ಅಮಿತ್ ಶಾ ವಿರುದ್ಧ ‘ಆಕ್ಷೇಪಾರ್ಹ’ ಹೇಳಿಕೆ –  ರಾಹುಲ್‌ ಗಾಂಧಿಗೆ ಸಮನ್ಸ್‌ ನೋಟಿಸ್‌ ಜಾರಿ

ಅಮಿತ್ ಶಾ ವಿರುದ್ಧ ‘ಆಕ್ಷೇಪಾರ್ಹ’ ಹೇಳಿಕೆ –  ರಾಹುಲ್‌ ಗಾಂಧಿಗೆ ಸಮನ್ಸ್‌ ನೋಟಿಸ್‌ ಜಾರಿ

ದೇಶದಾದ್ಯಂತ ಈಗಾಗಲೇ 5 ಹಂತದ ಮತದಾನ ಮುಕ್ತಾಯವಾಗಿದೆ. ಇನ್ನು ಎರಡು ಹಂತಗಳ ಚುನಾವಣೆ ಮಾತ್ರ ಬಾಕಿ ಇದೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕೇರಳದ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದು, ಈ ಎರಡು ಕ್ಷೇತ್ರಗಳಲ್ಲಿ ಮತದಾನ ಮುಕ್ತಾಯವಾಗಿದೆ. ಇಷ್ಟು ದಿನ ಚುನಾವಣಾ ಪ್ರಚಾರದಲ್ಲಿ ಬ್ಯೂಸಿಯಾಗಿದ್ದು, ವಿರಾಮ ತೆಗೆದುಕೊಳ್ಳೋಣ ಅಂದುಕೊಳ್ಳುವಷ್ಟರಲ್ಲಿ  ರಾಹುಲ್‌ ಗಾಂಧಿಗೆ ಬಿಗ್‌ ಶಾಕ್‌ ಎದುರಾಗಿದೆ. ರಾಹುಲ್‌ ಗಾಂಧಿ ವಿರುದ್ಧ ಸಮಸ್ಸ್‌ ಜಾರಿ ಆಗಿದೆ.

ಇದನ್ನೂ ಓದಿ: ಬಂದ್ರೆ ಬರ್ತಾರೆ.. ಡಿಸಿಎಂ ವಿರುದ್ದ ಸಿಎಂ ಗರಂ – ಡಿಕೆಶಿಗೆ ಕಾಯದೇ ಕಾರ್ಯಕ್ರಮ ಪ್ರಾರಂಭಿಸಿದ ಸಿದ್ದರಾಮಯ್ಯ

2018ರ ಕಾಂಗ್ರೆಸ್ ಸಮಾವೇಶದಲ್ಲಿ ರಾಹುಲ್ ಗಾಂಧಿ ಅವರು ಅಮಿತ್ ಶಾ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಗೃಹ ಸಚಿವ ಅಮಿತ್ ಶಾ ವಿರುದ್ಧ ಹೇಳಿಕೆ ನೀಡಿರುವದನ್ನು ವಿರೋಧಿಸಿ ಬಿಜೆಪಿ ಮುಖಂಡ ನವೀನ್ ಝಾ ಅವರು ರಾಂಚಿ ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್ ಗಾಂಧಿ ಅವರಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.  ಜೂನ್ 11 ರಂದು ವಿಚಾರಣೆ ನಡೆಯಲಿದ್ದು, ರಾಹುಲ್ ಗಾಂಧಿಯಿಂದ ಉತ್ತರ ಕೇಳಲಾಗಿದೆ.

ಈ ಪ್ರಕರಣದ ಸಾಕ್ಷ್ಯ ಮತ್ತು ವಿಚಾರಣೆ ಬಳಿಕ ಕಾಂಗ್ರೆಸ್ ರಾಹುಲ್ ಗಾಂಧಿಗೆ ಈಗಾಗಲೇ ಸಮನ್ಸ್ ಜಾರಿ ಮಾಡಲಾಗಿದೆ. ಮತ್ತೊಂದೆಡೆ ಅದೇ ಸಮಯದಲ್ಲಿ, ರಾಹುಲ್ ಗಾಂಧಿ ಅವರು ಜಾರ್ಖಂಡ್ ಹೈಕೋರ್ಟ್‌ನಲ್ಲಿ ಕೆಳ ನ್ಯಾಯಾಲಯದ ಸಮನ್ಸ್ ಅನ್ನು ಪ್ರಶ್ನಿಸಿದ್ದರು, ಅದನ್ನು ಹೈಕೋರ್ಟ್ ತಿರಸ್ಕರಿಸಿತ್ತು.

Shwetha M