SSLC ಪರೀಕ್ಷೆ ಹತ್ತಿರ ಬರುತ್ತಿದ್ದಂತೆ ಉಗ್ರರು ನುಂಗುವ ಮಾತ್ರೆಯ ಮೊರೆ ಹೋಗುತ್ತಿದ್ದಾರೆ ಮಕ್ಕಳು! – ಏನಿದು ಮಾತ್ರೆ?

SSLC ಪರೀಕ್ಷೆ ಹತ್ತಿರ ಬರುತ್ತಿದ್ದಂತೆ ಉಗ್ರರು ನುಂಗುವ ಮಾತ್ರೆಯ ಮೊರೆ ಹೋಗುತ್ತಿದ್ದಾರೆ ಮಕ್ಕಳು! – ಏನಿದು ಮಾತ್ರೆ?

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ದಿನಗಣನೆ ಆರಂಭವಾಗಿದೆ. ಈಗಾಗಲೇ ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಿ ನಡೆಸಿಕೊಳ್ಳುತ್ತಿದ್ದಾರೆ. ಈ ಬೆನ್ನಲ್ಲೇ ಶಾಕಿಂಗ್‌ ಹೊರಬಂದಿದೆ. ಪರೀಕ್ಷೆ ಸಮಯದಲ್ಲಿ ನಿದ್ದೆ ಬರಬಾರದು ಅಂತಾ ಮಕ್ಕಳು ಭಯೋತ್ವಾದಕರು ತೆಗೆದುಕೊಳ್ಳುವ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂಬ ಆಘಾತಕಾರಿ ವಿಚಾರ ಬಯಲಾಗಿದೆ.

ಏನಿದು ಘಟನೆ?

ಉತ್ತರ ಪ್ರದೇಶದ ಪ್ರಜಕ್ತಾ ಸ್ವರೂಪ್ ಎಂಬ ವಿದ್ಯಾರ್ಥಿನಿ 10ನೇ ತರಗತಿಯಲ್ಲಿ ಓದುತ್ತಿದ್ದಾಳೆ. ಹೀಗಾಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಈಕೆ ಏಕಾಏಕಿ ಕುಸಿದುಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಈ ವೇಳೆ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ತಪಾಸಣೆ ವೇಳೆ ಆಕೆಯ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ, ನರಗಳು ಊದಿಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ವೈದ್ಯರು ಆಕೆಗೆ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ. ಸದ್ಯ ವಿದ್ಯಾರ್ಥಿನಿ ಆರೋಗ್ಯ ಚೇತರಿಸಿಕೊಳ್ಳುತ್ತಿದೆ.

ಇದನ್ನೂ ಓದಿ: ಪುಟಿನ್ ಬದ್ದ ವೈರಿ ಜೈಲಿನಲ್ಲಿ ಸಾವು – ಅಲೆಕ್ಸಿ ನವಲ್ನಿಗೆ ಗೌರವ ಸಲ್ಲಿಸಲು ಬಂದಿದ್ದ 400ಕ್ಕೂ ಹೆಚ್ಚು ಜನ ಜೈಲು ಪಾಲು!

ಇತ್ತ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲಾದ ಬಳಿಕ ಪೋಷಕರು ಆಕೆ ಓದುತ್ತಿದ್ದ ಕೋಣೆಯನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅಲ್ಲಿ ಮಾತ್ರೆಗಳು ತುಂಬಿದ ಬಾಟಲಿಯೊಂದು ಪತ್ತೆಯಾಗಿದೆ. ಇದರಿಂದ ಆತಂಕಗೊಂಡ ಪೋಷಕರು ಮಾತ್ರೆಗಳನ್ನು ವೈದ್ಯರ ಬಳಿ ತೋರಿಸಿದ್ದಾರೆ. ಆಗ ವೈದ್ಯರು, ಇದು ನಿದ್ದೆಯಿಂದ ತಪ್ಪಿಸಿಕೊಳ್ಳಲು ಬಳಸುವ ಮಾತ್ರೆ ಎಂದು ತಿಳಿಸಿದ್ದಾರೆ.

ಈ ಕುರಿತು ಪೋಷಕರು ವಿದ್ಯಾರ್ಥಿನಿಯನ್ನು ವಿಚಾರಿಸಿದಾಗ ಆಕೆಯೂ ಒಪ್ಪಿಕೊಂಡಿದ್ದಾಳೆ. ಪರೀಕ್ಷೆಯ ಸಮಯದಲ್ಲಿ ರಾತ್ರಿಯಿಡೀ ಎಚ್ಚರದಿಂದ ಇರಲು ಈ ಮಾತ್ರೆ ಸೇವಿಸುತ್ತಿದ್ದೆ ಎಂದಿದ್ದಾಳೆ. ಇದು ವೈದ್ಯರು ಹಾಗೂ ಪೋಷಕರನ್ನು ದಿಗ್ಭ್ರಮೆಗೊಳಿಸಿದೆ.

ಏನಿದು ಮಾತ್ರೆ?

ಒಂದು ಮಾತ್ರೆ ಸೇವಿಸಿದರೆ ಸುಮಾರು 40 ಗಂಟೆಗಳ ಕಾಲ ಎಚ್ಚರದಿಂದ ಇರುವಂತೆ ಮಾಡುತ್ತದೆ. ಸಾಮಾನ್ಯವಾಗಿ ಈ ಮಾತ್ರೆಗಳನ್ನು ಉಗ್ರರು ತೆಗೆದುಕೊಳ್ಳುತ್ತಾರೆ. ಭಯೋತ್ಪಾದಕ ದಾಳಿ ವೇಳೆ ನಿದ್ರೆ ತಪ್ಪಿಸಲು ಉಗ್ರರು ಇಂತಹ ಮಾತ್ರೆಗಳನ್ನು ನುಂಗಿ ಕಾರ್ಯಾಚರಣೆ ಮಾಡುತ್ತಾರೆ. ಇದು ಮಾರುಕಟ್ಟೆಗಳಲ್ಲಿ ಸಿಗಲ್ಲ. ಆದರೆ ಕಳ್ಳ ಮಾರ್ಗದಲ್ಲಿ ಬೇರೆ ಬೇರೆ ಮಾತ್ರೆಗಳ ಹೆಸರಿನಲ್ಲಿ ಭಾರತಕ್ಕೆ ಸಾಗಿಸಲಾಗುತ್ತದೆ.

ಇದೀಗ ಈ ಮಾತ್ರೆಗಳನ್ನು ವಿದ್ಯಾರ್ಥಿಗಳು ಸೇವಿಸುತ್ತಿರುವುದು ಆತಂಕಕಾರಿಯಾಗಿದೆ. ಪರೀಕ್ಷೆಗಳ ಸಮಯಗಳಲ್ಲಿ ಇಂತಹ ಮಾತ್ರೆಗೆ ಬೇಡಿಕೆ ಕೂಡ ಹೆಚ್ಚಾಗುತ್ತದೆ ಎಂದು ಔಷಧ ವ್ಯಾಪಾರಿಗಳು ಹೇಳುತ್ತಾರೆ. ಒಟ್ಟಿನಲ್ಲಿ ಪರೀಕ್ಷೆ ಹತ್ತಿರ ಬರುತ್ತಿದ್ದಂತೆಯೇ ಪೋಷಕರು ಕೂಡ ತಮ್ಮ ಮಕ್ಕಳ ಬಗ್ಗೆ ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ. ಇದೀಗ ಈ ಘಟನೆ ಸಂಬಂಧ ವೈದ್ಯ ಲೋಕ ಕೂಡ ಆತಂಕ ವ್ಯಕ್ತಪಡಿಸಿದೆ. ಇಂತಹ ಮಾತ್ರೆಗಳನ್ನು ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿದೆ.

Shwetha M