ರಾಜಸ್ಥಾನಕ್ಕೆ ಹೀನಾಯ ಸೋಲು – 36 ರನ್‌ಗಳ ಜಯ, ಫೈನಲಿಗೆ ಹೈದರಾಬಾದ್
IPL ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ ಭರ್ಜರಿ ಗೆಲುವು ಸಾಧಿಸಿದೆ. ರಾಜಸ್ಥಾನದ ವಿರುದ್ಧ ಹೈದರಾಬಾದ್ ತಂಡ 36 ರನ್‌ಗಳಿಂದ ಗೆದ್ದು ಫೈನಲ್ ಪ್ರವೇಶಿಸಿದೆ.
ಚೆನ್ನೈನ ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ರೋಚಕ ಹಣಾಹಣಿಯಲ್ಲಿ, ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ರಾಜಸ್ಥಾನ್ ರಾಯಲ್ಸ್ SRH ಸ್ಟಾರ್ ಆಟಗಾರರನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿತ್ತು. ಮೊದಲು ಬ್ಯಾಟ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತ್ತು.
ಇದನ್ನೂ ಓದಿ: ರಾಜ್ಯದ ಮದ್ಯ ಪ್ರಿಯರಿಗೆ ಬಿಗ್ ಶಾಕ್ – ಜೂನ್ ಮೊದಲ ವಾರ ಮದ್ಯ ಸಿಗಲ್ಲ!
176 ರನ್ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಒಳ್ಳೆಯ ಆರಂಭವನ್ನೇ ಹೊಂದಿತ್ತು. 3 ಸಿಕ್ಸರ್ 4 ಬೌಂಡರ್ ಸಿಡಿಸಿದ ಯಶಸ್ವಿ ಜೈಸ್ವಾಲ್ RR ತಂಡಕ್ಕೆ ಒಳ್ಳೆ ಅಡಿಪಾಯ ಹಾಕಿದರು. ಆದರೆ ಜೈಸ್ವಾಲ್ ಔಟಾದ ಬಳಿಕ ಯಾವಾಬ್ಬ ಆಟಗಾರರು ಕ್ರೀಸ್‌ನಲ್ಲಿ ಹೆಚ್ಚು ಹೊತ್ತು ನಿಲ್ಲಲಿಲ್ಲ. ಧ್ರುವ್ ಜುರೆಲ್ ಅವರು 56 ರನ್ ಸಿಡಿಸಿದರೂ ಏಕಾಂಗಿ ಹೋರಾಟ ವ್ಯರ್ಥವಾಯಿತು.
139 ರನ್‌ಗೆ 7 ವಿಕೆಟ್ ಕಳೆದುಕೊಂಡ ರಾಜಸ್ಥಾನ್ ರಾಯಲ್ಸ್ ಸೋಲಿನೊಂದಿಗೆ ಐಪಿಎಲ್ ಟೂರ್ನಿಯಿಂದಲೇ ಹೊರ ನಡೆದಿದೆ. 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್ ಸೀಸನ್ 17ರ ಫೈನಲ್ ತಲುಪಿದೆ. ಇದೇ ಮೇ 26ರಂದು ಐಪಿಎಲ್ ಮೆಗಾ ಫೈನಲ್ ನಡೆಯಲಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಹೋರಾಟ ನಡೆಸಲಿದೆ.
ಚೆನ್ನೈ ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಗೆಲ್ಲುತ್ತಿದ್ದಂತೆ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. SRH ಮಾಲೀಕರಾದ ಕಾವ್ಯ ಮಾರನ್ ಸ್ಟೇಡಿಯಂನಲ್ಲೇ ಕುಣಿದು ಕುಪ್ಪಳಿಸಿ ತಮ್ಮ ಸಂತಸ ವ್ಯಕ್ತಪಡಿಸಿದ್ದಾರೆ. ತಮ್ಮ ತಂಡ ಫೈನಲ್ ಪ್ರವೇಶಿಸಿರುವುದಕ್ಕೆ ಸನ್‌ರೈಸರ್ಸ್ ಹೈದರಾಬಾದ್ ತಂಡ 2016, 2018ರ ಬಳಿಕ 2024ರಲ್ಲೂ ಕಪ್ ಗೆಲ್ಲುವ ವಿಶ್ವಾಸದಲ್ಲಿದೆ