ಅಮಿತ್ ಶಾ ಕಾರ್ಯಕ್ರಮದಲ್ಲಿ ಬಿಸಿಲಿನ ತಾಪಕ್ಕೆ 11 ಮಂದಿ ಸಾವು – 120 ಕ್ಕೂ ಹೆಚ್ಚು ಜನ ಅಸ್ವಸ್ಥ

ಅಮಿತ್ ಶಾ ಕಾರ್ಯಕ್ರಮದಲ್ಲಿ ಬಿಸಿಲಿನ ತಾಪಕ್ಕೆ 11 ಮಂದಿ ಸಾವು – 120 ಕ್ಕೂ ಹೆಚ್ಚು ಜನ ಅಸ್ವಸ್ಥ

ಮುಂಬೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ನವಿ ಮುಂಬೈನಲ್ಲಿ ನಡೆದ ‘ಮಹಾರಾಷ್ಟ್ರ ಭೂಷಣ್’ ಪ್ರಶಸ್ತಿ ಸಮಾರಂಭದ ವೇಳೆ ಸುಮಾರು 11 ಮಂದಿ ಬಿಸಿಲಿನ ತಾಪಕ್ಕೆ ಬಲಿಯಾಗಿದ್ದಾರೆ ಅಂತಾ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ ಹೆಚ್ಚಾಯ್ತು ಕೊರೊನಾ ಕೇಸ್ – 60 ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣ

ನವಿ ಮುಂಬೈನಲ್ಲಿ ಸರ್ಕಾರದಿಂದ ಸಾಮಾಜಿಕ ಕಾರ್ಯಕರ್ತ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಭಾನುವಾರ ಖಾರ್ಘರ್‌ನ ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆದಿತ್ತು. 306 ಎಕರೆ ವಿಸ್ತಾರವಾದ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಪ್ಪಾಸಾಹೇಬ್ ಧರ್ಮಾಧಿಕಾರಿಯ ಲಕ್ಷಾಂತರ ಅಭಿಮಾನಿಗಳು ಭಾಗವಹಿಸಿದ್ದರು. ಈ ಹಿನ್ನೆಲೆಯಲ್ಲಿ ಮೈದಾನದಲ್ಲಿ ಜನರಿಗೆ ಕಾರ್ಯಕ್ರಮ ವೀಕ್ಷಿಸಲು ಆಡಿಯೋ ಹಾಗೂ ವೀಡಿಯೋ ವ್ಯವಸ್ಥೆಯನ್ನು ಮಾಡಲಾಗಿತ್ತು. ಆದರೆ ಪ್ರೇಕ್ಷಕರಿಗೆ ಯಾವುದೇ ರೀತಿಯ ಆಸನ ವ್ಯವಸ್ಥೆಯಾಗಲಿ ಹಾಗೂ ಶೆಡ್‍ಗಳ ವ್ಯವಸ್ಥೆಯೂ ಇರಲಿಲ್ಲ. ಇವೆಲ್ಲದರ ಮಧ್ಯೆ ದಿನದ ತಾಪಮಾನ ಗರಿಷ್ಠ 38 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಈ ಬಿಸಿಲಿನ ಝಳ ತಾಳಲಾರದೇ ಕಾರ್ಯಕ್ರಮದಲ್ಲಿ ನೆರೆದಿದ್ದ 11 ಮಂದಿ ಸಾವನ್ನಪ್ಪಿದ್ದಾರೆ. 120 ಕ್ಕೂ ಹೆಚ್ಚು ಜನರಲ್ಲಿ ಡಿಹೈಡ್ರೇಶನ್ ಹಾಗೂ ಶಾಖ-ಸಂಬಂಧಿತ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. 50ಕ್ಕೂ ಹೆಚ್ಚು ಜನರನ್ನು ವಿವಿಧ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಆಸ್ಪತ್ರೆಗೆ ತೆರಳಿದ್ದು, ರೋಗಿಗಳಿಗೆ ಧೈರ್ಯ ತುಂಬಿದ್ದಾರೆ. ಈ ಬಗ್ಗೆ ಮಾತನಾಡಿ, ಘಟನೆಯು ದುರದೃಷ್ಟಕರವಾಗಿದ್ದು, ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಅಂತಾ ಘೋಷಿಸಿದ್ದಾರೆ.

suddiyaana