ನಿಂತಿದ್ದ ರೈಲಿನಲ್ಲಿ ಅಗ್ನಿ ಅವಘಡ, 10 ಪ್ರಯಾಣಿಕರು ಸಜೀವ ದಹನ – ಕಾರಣ ಬಹಿರಂಗ!

ರೈಲ್ವೆ ಜಂಕ್ಷನ್ ಬಳಿ ನಿಂತಿದ್ದ ಪ್ರವಾಸಿ ಕೋಚ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೂವರು ಮಹಿಳೆಯರು ಸೇರಿ 10 ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ.
ಶನಿವಾರ ಮುಂಜಾನೆ 5:15 ಕ್ಕೆ ಪ್ರವಾಸಿ ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 10 ಮಂದಿ ಸಜೀವ ದಹನವಾಗಿದ್ದಾರೆ. 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಯಾಣಿಕರು ಉತ್ತರ ಪ್ರದೇಶದ ಲಕ್ನೋದಿಂದ ಆಗಮಿಸಿದ್ದರು ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.
ಇದನ್ನೂ ಓದಿ: ಚಂದ್ರನ ಮೇಲೆ ಪ್ರಜ್ಞಾನ್ ಪರಾಕ್ರಮ.. ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ – ಪ್ರಧಾನಿ ಮೋದಿ
ಗ್ಯಾಸ್ ಸಿಲಿಂಡರ್ ಅನ್ನು ಕಳ್ಳಸಾಗಣೆ ಮಾಡಿದ್ದರಿಂದ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯನ್ನು ಗಮನಿಸಿದ ಅನೇಕ ಪ್ರಯಾಣಿಕರು ಕೋಚ್‌ನಿಂದ ಹೊರಬಂದಿದ್ದಾರೆ. ಕೆಲವು ಪ್ರಯಾಣಿಕರು ಪ್ಲಾಟ್‌ಫಾರ್ಮ್‌ನಲ್ಲಿಯೇ ಇಳಿದಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅವಘಡದ ಸ್ಥಳದಲ್ಲಿ ಪೊಲೀಸರು, ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಸಿಬ್ಬಂದಿ, ರೈಲ್ವೆ ಸಿಬ್ಬಂದಿ, ಬೆಂಕಿಯನ್ನು ನಂದಿಸುವಲ್ಲಿ ತೊಡಗಿದ್ದು, ಸುಟ್ಟ ದೇಹಗಳನ್ನು ಕಂಪಾರ್ಟ್‌ಮೆಂಟ್‌ನಿಂದ ಹೊರತೆಗೆಯಲಾಗುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.