ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ! – ಶಾಲೆಗೆ ತೆರಳುತ್ತಿದ್ದ 5 ಮಕ್ಕಳಿಗೆ ಗಂಭೀರ ಗಾಯ!

ಬೀದರ್ ಜಿಲ್ಲೆಯಲ್ಲಿ ದೊಡ್ಡ ಅವಘಡವೊಂದು ಸಂಭವಿಸಿದೆ. ಅನುಮಾನಾಸ್ಪದ ವಸ್ತು ಸ್ಪೋಟಗೊಂಡು ಐದು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ: ದೆಹಲಿ, ಬೆಂಗಳೂರು ಆಯ್ತು.. ಈಗ ಕರಾವಳಿ ಭಾಗದಲ್ಲೂ ಕಳಪೆ ವಾಯುಗುಣಮಟ್ಟ!
ಹುಮ್ನಾಬಾದ್ ತಾಲೂಕಿನ ಮೋಳಕೇರಾ ಗ್ರಾಮದಲ್ಲಿ ಶುಕ್ರವಾರ ಬೆಳಂಬೆಳಿಗ್ಗೆ ಈ ಅವಘಡ ಸಂಭವಿಸಿದೆ. ಮೋಳಗಿ ಮಾರಯ್ಯ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡಿದ್ದು, ಶಾಲೆಗೆ ತೆರಳುತ್ತಿದ್ದ ಐದು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಫೋಟದಲ್ಲಿಅನ್ವರ್ ಸಾಬ್(18) ಮತ್ತು ಜಬ್ಬಾರ್ ಸಾಬ್(65) ಎಂಬ ಯುವಕರಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದ್ರಾಬಾದ್ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದಂತೆ ಪರಿಜಾರ್(8), ಅಜೀಜ್(5), ಬುಶ್ರಾ(4)ಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಮಕ್ಕಳಿಗೆ ಸಮೀಪದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ಪಡೆದ ತಕ್ಷಣ ಹುಮ್ನಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಫೋಟಕ್ಕೆ ಕಾರಣವಾದ ವಸ್ತುವಿನ ಮಾದರಿಗಳನ್ನು ಸಂಗ್ರಹಿಸಲು ಶೀಘ್ರದಲ್ಲೇ ಸೋಕೋ (SOCO) ತಂಡವನ್ನು ಸ್ಥಳಕ್ಕೆ ಕರೆಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ತೆರಳಿ ಪರಿಶೀಲನೆ ನಡೆಸಿಸಿದ್ದಾರೆ.
6 ತಿಂಗಳಲ್ಲಿ ಎರಡನೇ ಬಾರಿಗೆ ಸ್ಫೋಟ
ಕಳೆದ ಆರು ತಿಂಗಳ ಅವಧಿಯಲ್ಲಿ ಇದೇ ಗ್ರಾಮದಲ್ಲಿ ಇದು ಎರಡನೇ ಬಾರಿ ಸಂಭವಿಸಿರುವ ಸ್ಫೋಟವಾಗಿದೆ. ಪದೇ ಪದೇ ನಡೆಯುತ್ತಿರುವ ಇಂತಹ ಘಟನೆಗಳಿಂದ ಗ್ರಾಮಸ್ಥರಲ್ಲಿ ಭೀತಿ ಮತ್ತು ಆತಂಕ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ನೋಡಿರಿ

