ಸಿಎಂ ಸಿದ್ದು, ಡಿಸಿಎಂ ಡಿಕೆಶಿ ಜೊತೆ 8 ಸಚಿವರ ಪ್ರಮಾಣವಚನ – ಯಾವ ಹೆಸರಲ್ಲಿ ಪ್ರತಿಜ್ಞಾವಿಧಿ ಸ್ವೀಕಾರ?
ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. 2ನೇ ಬಾರಿ ಸಿಎಂ ಆಗಿ ಸಿದ್ದರಾಮಯ್ಯ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ಹಾಗೇ ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪದಗ್ರಹಣ ಮಾಡಿದ್ರು. ಕಾರ್ಯಕ್ರಮದಲ್ಲಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಭಾಗಿಯಾಗಿದ್ದರು.
ಇದನ್ನೂ ಓದಿ : ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ಶಾಂತಿಯುತವಾಗಿರಲಿ – ಸಿದ್ದು, ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಬಿಜೆಪಿ
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಜೊತೆ ಶಾಸಕರು ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಕಂಠೀರವ ಕ್ರೀಡಾಂಗಣದ ಒಳಾಂಗಣ ಹಾಗೂ ಹೊರಾಂಗಣದಲ್ಲಿ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದರು. ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು. ರಾಜಕಾರಣಿಗಳ ಜೊತೆ ನಟ, ನಟಿಯರು ಪದಗ್ರಹಣಕ್ಕೆ ಸಾಕ್ಷಿಯಾಗಿದ್ರು.
ಎರಡನೇ ಬಾರಿಗೆ ಸಿಎಂ ಆಗಿ ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ರು. ಶ್ರೀಗಂಗಾಧರ ಅಜ್ಜನ ಹೆಸರಲ್ಲಿ ಡಿ.ಕೆ ಶಿಕುಮಾರ್ ಪ್ರಮಾಣವಚನ ಸ್ವೀಕರಿಸಿದ್ರು. ಸಿಎಂ ಹಾಗೂ ಡಿಸಿಎಂಗೆ ಹೂಗುಚ್ಛ ನೀಡುವ ಮೂಲಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿನಂದನೆ ಸಲ್ಲಿಸಿದ್ರು. ಇನ್ನು ಸಿಎಂ, ಡಿಸಿಎಂ ಜೊತೆ 8 ಮಂದಿ ಸಚಿವರಾಗಿ ಪದಗ್ರಹಣ ಮಾಡಿದ್ರು. ಸಂವಿಧಾನದ ಹೆಸರಿನಲ್ಲಿ ಸಚಿವರಾಗಿ ಡಾ.ಜಿ ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದ್ರು. ಹಾಗೇ ದೇವರ ಹೆಸರಿನಲ್ಲಿ ಕೆ.ಹೆಚ್ ಮುನಿಯಪ್ಪ, ಕೆ.ಜೆ ಜಾರ್ಜ್, ಎಂ.ಬಿ ಪಾಟೀಲ್, ಪ್ರಿಯಾಂಕ್ ಖರ್ಗೆ ಪ್ರತಿಜ್ಞಾವಿಧಿ ಸ್ವೀಕರಿಸಿದ್ರು. ಸತೀಶ್ ಜಾರಕಿಹೊಳಿ ಬುದ್ಧ, ಬಸವ, ಅಂಬೇಡ್ಕರ್ ಹೆಸರಲ್ಲಿ ಪದಗ್ರಹಣ ಮಾಡಿದ್ರು. ಇನ್ನು ರಾಮಲಿಂಗಾರೆಡ್ಡಿ ಶ್ರದ್ಧಾಪೂರ್ವಕವಾಗಿ ಸಚಿವ ಸ್ಥಾನ ದೃಢೀಕರಿಸಿದ್ರು. ಜಮೀರ್ ಅಹ್ಮದ್ ಖಾನ್ ಅಲ್ಲಾ ಮತ್ತು ತಾಯಿ ಹೆಸರಿನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ರು.