ಸುಪ್ರೀಂಗೆ ಐವರು ನೂತನ ನ್ಯಾಯಾಧೀಶರ ನೇಮಕ – ಇನ್ನೆಷ್ಟು ಹುದ್ದೆಗಳು ಬಾಕಿ!?

ಸುಪ್ರೀಂಗೆ ಐವರು ನೂತನ ನ್ಯಾಯಾಧೀಶರ ನೇಮಕ – ಇನ್ನೆಷ್ಟು ಹುದ್ದೆಗಳು ಬಾಕಿ!?

ಸುಪ್ರೀಂ ಕೋರ್ಟ್​ಗೆ ಐವರು ನೂತನ ನ್ಯಾಯಾಧೀಶರು ನೇಮಕಗೊಂಡಿದ್ದಾರೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಐವರು ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.

ಇದನ್ನೂ ಓದಿ : ಚುನಾವಣಾ ಹೊಸ್ತಿಲಲ್ಲೇ ಪ್ರಧಾನಿ ಮೋದಿ ರೌಂಡ್ಸ್ –  ಬಿಜೆಪಿ ನಾಯಕರಿಗೆ ‘ಬೂಸ್ಟರ್’ ಡೋಸ್!

ಸುಪ್ರೀಂ ಕೋರ್ಟ್ ಆವರಣದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ಈ ವೇಳೆ ಐವರು ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್, ಸಂಜಯ್ ಕರೋಲ್, ಪಿ ವಿ ಸಂಜಯ್ ಕುಮಾರ್, ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಮನೋಜ್ ಮಿಶ್ರಾ ಅವರು ಪ್ರಮಾಣ ವಚನ ಸ್ವೀಕರಿಸಿದರು. ಮೂವರು  ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಹೈಕೋರ್ಟ್‌ನ ಇಬ್ಬರು ಹಿರಿಯ ನ್ಯಾಯಮೂರ್ತಿಗಳು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.

ಸುಪ್ರೀಂ ಕೋರ್ಟ್‌ನ ನೂತನ ಕಟ್ಟಡದ ಸಭಾಂಗಣದಲ್ಲಿ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ಅವರು ಪ್ರಮಾಣ ವಚನ ಬೋಧಿಸಿದರು. ಐವರು ಪ್ರಮಾಣವಚನ ಸ್ವೀಕರಿಸುವ ಮೂಲಕ ನ್ಯಾಯಮೂರ್ತಿಗಳ ಒಟ್ಟು ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಸದ್ಯ ಸುಪ್ರೀಂ ಕೋರ್ಟ್‌ಗೆ ಮಂಜೂರಾಗಿರುವ ನ್ಯಾಯಮೂರ್ತಿಗಳ ಸ್ಥಾನ 34 ಇದ್ದು ಇನ್ನೂ ಎರಡು ಹುದ್ದೆಗಳು ಬಾಕಿ ಇವೆ.

ನೂತನವಾಗಿ ನೇಮಕಗೊಂಡಿರುವ ಐವರು ನ್ಯಾಯಮೂರ್ತಿಗಳ ಹೆಸರನ್ನು ಸುಪ್ರೀಂ ಕೋರ್ಟ್‌ನ ಆರು ಸದಸ್ಯರ ಕೊಲಿಜಿಯಂ ಕಳೆದ ವರ್ಷ ಡಿಸೆಂಬರ್‌ 13ರಂದು ಶಿಫಾರಸು ಮಾಡಿತ್ತು.

suddiyaana