ರಾಜೀವ್ ಗಾಂಧಿ ಹತ್ಯೆ ಪ್ರಕರಣ: ಹಂತಕರನ್ನು ಬಿಡುಗಡೆ ಮಾಡಲು ಸುಪ್ರೀಂಕೋರ್ಟ್ ಆದೇಶ

ರಾಜೀವ್ ಗಾಂಧಿ ಹತ್ಯೆ ಪ್ರಕರಣ: ಹಂತಕರನ್ನು ಬಿಡುಗಡೆ ಮಾಡಲು ಸುಪ್ರೀಂಕೋರ್ಟ್ ಆದೇಶ

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಆರೋಪಿಗಳನ್ನು ಜೈಲಿನಿಂದ ಬಿಡುಗಡೆ ಮಾಡಬೇಕು ಎಂದು ಸುಪ್ರೀಂಕೋರ್ಟ್ ಶುಕ್ರವಾರ ಆದೇಶ ನೀಡಿದೆ.

ಇದನ್ನೂ ಓದಿ: ರಷ್ಯಾ ಅಧ್ಯಕ್ಷ ಪುಟಿನ್‌ಗೆ ಹತ್ಯೆಯ ಭೀತಿ ?

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಗೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗಳಾದ ನಳಿನಿ ಶ್ರೀಹರನ್  ಮತ್ತು ಆರ್‌ಪಿ ರವಿಚಂದ್ರನ್ ಅವರನ್ನು ಅವಧಿಗೂ ಮೊದಲೇ ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಶಿಫಾರಸು ಮಾಡಿತ್ತು. ನಾವು ಈಗಾಗಲೇ 30 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಿದ್ದೇವೆ. ರಾಜೀವ್ ಗಾಂಧಿಯ ಕೊಲೆಯ 7 ಅಪರಾಧಿಗಳ ಶಿಕ್ಷೆಯ ಅವಧಿಯನ್ನು ಕಡಿಮೆ ಮಾಡಲು ತಮಿಳುನಾಡು ಸರ್ಕಾರ 4 ವರ್ಷಗಳ ಹಿಂದೆಯೇ ಒಪ್ಪಿಕೊಂಡಿತ್ತು ಎಂದು ಅಪರಾಧಿಗಳಾದ ಎಸ್​ ನಳಿನಿ ಮತ್ತು ಆರ್​ಪಿ ರವಿಚಂದ್ರನ್ ತಮ್ಮ ಅರ್ಜಿಯಲ್ಲಿ ತಿಳಿಸಿದ್ದರು.

ಅವಧಿಗೆ ಮೊದಲೇ ತಮ್ಮನ್ನು ಜೈಲಿನಿಂದ ಬಿಡುಗಡೆ ಮಾಡಬೇಕೆಂದು ಕೋರಿ ರಾಜೀವ್ ಗಾಂಧಿ ಹಂತಕರು ಸುಪ್ರೀಂ ಕೋರ್ಟ್​ನಲ್ಲಿ ಸಲ್ಲಿಸಿರುವ ಅರ್ಜಿಗೆ ತಮಿಳುನಾಡು ಸರ್ಕಾರ ಬೆಂಬಲ ನೀಡಿದೆ. ತಮ್ಮ ಸಹ ಅಪರಾಧಿ ಎಜಿ ಪೆರಾರಿವಾಲನ್ ಅವರನ್ನು ಬಿಡುಗಡೆ ಮಾಡಿದಂತೆ ತಮ್ಮನ್ನೂ ಬಿಡುಗಡೆ ಮಾಡುವಂತೆ ಕೋರಿ ನಳಿನಿ ಮತ್ತು ರವಿಚಂದ್ರನ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಮನವಿ ಮೇರೆಗೆ ಹಂತಕಿ ನಳಿನಿ ಶ್ರೀಹರನ್ ಸೇರಿದಂತೆ ಆರು ಹಂತಕರನ್ನು ಬಿಡುಗಡೆ ಮಾಡಬೇಕೆಂದು ಆದೇಶ ನೀಡಿದೆ.

1991ರ ಮೇ 21ರ ರಾತ್ರಿ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ರ್ಯಾಲಿಯಲ್ಲಿ ಧನು ಎಂಬ ಮಹಿಳಾ ಆತ್ಮಾಹುತಿ ಬಾಂಬರ್‌ ಮಾಜಿ ಪ್ರಧಾನಿ ರಾಜೀವ್ ಗಾಂಧಿಯನ್ನು ಹತ್ಯೆ ಮಾಡಿದ್ದರು. ಇದೀಗ ಮಾಜಿ ಪ್ರಧಾನಿಯನ್ನು ಹತ್ಯೆ ಮಾಡಿದ ಅಪರಾಧಿಗಳನ್ನು ಇಂದು ಬಿಡುಗಡೆಗೊಳಿಸುವಂತೆ ಆದೇಶವನ್ನು ಸುಪ್ರೀಂ ಆದೇಶ ನೀಡಿದೆ.

suddiyaana