ಬಿಜೆಪಿ ವರಿಷ್ಠರು ಒಪ್ಪಿದ್ರೆ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ – ರಾಜ್ಯ ರಾಜಕೀಯಕ್ಕೆ ಬರಲು ಸುಮಲತಾ ಇಂಗಿತ!

ಬಿಜೆಪಿ ವರಿಷ್ಠರು ಒಪ್ಪಿದ್ರೆ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ – ರಾಜ್ಯ ರಾಜಕೀಯಕ್ಕೆ ಬರಲು ಸುಮಲತಾ ಇಂಗಿತ!

ಸ್ವಾಭಿಮಾನದ ಅಸ್ತ್ರ ಪ್ರಯೋಗಿಸಿ ಮಂಡ್ಯ ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾಗಿದ್ದ ಸುಮಲತಾ ಅಂಬರೀಶ್ ಈಗ ವಿಧಾನಸಭಾ ಚುನಾವಣೆಯಲ್ಲೂ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗಷ್ಟೇ ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದ್ದ ಸುಮಲತಾ ಇಂದು ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಇಂಥಾದ್ದೊಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ : ಸೋಮವಾರವೇ ಶುಭವೆಂದು ನಾಮಿನೇಷನ್ ಭರಾಟೆ – ಬೆಂಬಲಿಗರ ಜೊತೆ ಘಟಾನುಘಟಿಗಳ ಶಕ್ತಿಪ್ರದರ್ಶನ!

ಈಗಾಗಲೇ ಮೇ 10 ರಂದು ಚುನಾವಣೆ ಘೋಷಣೆಯಾಗಿದ್ದು, ಚುನಾವಣೆಗೆ ತಯಾರಿ ನಡೆಸುತ್ತಿರುವ ಹೊತ್ತಲಿ ಸುಮಲತಾ ಅಂಬರೀಶ್ ಅವರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಬಿಜೆಪಿಯ ವರಿಷ್ಠರು ಸೂಚಿಸಿದರೆ ಬಿಜೆಪಿ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇನೆ. ಮಂಡ್ಯ ಕ್ಷೇತ್ರದಲ್ಲಿ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ವದಂತಿ ಇದೆ. ಪಕ್ಷ ಸೂಚನೆ ನೀಡಿದರೆ ನನ್ನ ಸ್ಪರ್ಧೆ ಇರಲಿದೆ.. ಈವರೆಗೆ ಪಕ್ಷ ನನಗೆ ಯಾವುದೇ ಸೂಚನೆಯನ್ನು ನೀಡಿಲ್ಲ. ಮಂಡ್ಯ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಮರ್ಥರಿದ್ದಾರೆ ಎಂದಿದ್ದಾರೆ. ಹಾಗೇ ಮುಂದಿನ ದಿನಗಳಲ್ಲಿ ಬಿಜೆಪಿ ಪರ ಅಭಿಷೇಕ್ ಪ್ರಚಾರ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಹೈಕಮಾಂಡ್‌ ನಾಯಕರು ಇದುವರೆಗೂ ನನಗೆ ಯಾವುದೇ ಸೂಚನೆಯನ್ನು ನೀಡಿಲ್ಲ. ಮಂಡ್ಯ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಮರ್ಥರಿದ್ದಾರೆ ಎಂದು ಹೇಳಿದ ಅವರು, ಮಂಡ್ಯ ಜಿಲ್ಲೆಯ ಜನರು ಬದಲಾವಣೆ ಬಯಸುತ್ತಿದ್ದಾರೆ. ಹೀಗಾಗಿ ಮಂಡ್ಯ ಜಿಲ್ಲೆಯಲ್ಲಿ ಈ ಬಾರಿ ಅಚ್ಚರಿ ಫಲಿತಾಂಶ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

suddiyaana