ಇನ್ನುಮುಂದೆ ನ್ಯಾಯಬೆಲೆ ಅಂಗಡಿಗಳಲ್ಲಿ ಸಬ್ಸಿಡಿ ದರದಲ್ಲಿ ಟೊಮೇಟೋ ಮಾರಾಟ!

ಇನ್ನುಮುಂದೆ ನ್ಯಾಯಬೆಲೆ ಅಂಗಡಿಗಳಲ್ಲಿ ಸಬ್ಸಿಡಿ ದರದಲ್ಲಿ ಟೊಮೇಟೋ ಮಾರಾಟ!

ತಮಿಳುನಾಡು: ದೇಶದೆಲ್ಲೆಡೆ  ತರಕಾರಿ ಬೆಲೆಯಲ್ಲಿ ಏರಿಕೆಯಾಗಿದ್ದು, ಗ್ರಾಹಕರು ಕಂಗಾಲಾಗಿದ್ದಾರೆ. ದೇಶಡೆಲ್ಲೆದೆ ಟೊಮೇಟೊ ದರ ನೂರರ ಗಡಿ ದಾಟಿದ್ದು, ದಿನಬೆಳಗಾದರೆ ಚಿನ್ನದ ಬೆಲೆಯಂತೆ ಟೊಮೆಟೋ ದರವನ್ನು ಕೇಳುವ ಸ್ಥಿತಿ ಎಲ್ಲೆಡೆ ನಿರ್ಮಾಣವಾಗಿದೆ. ಹೆಚ್ಚುತ್ತಿರುವ ಟೊಮೆಟೋ ಬೆಲೆಯನ್ನು ಸರಿದೂಗಿಸಲು ತಮಿಳುನಾಡು ಸರ್ಕಾರ ಹೊಸ ಪ್ಲಾನ್‌ ಮಾಡಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಸಬ್ಸಿಡಿ ದರದಲ್ಲಿ ಟೊಮೆಟೋ ನೀಡಲು ತಮಿಳು ನಾಡು ಸರ್ಕಾರ ಪ್ರಾರಂಭಿಸಿದೆ.

ಇದನ್ನೂ ಓದಿ: ಜುಲೈ 10 ರೊಳಗೆ ಅನ್ನಭಾಗ್ಯ ಹಣ ಖಾತೆಗೆ ಜಮೆ?

ತಮಿಳುನಾಡು ರಾಜ್ಯದಲ್ಲಿ ಆರಂಭಿಕ ಹಂತದಲ್ಲಿ ಸುಮಾರು 82 ನ್ಯಾಯಬೆಲೆ ಅಂಗಡಿಗಳಲ್ಲಿ ಸಬ್ಸಿಡಿ ದರದಲ್ಲಿ ಮಾರಾಟ ಮಾಡಲು ಪ್ರಾರಂಭಿಸಿದೆ. ಒಂದು ಕೆ.ಜಿ ಟೊಮೆಟೋ 60 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಅಗತ್ಯ ಬಿದ್ದರೆ ಈ ಉಪಕ್ರಮವನ್ನು ರಾಜ್ಯದ ಇತರ ಭಾಗಗಳಿಗೆ ವಿಸ್ತರಿಸಲಾಗುವುದು ಎಂದು ಸಹಕಾರಿ ಸಚಿವ ಕೆ ಆರ್ ಪೆರಿಯಕರುಪ್ಪನ್ ಹೇಳಿದರು.

ಟೊಮೇಟೊ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸರಕಾರ ಈ ನಿರ್ಧಾರಕ್ಕೆ ಬಂದಿದ್ದು ಬೆಲೆ ಕಡಿಮೆಯಾಗದಿದ್ದಲ್ಲಿ ಈ ಕ್ರಮವನ್ನು ಇತರ ಕಡೆಗಳಿಗೂ ವಿಸ್ತರಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಸದ್ಯ ನೆರೆ ರಾಜ್ಯದಿಂದ ಟೊಮೇಟೊ ಆಮದು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ದರ ಏರಿಕೆಯಾಗಿದೆ ಎಂದು ಹೇಳಲಾಗುತ್ತಿದ್ದು ಸಧ್ಯದಲ್ಲೇ ಈ ಸಮಸ್ಯೆ ಪರಿಹಾರಗೊಳ್ಳಲಿದೆ ಎಂದು ಹೇಳಿದ ಅವರು ಅಲ್ಲಿಯವರೆಗೆ ನ್ಯಾಯಬೆಲೆ ಅಂಗಡಿಗಳಲ್ಲಿ ನೈಜ ಬೆಲೆಗೆ ದೊರಕಲಿದೆ ಎಂದು ಹೇಳಿದರು.

suddiyaana