ಅಫ್ಘಾನಿಸ್ತಾನ ಹೆಣ್ಣುಮಕ್ಕಳಿಗೆ ವಿಶ್ವವಿದ್ಯಾಲಯ ಶಿಕ್ಷಣ ನಿಷೇಧ – ತಾಲಿಬಾನ್

ಅಫ್ಘಾನಿಸ್ತಾನ ಹೆಣ್ಣುಮಕ್ಕಳಿಗೆ ವಿಶ್ವವಿದ್ಯಾಲಯ ಶಿಕ್ಷಣ ನಿಷೇಧ – ತಾಲಿಬಾನ್

ಕಾಬೂಲ್: ಅಫ್ಘಾನಿಸ್ತಾನದ ಹೆಣ್ಣುಮಕ್ಕಳಿಗೆ ವಿಶ್ವವಿದ್ಯಾಲಯ ಶಿಕ್ಷಣವನ್ನು ಅನಿರ್ದಿಷ್ಟಾವಧಿಗೆ ನಿಷೇಧಿಸಿಲಾಗಿದೆ ಎಂದು ತಾಲಿಬಾನ್‌ ಉನ್ನತ ಶಿಕ್ಷಣ ಸಚಿವರು ಆದೇಶ ಹೊರಡಿಸಿದ್ದಾರೆ.

“ಉನ್ನತ ಶಿಕ್ಷಣ ಸಚಿವಾಲಯದ ಆದೇಶದಲ್ಲಿ ಮುಂದಿನ ಆದೇಶದವರೆಗೆ ಅಫ್ಘಾನಿಸ್ತಾನದಲ್ಲಿ ಮಹಿಳಾ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಸ್ಥಗಿತಗೊಳಿಸುವಂತೆ ಆದೇಶಿಸಿದೆ” ಎಂದು ಅಫ್ಘಾನಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಟ್ವಿಟರ್ ಸಿಇಓ ಸ್ಥಾನಕ್ಕೆ ಎಲಾನ್ ಮಸ್ಕ್ ರಾಜಿನಾಮೆ?

ತಾಲಿಬಾನ್ ಆಗಸ್ಟ್ 2021 ರಲ್ಲಿ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ನಂತರ ಮೂಲಭೂತ ಹಕ್ಕುಗಳನ್ನು ವಿಶೇಷವಾಗಿ ಮಹಿಳೆಯರು ಮತ್ತು ಹುಡುಗಿಯರ ಹಕ್ಕುಗಳನ್ನು ತೀವ್ರವಾಗಿ ನಿರ್ಬಂಧಿಸುವ ನೀತಿಗಳನ್ನು ಜಾರಿಗೆ ತಂದಿದೆ.

ನಾಗರಿಕ ಸೇವೆಯ ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರನ್ನು ತಾಲಿಬಾನ್ ವಜಾಗೊಳಿಸಿತು ಮತ್ತು ಹೆಚ್ಚಿನ ಪ್ರಾಂತ್ಯಗಳಲ್ಲಿ ಹುಡುಗಿಯರು ಶಾಲೆಗೆ ಹೋಗುವುದನ್ನು ನಿಷೇಧಿಸಿದೆ.

suddiyaana