ಸುಮಲತಾಗೆ ಮಂಡ್ಯದ ಬಿಜೆಪಿ ಟಿಕೆಟ್ ಡೌಟ್! – ಬಿ.ವೈ. ವಿಜಯೇಂದ್ರ ಮಾತುಕತೆ ಸಾಧ್ಯತೆ
ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಈಗಾಗಲೇ ಎಲ್ಲಾ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಸದ್ಯ ಮಂಡ್ಯ ಲೋಕಸಭಾ ಕ್ಷೇತ್ರ ಭಾರಿ ಕೂತೂಹಲ ಮೂಡಿಸಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ಮಂಡ್ಯ ಟಿಕೆಟ್ ಜೆಡಿಎಸ್ಗೆ ಹೋಗಲಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿಯಿಂದ ಟಿಕೆಟ್ ಸಿಗುವುದು ಡೌಟ್ ಆಗಿದೆ. ಹೀಗಾಗಿ ಸುಮಲತಾ ಅಂಬರೀಶ್ ಅವರು ಅಸಮಾಧಾನಗೊಂಡಿದ್ದಾರೆ.
ಇದನ್ನೂ ಓದಿ: ಸಂಸತ್‌ನಲ್ಲಿ ಭದ್ರತಾ ಲೋಪ ಪ್ರಕರಣ – ಮೈಸೂರಿನ ಮನೋರಂಜನ್ ಸೇರಿ ಐವರಿಗೆ ಮಂಪರು ಪರೀಕ್ಷೆ!
ಹೌದು, ಬಿಜೆಪಿ – ಜೆಡಿಎಸ್ ಮೈತ್ರಿ ಮಾಡಿಕೊಂಡ ನಂತರ ಮಂಡ್ಯ ಲೋಕಸಭಾ ಕ್ಷೇತ್ರ ಭಾರಿ ಕುತೂಹಲ ಮೂಡಿಸಿದೆ. ಮೈತ್ರಿ ಬಳಿಕ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಸಿಗೋದು ಡೌಟ್. ಹೀಗಾಗಿ ಅವರು ಪತ್ತೆ ಪಕ್ಷೇತರವಾಗಿ ಸ್ವರ್ಧೆ ಮಾಡಲು ಮುಂದಾಗಿದ್ದಾರೆ. ಸಂಸದೆಯಾದ ನಂತರ ಸುಮಲತಾ ಅವರು ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಆದರೆ ಈಗ ಟಿಕೆಟ್ ಸಿಗದಿರೋ ಹಿನ್ನೆಲೆ ಬಿಜೆಪಿ ಮೇಲೆ ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ರನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿಯಾಗುವ ಸಾಧ್ಯತೆ ಇದೆ.
ಬಿ.ವೈ. ವಿಜಯೇಂದ್ರ ಎರಡು ಮೂರು ದಿನಗಳಲ್ಲಿ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ವಿಜಯೇಂದ್ರ ಭೇಟಿ ವೇಳೆ ಮಂಡ್ಯ ಲೋಕಸಭೆ ಕ್ಷೇತ್ರ ಟಿಕೆಟ್ ನೀಡುವಂತೆ ಸುಮಲತಾ ಅವರು ಡಿಮ್ಯಾಂಡ್ ಮಾಡುವ ಸಾಧ್ಯತೆ ಇದೆ. ಈಗಾಗಲೇ ಬಿಜೆಪಿ ಜೆಡಿಎಸ್ ಮೈತ್ರಿಯಾಗಿದ್ದು ಬಹುತೇಕ ಜೆಡಿಎಸ್ ಗೆ ಮಂಡ್ಯ ಕ್ಷೇತ್ರ ಟಿಕೆಟ್ ನೀಡಲು ಬಿಜೆಪಿ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಸುಮಲತಾ ಜೊತೆ ಚರ್ಚೆ ನಡೆಸಿ ಬಿಜೆಪಿ ಜೊತೆಗೆ ಇರುವಂತೆ ಮಾತುಕತೆ ನಡೆಸಲಿದ್ದಾರೆ.