ನಾವು ರೈತರ ಪರವಾಗಿ ನಿಲ್ಲುತ್ತೇವೆ, ರೈತರ ಸಮಸ್ಯೆ ಬಗೆಹರಿಸಲು ನೀವೂ ಸಿದ್ಧರಿರಬೇಕು – ಸಿಎಂ ಸಿದ್ದರಾಮಯ್ಯ

ನಾವು ರೈತರ ಪರವಾಗಿ ನಿಲ್ಲುತ್ತೇವೆ,  ರೈತರ ಸಮಸ್ಯೆ ಬಗೆಹರಿಸಲು ನೀವೂ ಸಿದ್ಧರಿರಬೇಕು – ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಕಬ್ಬು ಬೆಳಗಾರರ ಹೋರಾಟ  ದಿನದಿಂದ ದಿನಕ್ಕೆ ತೀವ್ರ ಸ್ವರೂಪವ್ನ ಪಡೆದುಕೊಳ್ಳುತ್ತಿದೆ.  ಈ ಸಮಸ್ಯೆ ಬಗೆ ಹರಿಸೋಕೆ   ವಿಧಾನಸೌಧ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕ್ಕರೆ ಕಾರ್ಖಾನೆ ಮಾಲೀಕರ ಜತೆ  ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರೈತರ ಬೇಡಿಕೆ ಈಡೇರಿಸುವುದರಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಪ್ರಮುಖವಾಗಿವೆ ಮತ್ತು ಕಾರ್ಖಾನೆಗಳ ಜವಾಬ್ದಾರಿಯೂ ಇದೆ. ನಾವು ರೈತರ ಪರವಾಗಿ ನಿಲ್ಲುತ್ತೇವೆ. ರೈತರ ಸಮಸ್ಯೆ ಬಗೆಹರಿಸಲು ನೀವೂ ಸಿದ್ಧರಿರಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಾಂಗ್ ಕಾಂಗ್ ಸಿಕ್ಸಸ್  ಪಂದ್ಯಾವಳಿಯಲ್ಲಿ ಪಾಕ್ ವಿರುದ್ಧ ಗೆದ್ದ ಭಾರತ

ಕಬ್ಬು ಬೆಳೆಗಾರರಿಗೆ ನೆರವಾಗುವುದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜವಾಬ್ದಾರಿಯಾಗಿದೆ. ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು FRF ನಿಗದಿಪಡಿಸುವುದು ಕೇಂದ್ರ ಸರ್ಕಾರದ ಕಾರ್ಯ. ಕೇಂದ್ರ ಸರ್ಕಾರ ದಿನಾಂಕ 6-05-2025ರಲ್ಲಿ ಎಫ್ಆರ್‌ಪಿ ನಿಗದಿಪಡಿಸಿದೆ. ಅದರಲ್ಲಿ ಸಾಗಾಟ ಮತ್ತು ಕಟಾವು ವೆಚ್ಚ ಸಹ ಸೇರಿದೆ. ಸಕ್ಕರೆಯ ಎಂಎಸ್‌ಪಿ ಹೆಚ್ಚಳ ಮಾಡುವಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ನಾವು ಮನವಿ ಸಲ್ಲಿಸಿದ್ದೇವೆ. ಇದೀಗ ಕೇಂದ್ರ ಸರ್ಕಾರ ಸಮಸ್ಯೆ ಹುಟ್ಟು ಹಾಕಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. ಸಕ್ಕರೆ ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್ ಮೇಲೆ ಪ್ರತಿ ಯುನಿಟ್‌ಗೆ 60 ಪೈಸೆ ತೆರಿಗೆ ನಿಗದಿಪಡಿಸುವ ಪ್ರಸ್ತಾವನೆಯನ್ನು ಮರು ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಅವರು ಹೇಳಿದರು.

ಸಕ್ಕರೆ ಕಾರ್ಖಾನೆ ಮಾಲೀಕರ ಪರವಾಗಿ ಮುರುಗೇಶ್ ನಿರಾಣಿ ಮಾತನಾಡಿ, ಎಲ್ಲಾ ಸರ್ಕಾರಗಳಲ್ಲೂ ಕಬ್ಬು ಬೆಳೆಗಾರರ ಸಮಸ್ಯೆ ಮುಂದುವರಿಯುತ್ತಾ ಬಂದಿದೆ. ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದವನ್ನು ರಾಜ್ಯ ಸರ್ಕಾರ ನವೀಕರಣ ಮಾಡಿರುವುದಿಲ್ಲ. ಮಹಾರಾಷ್ಟ್ರದಲ್ಲಿ ಸಕ್ಕರೆ ಕಾರ್ಖಾನೆಯವರಿಂದ ಖರೀದಿಸುವ ವಿದ್ಯುತ್ ಪ್ರತಿ ಯುನಿಟ್‌ಗೆ ರೂ. 6 ಪಾವತಿಸಲಾಗುತ್ತಿದೆ. ಇದೇ ಮಾದರಿಯಲ್ಲಿ ರಾಜ್ಯ ಸರ್ಕಾರ ಒಪ್ಪಂದ ಮಾಡಬೇಕಿದೆ. ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್ ಮೇಲೆ ಪ್ರತಿ ಯುನಿಟ್‌ಗೆ 60 ಪೈಸೆ ತೆರಿಗೆ ನಿಗದಿಪಡಿಸಿರುವುದನ್ನು ಕೈಬಿಡಬೇಕು. ಸಕ್ಕರೆ ಕಾರ್ಖಾನೆಗಳ ನಡುವಿನ ಅಂತರ ಕನಿಷ್ಠ 25 ಕಿ.ಮೀ. ನಿಗದಿಪಡಿಸಬೇಕು. ಏವಿಯೇಷನ್ ಇಂಧನಕ್ಕೆ ಎಥನಾಲ್ ಮಿಶ್ರಣ ಅನುಮತಿಯನ್ನು ಆದಷ್ಟು ಬೇಗನೆ ನೀಡುವಂತೆ ಪ್ರಧಾನಿ ಅವರಿಗೆ ಮನವಿ ಮಾಡಬೇಕು. ಪ್ರತಿ ಟನ್‌ಗೆ ಎಫ್‌ಆರ್‌ಪಿ 3,500 ರೂ. ನೀಡಲು ಸಾಧ್ಯವಿಲ್ಲ, ಪ್ರಸ್ತುತ ರೈತರಿಗೆ ಎಫ್ಆರ್‌ಪಿ ಪ್ರಕಾರ ದರ ನೀಡಲಾಗುವುದು. ಹೆಚ್ಚುವರಿ ಆದಾಯ ಸಾಧ್ಯವಾದರೆ ಸೀಸನ್ ಮುಗಿದ ಬಳಿಕ ಅದನ್ನು ರೈತರಿಗೆ ಹಂಚಿಕೆ ಮಾಡಲು ಸಿದ್ಧರಿದ್ದೇವೆ ಎಂದರು.

Kishor KV