ಕಾವೇರಿ ಕಿಚ್ಚು ಹೆಚ್ಚಾದ ಹೊತ್ತಲ್ಲೇ ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ CWRC ಆದೇಶ!

ಕಾವೇರಿ ಕಿಚ್ಚು ಹೆಚ್ಚಾದ ಹೊತ್ತಲ್ಲೇ ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ CWRC ಆದೇಶ!

ನವದೆಹಲಿ: ರಾಜ್ಯದಲ್ಲಿ ಕಾವೇರಿ ಕಿಚ್ಚು ಕಾವೇರಿದೆ. ತಮಿಳು ನಾಡಿಗೆ ನೀರು ಹರಿಸಬಾರದು ಎಂದು ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ಮುಂದಿನ 15 ದಿನ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕ್ಕೆ ಆದೇಶ ನೀಡಿದೆ.

ಸೆ.13ರಂದು ಹದಿನೈದು ದಿನ ನಿತ್ಯ 5,000 ಕ್ಯೂಸೆಕ್ ಕಾವೇರು ನೀರು  ಹರಿಸುವಂತೆ ನ್ಯಾಯಾಲಯ ಆದೇಶ ನೀಡಿತ್ತು. ಈ ಆದೇಶ ಇಂದಿಗೆ (ಮಂಗಳವಾರ) ಅಂತ್ಯವಾಗುತ್ತಿದೆ. ಈ ಹಿನ್ನೆಲೆ ಕರ್ನಾಟಕ ಮತ್ತು ತಮಿಳುನಾಡು ಪ್ರತಿನಿಧಿಗಳ ಜೊತೆ CWRC ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸುತ್ತಿದೆ. ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸುವ ಬಗ್ಗೆ ಚರ್ಚೆ ನಡೆದಿದ್ದು, ಎರಡು ಕಡೆಯ ವಾದವನ್ನು ಆಲಿಸಿದ ಸಮಿತಿ ತಮಿಳುನಾಡಿಗೆ ಮುಂದಿನ 15 ದಿನ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕ್ಕೆ ಆದೇಶ ನೀಡಿದೆ.

ಇದನ್ನೂ ಓದಿ: ಕಾಂಗ್ರೆಸ್​ ಪಕ್ಷ ಡಿಎಂಕೆಯ ಬಿ ಟೀಂ.. ಕರ್ನಾಟಕದಲ್ಲಿರುವುದು ಸ್ಟಾಲಿನ್​ ಬಾಡಿಗೆ ಸರ್ಕಾರ! – ಮಾಜಿ ಸಿಎಂ ಎಚ್​ಡಿಕೆ ಕಿಡಿ

ಈ ಚರ್ಚೆಯ ವೇಳೆ ಕಳೆದ ಜೂನ್‌ನಿಂದ ಸೆಪ್ಟೆಂಬರ್‌ವರೆಗೂ 123 ಟಿಎಂಸಿ ಹರಿಸಬೇಕಿತ್ತು. ಕರ್ನಾಟಕ ಈವರೆಗೂ ಕೇವಲ 40 ಟಿಎಂಸಿ ನೀರು ಹರಿಸಿದೆ. ಹೀಗಾಗಿ ಬಾಕಿ 83 ಟಿಎಂಸಿ ನೀರು ಕೂಡಲೇ ಬಿಡುಗಡೆ ಮಾಡಬೇಕು ಎಂದು ತಮಿಳುನಾಡು ವಾದ ಮಂಡಿಸಿದೆ.

ಸಮಿತಿ ಯಾವುದೇ ಕಾರಣಕ್ಕೂ ನೀರಿನ ಪ್ರಮಾಣವನ್ನು ಕಡಿಮೆ ಮಾಡಬಾರದು. ಅಕ್ಟೋಬರ್‌ 22 ಟಿಎಂಸಿ ನೀರನ್ನು ಸಹ ಕರ್ನಾಟಕ ಹರಿಸಬೇಕು. ರಾಜ್ಯಕ್ಕೆ ಹರಿಸಬೇಕಾದ ನೀರನ್ನು ಸಮಿತಿ ಕೊಡುವಂತೆ ಕರ್ನಾಟಕಕ್ಕೆ ಆದೇಶಿಸಬೇಕು ಎಂದು ತಮಿಳುನಾಡು ಬೇಡಿಕೆ ಇಟ್ಟಿತ್ತು,  ಎರಡು ಕಡೆಯ ವಾದವನ್ನು ಆಲಿಸಿದ ಸಮಿತಿ ತಮಿಳುನಾಡಿಗೆ ಮುಂದಿನ 15 ದಿನ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕ್ಕೆ ಆದೇಶ ನೀಡಿದೆ. ಈ ಆದೇಶದಿಂದ ಕರ್ನಾಟಕದಲ್ಲಿ ಪ್ರತಿಭಟನೆಯ ಕಾವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

Shwetha M