ಅಪ್ಪನ ಕ್ಯಾಬಿನೆಟ್ ಸೇರಿದ ತಮಿಳು ನಟ ಉದಯನಿಧಿ
ಚೆನ್ನೈ: ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರು ರಾಜ್ಯದ ನೂತನ ಕ್ರೀಡಾ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಬುಧವಾರ ಬೆಳಿಗ್ಗೆ 9.30 ಕ್ಕೆ ಚೆನ್ನೈನ ರಾಜಭವನದ ದರ್ಬಾರ್ ಹಾಲ್‌ನಲ್ಲಿ ಸಮಾರಂಭ ನಡೆದಿದ್ದು, ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಸಮ್ಮುಖದಲ್ಲಿ ರಾಜ್ಯಪಾಲ ಆರ್.ಎನ್. ರವಿ ಅವರು ಪ್ರಮಾಣ ವಚನ ಬೋಧಿಸಿದರು.
ಇದನ್ನೂ ಓದಿ: ಮೂರು ಗಂಟೆ ಮೊದಲೇ ಏರ್ಪೋರ್ಟ್ ಹಾಜರ್ – ಪ್ರಯಾಣಿಕರಿಗೆ ಹೊಸ ರೂಲ್ಸ್
ಉದಯನಿಧಿ ಸ್ಟಾಲಿನ್ ಅವರು ಪ್ರಸ್ತುತ ಚೆಪಾಕ್, ತಿರುವಲ್ಲಿಕೇಣಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಡಿಎಂಕೆ ಯುವ ವಿಭಾಗದ ಕಾರ್ಯದರ್ಶಿಯೂ ಆಗಿದ್ದಾರೆ. ಉದಯನಿಧಿ ಸ್ಟಾಲಿನ್ ಅವರನ್ನು 2019ರಲ್ಲಿ ಯುವ ವಿಭಾಗದ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು.
ಉದಯನಿಧಿ ಹಲವಾರು ತಮಿಳು ಚಿತ್ರಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಕಳೆದ ವರ್ಷ ತಮಿಳುನಾಡು ಚುನಾವಣೆಯಲ್ಲಿ ಸ್ಟಾರ್ ಪ್ರಚಾರಕರಾಗಿ ರಾಜಕೀಯ ವಲಯದಲ್ಲಿ ಗುರುತಿಸಿಕೊಂಡಿದ್ದರು. ಅಲ್ಲದೇ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದರು.
எப்போதும் வழிநடத்தும் மாண்புமிகு முதலமைச்சர்@mkstalin அவர்களிடம், சமூகநீதி திட்டங்களை செயல்படுத்தி தமிழர் நலன் காக்கும் திராவிட மாடல் அரசின் அமைச்சரவையில் பங்கேற்க வாய்ப்பளித்ததற்கு நன்றி தெரிவித்து வாழ்த்து பெற்றேன். பதவியாக கருதாமல் பொறுப்பாக உணர்ந்து என்றும் பணியாற்றிடுவேன். pic.twitter.com/M43S8kRcFO
— Udhay (@Udhaystalin) December 14, 2022