ಭಾರತ ಪಾಕ್ ಗಡಿಯಲ್ಲಿ ಡ್ರೋನ್ ಪತ್ತೆ – ಸ್ಥಳದಲ್ಲಿ ಬಿಗಿ ಭದ್ರತೆ

ರಾಜಸ್ಥಾನದ ಶ್ರೀ ಗಂಗಾನಗರ ಜಿಲ್ಲೆಯ ಭಾರತ-ಪಾಕಿಸ್ತಾನ ಗಡಿಯ ಬಳಿಯ ಹೊಲದಲ್ಲಿ ಡ್ರೋನ್ ಪತ್ತೆಯಾಗಿದ್ದು, ಭದ್ರತಾ ಸಂಸ್ಥೆಗಳು ಅಲರ್ಟ್ ಆಗಿದ್ದಾರೆ. ಅನುಪ್‌ಗಢ ಪ್ರದೇಶದ ಗ್ರಾಮಸ್ಥರು ಮಾನವರಹಿತ ವೈಮಾನಿಕ ವಾಹನವನ್ನು ಪತ್ತೆಹಚ್ಚಿದರು. ಅವರು ಅದನ್ನು ಗಮನಿಸಿದ ತಕ್ಷಣ ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಅನುಪ್‌ಗಢ ಸ್ಟೇಷನ್ ಹೌಸ್ ಆಫೀಸರ್ (SHO) ಈಶ್ವರ್ ಜಂಗಿದ್ ಅವರು ತಕ್ಷಣ ಗಡಿ ಭದ್ರತಾ ಪಡೆ (BSF)ಗೆ ಮಾಹಿತಿ ನೀಡಿ ಪೊಲೀಸ್ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ. ಬಿಎಸ್ಎಫ್ ವಶಕ್ಕೆ ಪಡೆದಿರುವ ಡ್ರೋನ್ 5ರಿಂದ 7 ಅಡಿ ಉದ್ದವಿದ್ದು ಬಹುತೇಕ ಹಾನಿಗೊಳಗಾಗಿದೆ. ಅದರ ಕ್ಯಾಮೆರಾ ಮಾಡ್ಯೂಲ್ ಮುರಿದಿದೆ.
ನಾವು ಡ್ರೋನ್ ಅನ್ನು ವಶಪಡಿಸಿಕೊಂಡಿದ್ದೇವೆ. ಆ ಪ್ರದೇಶವನ್ನು ಸಂಪೂರ್ಣವಾಗಿ ಪರಿಶೀಲಿಸಲಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಬಾಂಬ್ ನಿಷ್ಕ್ರಿಯ ದಳವನ್ನು ಸಹ ಕರೆಯಲಾಗಿದೆ” ಎಂದು ಪೊಲೀಸರು ಹೇಳಿದರು. ಡ್ರೋನ್ ಅನ್ನು ಅದರ ಮೂಲ ಮತ್ತು ಉದ್ದೇಶವನ್ನು ನಿರ್ಧರಿಸಲು ವಿಧಿವಿಜ್ಞಾನ ಮತ್ತು ತಾಂತ್ರಿಕ ವಿಶ್ಲೇಷಣೆಗೆ ಕಳುಹಿಸಲಾಗುವುದು ಎಂದು ಅವರು ಹೇಳಿದರು.