ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಸೂರ್ಯಕುಮಾರ್! – ಗಂಡನ ಯಶಸ್ಸಿಗಾಗಿ ಕಾಪು ಮಾರಿಗುಡಿಗೆ ಭೇಟಿ ನೀಡಿದ ದೇವಿಶಾ!

ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಸೂರ್ಯಕುಮಾರ್! – ಗಂಡನ ಯಶಸ್ಸಿಗಾಗಿ ಕಾಪು ಮಾರಿಗುಡಿಗೆ ಭೇಟಿ ನೀಡಿದ ದೇವಿಶಾ!

ಟೀಮ್ ಇಂಡಿಯಾದ ಟಿ20 ನಾಯಕ ಸೂರ್ಯ ಕುಮಾರ್‌ ಯಾದವ್‌ ಇತ್ತೀಚಿಗೆ ಮುಗಿದ ಏಷ್ಯಾಕಪ್​ನಲ್ಲಿ ಫೈನಲ್ ಸೇರಿದಂತೆ ಬಹುತೇಕ ಎಲ್ಲಾ ಪಂದ್ಯಗಳಲ್ಲಿ  ಸಂಪೂರ್ಣ ವಿಫಲರಾಗಿದ್ದಾರೆ. ಆಡಿದ ಆರು ಇನ್ನಿಂಗ್ಸ್‌ಗಳಲ್ಲಿ ಕೇವಲ 72 ರನ್‌ ಗಳಿಸಿದ್ದಾರೆ. ಕಳಪೆ ಪದರ್ಶನದಿಂದಾಗಿ ಸೂರ್ಯ ಕಂಗೆಟ್ಟು ಹೋಗಿದ್ದಾರೆ. ಕಳೆದ ಒಂದು ವರ್ಷದಿಂದ ಸೂರ್ಯ ಬ್ಯಾಟ್ ಸಪ್ಪೆಯಾಗಿದ್ದು, ಸ್ಟ್ರೈಕ್ ರೇಟ್ ಕುಸಿದಿದೆ. ಮುಂಬರುವ ಟಿ20 ವಿಶ್ವಕಪ್‌ಗೆ ಅವರ ಈ ಸ್ಥಿತಿ ತಂಡಕ್ಕೆ ದೊಡ್ಡ ಕಳವಳ ತಂದಿದೆ. ಈ ಬೆನ್ನಲ್ಲೇ ಸೂರ್ಯಕುಮಾರ್ ಯಾದವ್ ಪತ್ನಿ ದೇವಿಶಾ ಶೆಟ್ಟಿ ಕಾಪು ಮಾರಿಗುಡಿಗೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ಒಂದೇ ಮನೆಯ ಮೂವರು ಮಕ್ಕಳಿಗೆ ಕಚ್ಚಿದ ವಿಷಕಾರಿ ಹಾವು!

ಸೋಮವಾರ ಕಾಪು ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿಗಳು ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ವ್ಯವಸ್ಥಾಪನಾ ಸಮಿತಿ ಮತ್ತುಅಭಿವೃದ್ಧಿ ಸಮಿತಿ ವತಿಯಿಂದ ಈ ಸಂದರ್ಭದಲ್ಲಿ ಗೌರವಿಸಲಾಯಿತು.

ದೇವಸ್ಥಾನದ ಪ್ರಾಂಗಣದ ಮುಂದಿರುವ ಬೃಹತ್ ಕಲ್ಲಿನ ಕಂಬವನ್ನು ಸೇವೆ ರೂಪದಲ್ಲಿ ಸೂರ್ಯಕುಮಾರ್ ದಂಪತಿ ಕೊಟ್ಟಿದ್ದರು. ಆ ಕಂಬದ ಮುಂದೆ ದೇವಿಶಾ ನಿಂತು ಫೋಟೋ ತೆಗೆಸಿಕೊಂಡಿದ್ದಾರೆ.

ಅಂದ್ಹಾಗೆ ದೇವಿಶಾ ಶೆಟ್ಟಿ ಭರತನಾಟ್ಯ ಕಲಾವಿದೆಯಾಗಿದ್ದು ಮುಂಬೈನಲ್ಲಿ ನೃತ್ಯ ತರಬೇತಿ ನೀಡುತ್ತಿದ್ದಾರೆ. ಜುಲೈ 7, 2016 ರಂದು ಸೂರ್ಯ ದೇವಿಶಾ ಶೆಟ್ಟಿ ಅವರನ್ನು ವಿವಾಹವಾಗಿದ್ದರು. ದೇವಿಶಾ ಗಂಡನ ಪ್ರತಿ ಹೆಜ್ಜೆಯಲ್ಲೂ ಜೊತೆಯಾಗಿರ್ತಾರೆ. ಇದೀಗ ಗಂಡನ ಯಶಸ್ಸಿಗಾಗಿ ಕಾಪು ಮಾರಿಗುಡಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

Shwetha M