ಕುಸ್ತಿಪಟುಗಳ ಹೋರಾಟಕ್ಕೆ ಸಿಕ್ಕಿತು ‘ಬಲ’ – ದೆಹಲಿ ಪೊಲೀಸರಿಗೆ ಸುಪ್ರೀಂಕೋರ್ಟ್ ನೋಟಿಸ್

ಕುಸ್ತಿಪಟುಗಳ ಹೋರಾಟಕ್ಕೆ ಸಿಕ್ಕಿತು ‘ಬಲ’ – ದೆಹಲಿ ಪೊಲೀಸರಿಗೆ ಸುಪ್ರೀಂಕೋರ್ಟ್ ನೋಟಿಸ್

ಭಾರತದ ಕುಸ್ತಿಪಟುಗಳ ಹೋರಾಟಕ್ಕೆ ಈಗ ದೊಡ್ಡ ಬಲ ಸಿಕ್ಕಿದೆ. ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ವಿಷಯಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್​​ ನೋಟಿಸ್​​ ನೀಡಿದೆ.

ಇದನ್ನೂ ಓದಿ: ಲೈಂಗಿಕ ಕಿರುಕುಳದ ಆರೋಪ – ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷರ ತಲೆದಂಡ ಸಾಧ್ಯತೆ

ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ವಿಷಯಕ್ಕೆ ಸಂಬಂಧಿಸಿದಂತೆ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಮುಂದುವರಿಸಿದ್ದಾರೆ. ಇದರ ಜತೆಗೆ ವಿನೇಶ್ ಫೋಗಟ್ ಸೇರಿದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳು ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು, ಇದೀಗ ಈ ವಿಚಾರವಾಗಿ ಈ ಆರೋಪಗಳನ್ನು “ಗಂಭೀರ ವಿಚಾರ ಎಂದು ಸುಪ್ರೀಂ ಕೋರ್ಟ್ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ಇದೆ ಶುಕ್ರವಾರ ವಿಚಾರಣೆ ನಡೆಯಲಿದೆ ಎಂದು ಹೇಳಲಾಗಿದೆ.

ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್​ ಭೂಷಣ್ ವಿರುದ್ಧ ಮಹಿಳಾ ಕುಸ್ತಿ ಪಟುಗಳು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರು. ಆದರೂ ಇದುವರೆಗೂ ಬ್ರಿಜ್ ಭೂಷಣ್ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ. ಕುಸ್ತಿ ಒಕ್ಕೂಟದ ಅಧ್ಯಕ್ಷ ಸ್ಥಾನದಿಂದಲೂ ಅವರನ್ನ ಕೆಳಗಿಳಿಸಿಲ್ಲ. ತಮ್ಮ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಕುಸ್ತಿ ಪಟುಗಳು ಮತ್ತೆ ಹೋರಾಟಕ್ಕಿಳಿದಿದ್ದಾರೆ. ದೆಹಲಿಯ ಜಂತರ್​​ಮಂತರ್​ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿ ಪಟುಗಳು, ಬ್ರಿಜ್​ ಭೂಷಣ್ ವಿರುದ್ಧ ಕೇಸ್ ದಾಖಲಾಗೋವರೆಗೂ ಹೋರಾಡೋದಾಗಿ ಪಟ್ಟು ಹಿಡಿದಿದ್ದಾರೆ. ಇನ್ನು ಈ ಬಾರಿ ನಮ್ಮ ಪ್ರತಿಭಟನೆಯಲ್ಲಿ ಬಿಜೆಪಿ, ಕಾಂಗ್ರೆಸ್, ಆಪ್ ಸೇರಿದಂತೆ ಯಾವ ಪಕ್ಷಗಳು ಬೇಕಾದ್ರೂ ಭಾಗಿಯಾಗಬಹುದು ಅಂತಾ ಕುಸ್ತಿ ಪಟು ಭಜರಂಗ್ ಪೂನಿಯಾ ಹೇಳಿದ್ದಾರೆ. ಕಳೆದ ಜನವರಿಯಲ್ಲಿ ಐವರು ಮಹಿಳಾ ಕುಸ್ತಿ ಪಟುಗಳು ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ರು. ಕ್ರೀಡಾ ಸಚಿವಾಲಯ ಐವರು ಸದಸ್ಯರ ಸಮತಿ ರಚಿಸಿ ಆರೋಪದ ಬಗ್ಗೆ ತನಿಖೆ ನಡೆಸಿ ಒಂದು ತಿಂಗಳಲ್ಲಿ ವರದಿ ನೀಡೋದಾಗಿ ಭರವಸೆ ಕೊಟ್ಟಿತ್ತು. ಆದ್ರೆ ಇನ್ನೂ ಕೂಡ ತನಿಖಾ ವರದಿ ಬಹಿರಂಗವಾಗಿಲ್ಲ.

suddiyaana