ಇಂದಿನಿಂದ T20 ವಿಶ್ವಕಪ್ – 4 ಗಂಪು, 20 ಟೀಮ್, ಹೇಗಿದೆ ಅಖಾಡ?

ಇಂದಿನಿಂದ ಟಿ20 ವಿಶ್ವಕಪ್ ಶುರುವಾಗಲಿದ್ದು, ಇಡೀ ವಿಶ್ವವೇ ಕಾತರದಿಂದ ಕಾಯುತ್ತಿದೆ. ಒಟ್ಟು 20 ತಂಡಗಳು ಪ್ರಶಸ್ತಿಗಾಗಿ ಕಾದಾಟವನ್ನು ನಡೆಸಲಿವೆ. ಈ ತಂಡಗಳನ್ನು 4 ಗುಂಪುಗಳಲ್ಲಿ ವಿಂಗಡಿಸಲಾಗಿದೆ. ಭಾರತ “ಎ” ಗುಂಪಿನಲ್ಲಿ ಸ್ಥಾನ ಪಡೆದಿದೆ. ಒಟ್ಟು 55 ಪಂದ್ಯಗಳು ಈ ಟೂರ್ನಿಯಲ್ಲಿ ನಡೆಯಲಿವೆ. ಈ ಪಂದ್ಯಗಳಿಗೆ ಭಾರತದ ಐದು ಹಾಗೂ ಶ್ರೀಲಂಕಾದ ಮೂರು ಮೈದಾನಗಳು ಆತಿಥ್ಯ ನೀಡಲಿವೆ.
ಭಾರತ ಹಾಲಿ ಚಾಂಪಿಯನ್ ಪಟ್ಟದೊಂದಿಗೆ ಕಣಕ್ಕೆ ಇಳಿಯಲಿದೆ. ಉದ್ಘಾಟನಾ ಪಂದ್ಯಕ್ಕೆ ಕೊಲಂಬೊ ಸಜ್ಜಾಗಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ನೆದರ್ಲ್ಯಾಂಡ್ಸ್ ತಂಡಗಳು ಕಾದಾಟ ನಡೆಸಲಿವೆ. ಎರಡನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಹಾಗೂ ಸ್ಕಾಟ್ಲೆಂಡ್ ತಂಡಗಳು ಹೋರಾಡಲಿವೆ. ಇನ್ನು ದಿನದ ಮೂರನೇ ಪಂದ್ಯದಲ್ಲಿ ಭಾರತ ಹಾಗೂ ಯುಎಇ ತಂಡಗಳು ಕಾದಾಟವನ್ನು ನಡೆಸಲಿವೆ. ಉಳಿದಂತೆ ಲೀಗ್ ಹಂತದಲ್ಲಿ ಪ್ರತಿ ತಂಡಗಳು ತಲಾ ನಾಲ್ಕು ಪಂದ್ಯಗಳನ್ನು ಆಡಲಿವೆ.
ಇದನ್ನೂ ಓದಿ: RCBಗೆ ಹ್ಯಾಟ್ರಿಕ್ ಕಪ್ – ಡೆಲ್ಲಿ ಬೇಟೆಯಾಡಿದ ಸಿಂಹಿಣಿಯರು
ಗುಂಪು ಹಂತದಲ್ಲಿ ಅಗ್ರಸ್ಥಾನ ಪಡೆಯುವ ಎರಡು ತಂಡಗಳು ಸೂಪರ್ 8ಕ್ಕೆ ಅರ್ಹತೆ ಪಡೆಯುತ್ತವೆ. ಇನ್ನು ಸೂಪರ್ ಎಂಟರ್ ಘಟ್ಟದ ಪಂದ್ಯದಲ್ಲಿ ಒಂದು ತಂಡದಿಂದ ಎರಡು ತಂಡಗಳು ಸೆಮಿಫೈನಲ್ ಹಂತವನ್ನು ಪ್ರವೇಶಿಸಲಿವೆ. ಇನ್ನು ಮೊದಲ ಸೆಮಿಫೈನಲ್ ಪಂದ್ಯ ಮಾರ್ಚ್ 4 ರಂದು, ಎರಡನೇ ಸೆಮಿಫೈನಲ್ ಮಾರ್ಚ್ 5 ರಂದು ನಡೆಯಲಿದೆ. ಇನ್ನು ಫೈನಲ್ ಪಂದ್ಯ 8 ರಂದು ನಡೆಯಲಿದೆ.

ನೋಡಿರಿ

