ಸೂರತ್ ನ ಆಪ್ ಅಭ್ಯರ್ಥಿ ಕಾಂಚನ್ ಜರಿವಾಲಾ ನಾಪತ್ತೆ- ಬಿಜೆಪಿ ವಿರುದ್ದ ಅಪಹರಣ ಆರೋಪ

ಸೂರತ್ ನ ಆಪ್ ಅಭ್ಯರ್ಥಿ ಕಾಂಚನ್ ಜರಿವಾಲಾ ನಾಪತ್ತೆ- ಬಿಜೆಪಿ ವಿರುದ್ದ ಅಪಹರಣ ಆರೋಪ

ಗಾಂಧಿನಗರ: ಗುಜರಾತ್ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಗುದ್ದಾಟ ಶುರುವಾಗಿದೆ. ಇದರ ಬೆನ್ನಲೇ ಆಪ್ ನ ಸೂರತ್  ಅಭ್ಯರ್ಥಿ ಕಾಂಚನ್ ಜರಿವಾಲಾ ಅವರನ್ನು ಬಿಜೆಪಿ ಅಪಹರಿಸಿದೆ, ಅವರು ಮತ್ತು ಅವರ ಕುಟುಂಬ ನಿನ್ನೆಯಿಂದ ನಾಪತ್ತೆಯಾಗಿದೆ ಎಂದು ಮನೀಶ್ ಸಿಸೋಡಿಯಾ ಬಿಜೆಪಿ ವಿರುದ್ಧ ಆರೋಪಿಸಿದ್ದಾರೆ.

ಇದನ್ನೂ ಓದಿ: ‘ಸಂಸದರ ಮನೆಗೆ ಜೆಸಿಬಿ ನುಗ್ಗಿಸಬೇಕು’ –ಟ್ವಿಟ್ಟರ್ ಖಾತೆಯಲ್ಲಿ ಕಾಂಗ್ರೆಸ್ ಟೀಕೆ

ಕಾಂಚನ್ ಜರಿವಾಲಾ  ಅವರು ನಾಮಪತ್ರ ಪರಿಶೀಲನೆಗೆ ತೆರಳಿದ್ದರು. ನಾಮಪತ್ರ ಪರಿಶೀಲನೆ ಮುಗಿಸಿ ಕಚೇರಿಯಿಂದ ಹೊರ ಬಂದ ಕ್ಷಣದಲ್ಲೇ ಬಿಜೆಪಿಯ ಗೂಂಡಾಗಳು ಅವರನ್ನು ಕರೆದೊಯ್ದಿದ್ದಾರೆ. ಈಗ ಆತ ಎಲ್ಲಿದ್ದಾನೆ ಎಂಬುದು ಗೊತ್ತಾಗಿಲ್ಲ.  ಬಿಜೆಪಿಗೆ ಗುಜರಾತ್ ಚುನಾವಣೆಯಲ್ಲಿ ಸೋಲುವ ಭೀತಿ ಇದೆ. ಅದಕ್ಕಾಗಿ ಆಪ್ ಅಭ್ಯರ್ಥಿಯನ್ನು ಅಪಹರಿಸಲು ಮುಂದಾಗಿದೆ. ಈ ಬೆಳವಣಿಗೆ ಅಪಾಯಕಾರಿ, ಇದು ಕೇವಲ ಅಭ್ಯರ್ಥಿಯಲ್ಲ ಪ್ರಜಾಪ್ರಭುತ್ವದ ಅಪಹರಣವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಸೂರತ್ (ಪೂರ್ವ), ಕಾಂಚನ್ ಜರಿವಾಲಾ ಮತ್ತು ಅವರ ಕುಟುಂಬ ನಿನ್ನೆಯಿಂದ ನಾಪತ್ತೆಯಾಗಿದೆ. ಮೊದಲು ಬಿಜೆಪಿ ಅವರ ನಾಮಪತ್ರವನ್ನು ತಿರಸ್ಕರಿಸಲು ಪ್ರಯತ್ನಿಸಿತು. ಆದರೆ ಅವರ ನಾಮಪತ್ರವನ್ನು ಸ್ವೀಕರಿಸಲಾಯಿತು. ನಂತರ, ಅವರು ತಮ್ಮ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಒತ್ತಡ ಹೇರುತ್ತಿದ್ದರು. ಈಗ ಅವರನ್ನು ಕಿಡ್ನಾಪ್ ಮಾಡಲಾಗಿದೆಯೇ? ಎಂದು ಆರೋಪಿಸಿ, ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

suddiyaana