅಂಕ ಸಿಕ್ಕರೆ ಹೆಚ್ಚಂದ್ರೆ 2 ದಿನ ಬೇಜಾರಾಗಬಹುದು ಅಷ್ಟೆ. ಕೆಲ ಮಕ್ಕಳು ಕಡಿಮೆ ಮಾರ್ಕ್ಸ್ ಕೊಟ್ಟ ಟೀಚರ್‌ಗೆ ಬೈಯುತ್ತಾ ಇರುತ್ತಾರೆ. ಆದರೆ ಇಲ್ಲೊಬ್ಬ ವಿದ್ಯಾರ್ಥಿನಿ ಟೀಚರ್ ಕಡಿಮೆ ಅಂಕ ಕೊಟ್ಟಿದ್ದಕ್ಕೆ ಅವರ ಮೇಲೆ ಸೇಡು ತೀರಿಸಿಕೊಂಡಿದ್ದಾಳೆ. ಇದೇ ಸಿಟ್ಟಿನಿಂದ ಶಿಕ್ಷಕಿಯ ವಾಟರ್ ಬಾಟ್ಲಿಗೆ ಮಾತ್ರೆ ಹಾಕಿದ್ದಾಳೆ.
ಈ ಘಟನೆ ಮಂಗಳೂರಿನ ಉಳ್ಳಾಲದ ಶಾಲೆಯೊಂದರಲ್ಲಿ ನಡೆದಿದೆ. ಶಾಲೆಯಲ್ಲಿ ಇತ್ತೀಚೆಗೆ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯ ಗಣಿತ ವಿಷಯದಲ್ಲಿ ವಿದ್ಯಾರ್ಥಿನಿಗೆ ಶಿಕ್ಷಕಿ ಒಂದು ಅಂಕ ಕಡಿಮೆ ಕೊಟ್ಟಿದ್ದರು. ಟೀಚರ್ ಕಡಿಮೆ ಅಂಕ ಕೊಟ್ಟಿದ್ದಕ್ಕೆ ವಿದ್ಯಾರ್ಥಿನಿ ಕೋಪಗೊಂಡಿದ್ದಾಳೆ. ಇಷ್ಟಕ್ಕೇ ಸುಮ್ಮನಾಗದ ಆಕೆ ಪಾಠ ಹೇಳಿಕೊಟ್ಟ ಗುರುಗಳ ಮೇಲೆಯೇ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾಳೆ.
ತಾನು ಸರಿ ಉತ್ತರ ಬರೆದಿದ್ದರೂ ಟೀಚರ್ ಅದಕ್ಕೆ ಮಾರ್ಕ್ಸ್ ಕೊಡದೇ ಇದ್ದಿದ್ದಕ್ಕೆ ಕುಪಿತಗೊಂಡಿದ್ದಾಳೆ. ಟೀಚರ್‌ಗೆ ತಕ್ಕ ಪಾಠ ಕಲಿಸಬೇಕೆಂದು ನಿರ್ಧರಿಸಿದ ಆಕೆ ಇನ್ನೊಬ್ಬ ವಿದ್ಯಾರ್ಥಿನಿಯ ಜೊತೆ ಸೇರಿ ಶಿಕ್ಷಕಿಯ ನೀರಿನ ಬಾಟ್ಲಿಗೆ ಅವಧಿ ಮುಗಿದ ಮಾತ್ರೆಗಳನ್ನು ಹಾಕಿದ್ದಾರೆ. ಈ ವಿಚಾರ ಗೊತ್ತಿಲ್ಲ ಟೀಚರ್ ನೀರನ್ನು ಕುಡಿದಿದ್ದಾರೆ.
ಇದನ್ನೂ ಓದಿ: ಪ್ರೀತ್ಸೆ ಎಂದು ಪೀಡಿಸಿದ ಪಾಗಲ್ ಪ್ರೇಮಿ ಯುವತಿಯನ್ನು ಕಿಡ್ನಾಪ್ ಮಾಡಿದ – ರೇಪ್ ಮಾಡಿ ಕೊಂದೇ ಬಿಟ್ಟ ಕಿರಾತಕ
ಇನ್ನು ಇದೇ ನೀರನ್ನು ಮತ್ತೊರ್ವ ಶಿಕ್ಷಕಿ ಕೂಡ ಕುಡಿದಿದ್ದಾರೆ. ನೀರು ಕುಡಿದ ಕೆಲ ಹೊತ್ತಿನ ಬಳಿಕ ಓರ್ವ ಶಿಕ್ಷಕಿಯ ಮುಖ ಊದಿಸಿಕೊಳ್ಳಲು ಪ್ರಾರಂಭವಾದರೆ, ಇನ್ನೋರ್ವ ಶಿಕ್ಷಕಿ ಅಸ್ವಸ್ಥರಾಗಿದ್ದಾರೆ. ಕೂಡಲೇ ಇಬ್ಬರು ಶಿಕ್ಷಕರನ್ನು ಆಸ್ಪತ್ರಗೆ ಕರೆದೊಯ್ಯಲಾಗಿದೆ.
ಇತ್ತ ಶಿಕ್ಷಕಿಯರಿಬ್ಬರು ಅಸ್ವಸ್ಥಗೊಳ್ಳಲು ಕಾರಣವೇನು ಅಂತಾ ಉಳಿದ ಶಿಕ್ಷಕರು ತಲೆಕೆಡಿಸಿಕೊಂಡಿದ್ದಾರೆ. ಬಳಿಕ ಶಾಲೆಯಲ್ಲಿದ್ದ ಸಿಸಿಟಿವಿ ಪರೀಕ್ಷಿಸಿದ್ದಾರೆ. ಈ ವೇಳೆ ವಿದ್ಯಾರ್ಥಿನಿಯ ಖತರ್ನಾಕ್ ಕೆಲಸ ಬಯಲಾಗಿದೆ. ಕಡಿಮೆ ಮಾರ್ಕ್ಸ್ ಬಂದ 6 ನೇ ತರಗತಿಯ ವಿದ್ಯಾರ್ಥಿನಿಯರಿಬ್ಬರಿರು ಶಿಕ್ಷಕಿ ಮೇಲೆ ಸೇಡು ತೀರಿಸಿಕೊಂಡಿದ್ದಾರೆ. ಶಿಕ್ಷಕರ ಕೊಠಡಿಯಲ್ಲಿ ಯಾರು ಇಲ್ಲದ ಸಮಯ ನೋಡಿ ನೀರಿನ ಬಾಟಲ್‌ಗೆ ಅವಧಿ ಮುಗಿದ ಮಾತ್ರೆಗಳನ್ನು ಹಾಕಿದ್ದಾರೆ. ಸದ್ಯ ವಿದ್ಯಾರ್ಥಿನಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿದ್ಯಾರ್ಥಿನಿಯರ ವಿರುದ್ಧ ಕ್ರಮಕೊಳ್ಳಲಾಗಿದೆ ಎಂದು ವರದಿಯಾಗಿದೆ.