ಮಂಡ್ಯ ಅಖಾಡದಿಂದ ಹಿಂದೆ ಸರಿದ ಸುಮಲತಾ – ಕಡೇ ಕ್ಷಣದಲ್ಲಿ ಹೆಚ್‌ಡಿಕೆ ಪರ ಪ್ರಚಾರ ಕ್ಯಾನ್ಸಲ್!
ಮಂಡ್ಯ ಲೋಕಸಭಾ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರವಾಗಿದೆ. ಮಂಡ್ಯ ಕಣದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಹೆಚ್‌ಡಿ ಕುಮಾರಸ್ವಾಮಿ ಅವರು ಕಣಕ್ಕೆ ಇಳಿದಿದ್ದಾರೆ. ಬುಧವಾರ ಹೆಚ್‌ಡಿಕೆ ಪರ ಸುಮಲತಾ ಪ್ರಚಾರ ನಡೆಸಲಿದ್ದಾರೆ ಎಂದು ಹೇಳಲಾಗಿತ್ತು. ಆದ್ರೆ ಇದೀಗ ಸುಮಲತಾ ಅವರ ಮಂಡ್ಯ ಪ್ರಚಾರ ರದ್ದಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಬರ ಪರಿಹಾರ ಶೀಘ್ರವೇ ಬಿಡುಗಡೆ ಮಾಡಿ – ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ಧರಾಮಯ್ಯ, ಸಚಿವರಿಂದ ಪ್ರತಿಭಟನೆ
ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರವಾಗಿ ನಿಂತಿದ್ದ ಸುಮಲತಾಗೆ ಬಿಜೆಪಿ ಬೆಂಬಲ ನೀಡಿತ್ತು. ಈ ಬಾರಿ ಸುಮಲತಾ ಮಂಡ್ಯ ಟಿಕೆಟ್ ಆಕಾಂಕ್ಷಿ ಆಗಿದ್ದರು. ಆದರೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡಲಾಗಿದೆ. ಬಳಿಕ ಸುಮಲತಾ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಿಜೆಪಿಗೆ ಸೇರಿದ ಬಳಿಕ ಸುಮಲತಾ ಇಲ್ಲಿಯವರೆಗೆ ಹೆಚ್‌ಡಿಕೆ ಜೊತೆ ಪ್ರಚಾರದಲ್ಲಿ ಕಾಣಿಸಿಲ್ಲ. ಸುಮಲತಾ ನಡೆ ಬಗ್ಗೆ ಜೆಡಿಎಸ್ ನಾಯಕರು ಅಸಮಧಾನಗೊಂಡಿದ್ದರು. ಲೋಕಸಭಾ ಚುನಾವಣೆಯಲ್ಲಿ ಬುಧವಾರ ಮೈತ್ರಿ ಅಭ್ಯರ್ಥಿ ಹೆಚ್‌ಡಿ ಕುಮಾರಸ್ವಾಮಿ ಪರ ಸುಮಲತಾ ಮತಯಾಚನೆ ಮಾಡುವ ಕಾರ್ಯಕ್ರಮ ಮಂಗಳವಾರ ನಿಗದಿಯಾಗಿತ್ತು. ಆದರೆ ಇದೀಗ ಸುಮಲತಾ ಪ್ರಚಾರ ರದ್ದಾಗಿದೆ.
ಬುಧವಾರ ಮಂಡ್ಯದಲ್ಲಿ ನಡೆಸಬೇಕಿದ್ದ ಪ್ರಚಾರದ ಬಗ್ಗೆ ಪಕ್ಷದಿಂದ ಯಾವುದೇ ಸ್ಪಷ್ಟ ನಿರ್ಧಾರ ತಿಳಿಸದ ಕಾರಣ ರದ್ದಾಗಿದೆ. ಮಂಡ್ಯಕ್ಕೆ ತೆರಳದೇ ಬೆಂಗಳೂರಲ್ಲಿ ಸುಮಲತಾ ಅಂಬರೀಶ್ ಉಳಿದಿದ್ದಾರೆ ಎಂದು ಮೂಲಗಳು ತಿಳಿಸಿವೆ.