ಮುಸ್ಲಿಮರ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಂ ತಡೆ – ಚುನಾವಣೆ ಹೊಸ್ತಿಲಲ್ಲೇ ರಾಜ್ಯ ಸರ್ಕಾರಕ್ಕೆ ಶಾಕ್!

ಮುಸ್ಲಿಮರ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಂ ತಡೆ – ಚುನಾವಣೆ ಹೊಸ್ತಿಲಲ್ಲೇ ರಾಜ್ಯ ಸರ್ಕಾರಕ್ಕೆ ಶಾಕ್!

ಕರ್ನಾಟಕ ವಿಧಾನಸಭಾ ಚುನಾವಣಾ ಕಾವು ಜೋರಾಗಿದೆ. ಈಗಾಗ್ಲೇ ಮೂರೂ ಪಕ್ಷದ ನಾಯಕರು ಚುನಾವಣಾ ಪ್ರಚಾರ ಶುರು ಮಾಡಿದ್ದಾರೆ. ರಾಜಕೀಯ ಮೇಲಾಟದ ನಡುವೆಯೇ ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ಎದುರಾಗಿದೆ. ಮುಸ್ಲಿಂ ಸಮುದಾಯದ 2ಬಿ ಮೀಸಲಾತಿ ರದ್ದುಪಡಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ರಾಜ್ಯ ಸರ್ಕಾರದ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮೇ 9ಕ್ಕೆ ಮುಂದೂಡಿದೆ. ಇದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದ ನಿರ್ಧಾರ ಜಾರಿಗೆ ಬಿದ್ದಿರುವ ಅಂಕುಶ ಮುಂದುವರಿದಿದೆ. ಮುಸ್ಲಿಮರಿಗೆ 4% ಒಬಿಸಿ ಮೀಸಲಾತಿಯನ್ನು ರದ್ದುಗೊಳಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 9 ಕ್ಕೆ ಮುಂದೂಡಿದೆ. ಈ ಆದೇಶದ ಆಧಾರದ ಮೇಲೆ ಮೇ 9 ರವರೆಗೆ ಯಾವುದೇ ಪ್ರವೇಶ ಅಥವಾ ನೇಮಕಾತಿ ನಡೆಯುವುದಿಲ್ಲ ಎಂದು ಕರ್ನಾಟಕ ಸರ್ಕಾರ ಮತ್ತೊಮ್ಮೆ ಭರವಸೆ ನೀಡಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಕೆ.ಎಂ ಜೋಸೆಫ್ ನೇತೃತ್ವದ ಪೀಠ ಆದೇಶ ನೀಡಿದೆ. ಮುಸ್ಲಿಮರ 2 ಬಿ ಮೀಸಲಾತಿಯನ್ನು ರದ್ದುಗೊಳಿಸಿದ್ದ ರಾಜ್ಯ ಬಿಜೆಪಿ ಸರ್ಕಾರ ಸಮುದಾಯವನ್ನು ಆರ್ಥಿಕ ಹಿಂದುಳಿದ ವರ್ಗಗಳಿಗೆ ಸೇರಿಸಿತ್ತು. ಮುಸ್ಮಿಮರಿಂದ ತೆಗೆದುಕೊಂಡ ಮೀಸಲಾತಿಯನ್ನು ರಾಜ್ಯದ ಪ್ರಬಲ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳಿಗೆ ಸಮಾನವಾಗಿ ಹಂಚಿತ್ತು.

ಸುಪ್ರೀಂ ಕೋರ್ಟ್ ಆದೇಶದಿಂದಾಗಿ ಲಿಂಗಾಯತ, ಒಕ್ಕಲಿಗ ಮೀಸಲಾತಿ ಹೆಚ್ಚಳದ ಮೇಲೆ ಪರಿಣಾಮ ಬೀಳುವ ಸಾಧ್ಯತೆ ಇದೆ. ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಈ ಸಮುದಾಯಗಳ ಮತಗಳನ್ನು ಸೆಳೆಯಲು ಬಿಜೆಪಿ ಸರ್ಕಾರ ಮುಸ್ಲಿಮರ ಮೀಸಲಾತಿಗೆ ಕೈ ಹಾಕಿತ್ತು. ಆದರೆ, ಅದಕ್ಕೆ ಸುಪ್ರೀಂ ಕೋರ್ಟ್ ಭಾರೀ ಶಾಕ್ ನೀಡಿದೆ.

suddiyaana