ಕರ್ನಾಟಕದ ನಾಲ್ಕು ಜನ ಸೇರಿ ಒಟ್ಟು 7 ಜನ ಕೋರ್ಟ್ ನ್ಯಾಯಮೂರ್ತಿಗಳ ವರ್ಗಾವಣೆ

ಕರ್ನಾಟಕದ ನಾಲ್ಕು ಜನ ಸೇರಿ ಒಟ್ಟು 7 ಜನ ಕೋರ್ಟ್ ನ್ಯಾಯಮೂರ್ತಿಗಳ ವರ್ಗಾವಣೆ

ನಾಲ್ವರು ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಗಳು ಸೇರಿದಂತೆ ತೆಲಂಗಾಣ, ಆಂಧ್ರಪ್ರದೇಶ ಬೇರೆ ಬೇರೆ ರಾಜ್ಯದ ಒಟ್ಟು ಏಳು ಹೈಕೋರ್ಟ್ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಲಾಗಿದೆ. ಸುಪ್ರೀಂಕೋರ್ಟ್ ಕೊಲಿಜಿಯಂನಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಹಿನ್ನಲೆ ವರ್ಗಾವಣೆ  ಮಾಡಿ ಆದೇಶ ಹೊರಡಿಸಲಾಗಿದೆ. ಹೈಕೋರ್ಟ್‌ ಆಡಳಿತದ ಗುಣಮಟ್ಟವನ್ನು ಬಲಪಡಿಸುವ ಉದ್ದೇಶಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ವರದಿಯಾಗಿದೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅಧ್ಯಕ್ಷತೆಯಲ್ಲಿ ಏಪ್ರಿಲ್ 15 ಮತ್ತು 19 ರಂದು ನಡೆದ ಸಭೆಗಳಲ್ಲಿ ನ್ಯಾಯಾಲಯಗಳ ನ್ಯಾಯಾಧೀಶರ ವರ್ಗಾವಣೆಗೆ ಶಿಫಾರಸು ಮಾಡಲಾಗಿತ್ತು. ನ್ಯಾಯಮೂರ್ತಿ ಸಂಜೀವ್ ಖನ್ನಾ ಹೇಳಿಕೆ ಪ್ರಕಾರ, ಹೈಕೋರ್ಟ್‌ ಆಡಳಿತ ವ್ಯವಸ್ಥೆ ಗುಣಮಟ್ಟವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.

 

ನ್ಯಾ. ಹೇಮಂತ್ ಚಂದನ ಗೌಡರ್​​: ಕರ್ನಾಟಕ ಹೈಕೋರ್ಟ್‌ನಿಂದ ಮದ್ರಾಸ್ ಹೈಕೋರ್ಟ್‌ಗೆ ವರ್ಗಾವಣೆ ನ್ಯಾ.ಕೃಷ್ಣನ್ ನಟರಾಜನ: ಕರ್ನಾಟಕ ಹೈಕೋರ್ಟ್‌ನಿಂದ ಕೇರಳ ಹೈಕೋರ್ಟ್‌ಗೆ ವರ್ಗಾವಣೆ

ನ್ಯಾ. ಎನ್​​. ಶ್ರೀನಿವಾಸ ಸಂಜಯ್ ಗೌಡ: ಕರ್ನಾಟಕ ಹೈಕೋರ್ಟ್‌ನಿಂದ ಗುಜರಾತ್ ಹೈಕೋರ್ಟ್‌ಗೆ ವರ್ಗಾವಣೆ

ನ್ಯಾ.ಕೃಷ್ಣ ದೀಕ್ಷಿತ್: ಕರ್ನಾಟಕ ಹೈಕೋರ್ಟ್‌ನಿಂದ ಒಡಿಶಾ ಹೈಕೋರ್ಟ್‌ಗೆ ವರ್ಗಾವಣೆ

ನ್ಯಾ‌.ಪೆರುಗು ಶ್ರೀಸುಧ: ತೆಲಂಗಾಣ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ ನ್ಯಾ.ಕೆ.ಸುರೇಂದರ್: ತೆಲಂಗಾಣ ಹೈಕೋರ್ಟ್‌ನಿಂದ ಮದ್ರಾಸ್ ಹೈಕೋರ್ಟ್‌ಗೆ ವರ್ಗಾವಣೆ

ನ್ಯಾ.ಡಾ.ಕೆ.ಮನ್ಮಧ ರಾವ್: ಆಂಧ್ರಪ್ರದೇಶ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ

Kishor KV

Leave a Reply

Your email address will not be published. Required fields are marked *