ಅಮೆರಿಕದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು!

ಅಮೆರಿಕದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು!

ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳ ಸಾವಿನ ಸರಣಿ ಮುಂದುವರಿದಿದೆ. ಇದೀಗ ಮತ್ತೊಬ್ಬಳು ವಿದ್ಯಾರ್ಥಿನಿ ಅನುಮಾನಾಸ್ವದವಾಗಿ ಸಾವನ್ನಪ್ಪಿದ್ದಾಳೆ.

ಓಹಿಯೋದ ಕ್ಲೀವ್‍ಲ್ಯಾಂಡ್ ಎಂಬಲ್ಲಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದಾಳೆ. ಮೃತ ವಿದ್ಯಾರ್ಥಿನಿಯನ್ನು ಉಮಾ ಸತ್ಯ ಸಾಯಿ ಗಡ್ಡೆ ಎಂದು ಗುರುತಿಸಲಾಗಿದೆ. ಆಕೆ ಓಹಿಯೋದ ಕ್ಲೀವ್‍ಲ್ಯಾಂಡ್‍ನಲ್ಲಿ ವ್ಯಾಸಾಂಗ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಕೇಸ್‌ಗೆ ಟ್ವಿಸ್ಟ್‌! – ಮಲೆನಾಡಿಗೂ ಸ್ಪೋಟಕ್ಕೂ ನಂಟೇನು?

ವಿದ್ಯಾರ್ಥಿನಿಯ ಸಾವಿನ ಬಗ್ಗೆ ಭಾರತೀಯ ದೂತವಾಸ ಕಚೇರಿ ತೀವ್ರ ಬೇಸರ ವ್ಯಕ್ತಪಡಿಸಿದೆ.  ಮೃತಳ ಕುಟುಂಬಕ್ಕೆ ಅಗತ್ಯ ನೆರವು ನೀಡುವುದಾಗಿ ಘೋಷಿಸಿದೆ. ಅಲ್ಲದೇ ಮೃತದೇಹವನ್ನು ಭಾರತಕ್ಕೆ ಸಾಗಿಸಲು ಕ್ರಮಕೈಗೊಳ್ಳಲಾಗುವುದು. ಈ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ ಎಂದು ರಾಯಭಾರ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯು ಅಮೆರಿಕದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗಳ ಮೇಲಿನ ದಾಳಿಯ ಸರಣಿಯ ಮತ್ತೊಂದು ಹೆಜ್ಜೆಯಾಗಿದೆ. ಅಲ್ಲದೇ ಮಾರ್ಚ್‍ನಲ್ಲಿ ಮೊಹಮ್ಮದ್ ಅಬ್ದುಲ್ ಅರಾಫತ್, ನಿಗೂಢವಾಗಿ ಕ್ಲೀವ್‍ಲ್ಯಾಂಡ್ ಪ್ರದೇಶದಿಂದ ನಾಪತ್ತೆಯಾಗಿದ್ದರು. ನಂತರ ಆತನ ಕುಟುಂಬಕ್ಕೆ ಆತನ ಬಿಡುಗಡೆಗೆ ಹಣ ನೀಡುವಂತೆ ಸುಲಿಗೆ ಕರೆ ಬಂದಿತ್ತು.

ಈ ವರ್ಷದ ಆರಂಭದಲ್ಲಿ, ಹೈದರಾಬಾದ್‍ನ ವಿದ್ಯಾರ್ಥಿ ಸೈಯದ್ ಮಜಾಹಿರ್ ಅಲಿ ಮೇಲೆ ಚಿಕಾಗೋದಲ್ಲಿ ಅಮಾನುಷವಾಗಿ ಹಲ್ಲೆ ನಡೆಸಲಾಗಿತ್ತು. ಬಳಿಕ ಚಿಕಾಗೋದಲ್ಲಿರುವ ಭಾರತೀಯ ದೂತಾವಾಸವು ತಕ್ಷಣವೇ ಮಧ್ಯಪ್ರವೇಶಿಸಿ ಅಲಿ ಮತ್ತು ಅವರ ಕುಟುಂಬಕ್ಕೆ ನೆರವು ನೀಡಿತ್ತು. ಇದರೊಂದಿಗೆ ಇಂಡಿಯಾನಾದ ಪಡ್ರ್ಯೂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ನೀಲ್ ಆಚಾರ್ಯ ಸಾವು ಮತ್ತು ಜಾರ್ಜಿಯಾದಲ್ಲಿ ವಿವೇಕ್ ಸೈನಿಯ ಕ್ರೂರ ಹತ್ಯೆ ಸಹ ನಡೆದಿತ್ತು.

2024ರ ಆರಂಭದಿಂದ, ಅಮೆರಿಕದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗಳ 10 ಸಾವುಗಳು ಸಂಭವಿಸಿವೆ.

Shwetha M