ಫ್ಯಾನ್ಸ್‌ಗೆ ಗುಡ್‌ನ್ಯೂಸ್ ಕೊಟ್ಟ ಕಿಚ್ಚ! – ಮಾರ್ಕ್ ಚಿತ್ರದ ಟ್ರೈಲರ್ ರಿಲೀಸ್‌ಗೆ ಡೇಟ್ ಫಿಕ್ಸ್!

ನಟ ಕಿಚ್ಚ ಸುದೀಪ್ ನಟಿಸಿರುವ ಮಾರ್ಕ್ ಸಿನಿಮಾದ ಟೀಸರ್ ಈಗಾಗಲೇ ದಾಖಲೆ ಬರೆದಿದೆ. ಕಿಚ್ಚನ ಆಕ್ಷನ್ ಖದರ್ ನೋಡಿ ಥ್ರಿಲ್ಲರ್ ಆಗಿರುವ ಫ್ಯಾನ್ಸ್‌ಗೆ ಚಿತ್ರತಂಡ ಈಗ ಮತ್ತೊಂದು ಕ್ರೇಜಿ ಅಪ್ ಡೇಟ್ ಕೊಟ್ಟಿದೆ. ಇದೀಗ ಮಾರ್ಕ್ ಸಿನಿಮಾದ ಟ್ರೈಲರ್ ರಿಲೀಸ್‌ಗೆ ಡೇಟ್ ಫಿಕ್ಸ್ ಆಗಿದೆ.
ಇದನ್ನೂ ಓದಿ: ಜೈಲಿನಲ್ಲಿ ಮಾದಕ ವಸ್ತು ಬ್ಯಾನ್! – ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ರೌಡಿಗಳು!
ಕನ್ನಡದ ಬಹು ನಿರೀಕ್ಷಿತ ಸಿನಿಮಾ ಮಾರ್ಕ್ ಸಿನಿಮಾ ಡಿಸೆಂಬರ್ 25ಕ್ಕೆ ಬಿಡುಗಡೆ ಆಗಲಿದೆ. ಇದೀಗ ಸಿನಿಮಾದ ಟ್ರೈಲರ್ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದೆ. ಮಾರ್ಕ್ ಸಿನಿಮಾದ ಟ್ರೈಲರ್ ನಾಳೆ ಅಂದರೆ ಡಿಸೆಂಬರ್ 07ರಂದು ಬೆಳಿಗ್ಗೆ 11:58ಕ್ಕೆ ಟ್ರೈಲರ್ ಬಿಡುಗಡೆ ಆಗಲಿದೆ. ಈ ಬಗ್ಗೆ ಚಿತ್ರತಂಡ ಟ್ವೀಟ್ ಮಾಡಿದ್ದು, ನಿರೀಕ್ಷೆಯ ಅವಧಿ ಕಿರಿದಾಗಿದೆ, ಇನ್ನೊಂದು ಸೂರ್ಯೋದಕ್ಕೆ ನಿರೀಕ್ಷೆಗಳು ಅಂತ್ಯವಾಗಲಿವೆ. ಮಾರ್ಕ್ ಸಿನಿಮಾದ ಟ್ರೈಲರ್, ಆಕ್ಷನ್ ಮತ್ತು ಭಾವನೆಗಳ ಸ್ಪೋಟಕ ಅಲೆಯನ್ನೇ ತರಲಿದೆ ಎಂದು ಪೋಸ್ಟ್‌ನಲ್ಲಿ ಬರೆಯಲಾಗಿದೆ. ಸುದೀಪ್ ಅವರು ಕಪ್ಪು ಬಣ್ಣದ ಹುಡಿ ಧರಿಸಿ ಸಿಗರೇಟು ಹಿಡಿದಿರುವ ಪೋಸ್ಟರ್ ಅನ್ನು ಪೋಸ್ಟ್ನ ಜೊತೆಗೆ ಹಂಚಿಕೊಂಡಿದೆ ಚಿತ್ರತಂಡ.
ಸುದೀಪ್ ನಟನೆಯ ಸೂಪರ್ ಹಿಟ್ ಸಿನಿಮಾ ಮ್ಯಾಕ್ಸ್ನ ತಂಡವೇ ಮಾರ್ಕ್ ಸಿನಿಮಾಕ್ಕೂ ಕೆಲಸ ಮಾಡಿದೆ. ಮ್ಯಾಕ್ಸ್ ಸಿನಿಮಾ ನಿರ್ದೇಶಿಸಿದ್ದ ವಿಜಯ್ ಕಾರ್ತಿಕೇಯ ಅವರೇ ಮಾರ್ಕ್ ಸಿನಿಮಾಕ್ಕೂ ಆಕ್ಷನ್ ಕಟ್ ಹೇಳಿದ್ದಾರೆ. ಮ್ಯಾಕ್ಸ್ ಸಿನಿಮಾವನ್ನು ತಮಿಳಿನ ಕಲೈಪುಲಿ ಎಸ್ ತನು ಹಾಗೂ ಸುದೀಪ್ ಅವರು ಜಂಟಿಯಾಗಿ ನಿರ್ಮಾಣ ಮಾಡಿದ್ದರು. ಆದರೆ ಮಾರ್ಕ್ ಸಿನಿಮಾವನ್ನು ಸತ್ಯಜ್ಯೋತಿ ಫಿಲಮ್ಸ್ ಮತ್ತು ಸುದೀಪ್ ಅವರು ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಎಸ್ಆರ್ ಗಣೇಶ್ ಬಾಬು ಸಂಕಲನ ಮಾಡಿದ್ದಾರೆ. ಸಿನಿಮಾಟೊಗ್ರಫಿ ಶೇಖರ್ ಚಂದ್ರ ಅವರದ್ದಾಗಿದೆ. ‘ಮ್ಯಾಕ್ಸ್’ಗೂ ಇವರೇ ಸಿನಿಮಾಟೊಗ್ರಫಿ ಮಾಡಿದ್ದರು. ಮಾರ್ಕ್ ಸಿನಿಮಾನಲ್ಲಿ ಸುದೀಪ್ ಜೊತೆಗೆ ನಿಶ್ವಿಕಾ ನಾಯ್ಡು, ರೋಹಿಣಿ ಪ್ರಕಾಶ್ ನಟಿಸಿದ್ದಾರೆ. ಇನ್ನಿತರೆ ಕಲಾವಿದರು ಯಾರ್ಯಾರು ಎಂಬುದು ನಾಳೆ ತಿಳಿಯಲಿದೆ.

ನೋಡಿರಿ

