ʼಕರ್ನಾಟಕದಲ್ಲಿ ತಾಲಿಬಾನ್ ಆಡಳಿತʼ! – ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಛಾಟಿ ಏಟು ನೀಡುತ್ತಿದೆ ಎಂದ ಬಿಜೆಪಿ

ʼಕರ್ನಾಟಕದಲ್ಲಿ ತಾಲಿಬಾನ್ ಆಡಳಿತʼ! – ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಛಾಟಿ ಏಟು ನೀಡುತ್ತಿದೆ ಎಂದ ಬಿಜೆಪಿ

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ, ರಾಷ್ಟ್ರ ನಾಯಕರ ಬಗ್ಗೆ ಇಲ್ಲ ಸಲ್ಲದ ಪೋಸ್ಟ್ ಮಾಡುವುದಕ್ಕೆ ಕಡಿವಾಣ ಹಾಕಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ‌ ಪ್ರಿಯಾಂಕ ಖರ್ಗೆ ಹೇಳಿದ್ದರು. ಇದೀಗ ಈ ಬಗ್ಗೆ ರಾಜ್ಯ ಬಿಜೆಪಿ ಕಿಡಿಕಾರಿದೆ.

ಇದನ್ನೂ ಓದಿ: ಕೆಲಸ ಕೊಡಿ ಸಾರ್‌ ಕೆಲಸ.. – ಮೇ ತಿಂಗಳಿನಲ್ಲಿ ದೇಶದ  ನಿರುದ್ಯೋಗ ಪ್ರಮಾಣ ಶೇ. 7.7ಕ್ಕೆ  ಇಳಿಕೆ!

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ, ಕರ್ನಾಟಕದಲ್ಲಿ ತಾಲಿಬಾನ್ ಅಡಳಿತ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಛಾಟಿ ಏಟು! ಯಾವುದು ಆಕ್ಷೇಪಾರ್ಹ, ಯಾವುದು ಅವಹೇಳನಕಾರಿ ಎಂದು ಸರ್ಟಿಫಿಕೇಟ್ ಕೊಡುವುದು ರಾಜ್ಯ ಸರ್ಕಾರದ ಕೆಲಸವಲ್ಲ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ಸ್ವಾತಂತ್ರ್ಯವಿದೆ. ಇದರಲ್ಲಿ ಮೂಗು ತೂರಿಸುತ್ತಿರುವ ಸಿದ್ದರಾಮಯ್ಯನವರ ಸರ್ಕಾರ ಪೂರ್ವಾಗ್ರಹ ಪೀಡಿತವಾಗಿದೆ ಎಂದು ಹೇಳಿದೆ.

suddiyaana