ತಮಿಳುನಾಡಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ – ಪ್ರಧಾನಿ ಮೋದಿ ಆಗಮನಕ್ಕೂ ಮುನ್ನ ಹೈ ಅಲರ್ಟ್‌ ಆದ ಪೊಲೀಸರು!

ತಮಿಳುನಾಡಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ – ಪ್ರಧಾನಿ ಮೋದಿ ಆಗಮನಕ್ಕೂ ಮುನ್ನ ಹೈ ಅಲರ್ಟ್‌ ಆದ ಪೊಲೀಸರು!

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ತಮಿಳುನಾಡಿಗೆ ಆಗಮಿಸುತ್ತಿದ್ದಾರೆ. ಈ ಬೆನ್ನಲ್ಲೇ ಇಲ್ಲಿನ ಎರಡು ಶಾಲೆಗಳಿಗೆ ಬಾಂಬ್‌ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ.

ಪ್ರಧಾನಿ ಕಾರ್ಯಕ್ರಮವೊಂದರ ನಿಮಿತ್ತ ತಮಿಳುನಾಡಿಗೆ ಆಗಮಿಸುತ್ತಿದ್ದಾರೆ. ಈ ಬೆನ್ನಲ್ಲೇ 2 ಶಾಲೆಗಳಿಗೆ ಅನಾಮಧೇಯ ವ್ಯಕ್ತಿಯಿಂದ ಬಾಂಬ್ ಬೆದರಿಕೆ ಕರೆ ಬಂದಿದೆ. ತಮಿಳುನಾಡಿನ ಕಾಂಚಿಪುರಂ ಮತ್ತು ಕೋಯಿಮತ್ತೂರು ಜಿಲ್ಲೆಯ ಎರಡು ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ತಡರಾತ್ರಿ ಅನಾಮಧೇಯ ವ್ಯಕ್ತಿಯೊಬ್ಬರು ಮೇಲ್ ಮಾಡಿ ಬೆದರಿಕೆ ಹಾಕಿದ್ದಾನೆ. ಹೀಗಾಗಿ ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಈ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳದಿಂದಲು ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ. ಆದರೂ ಪೊಲೀಸರು ಸೇರಿದಂತೆ ಭದ್ರತಾ ಇಲಾಖೆಯವರು ಫುಲ್ ಹೈಅಲರ್ಟ್ ಆಗಿ ಇದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:  5ನೇ ಟೆಸ್ಟ್‌ನಲ್ಲಿ ರಜತ್ ಪಾಟಿದಾರ್‌ಗೆ ಮತ್ತೊಂದು ಅವಕಾಶ – ಕನ್ನಡಿಗ ದೇವದತ್ ಪಡಿಕ್ಕಲ್ ಡೆಬ್ಯೂ ಡೌಟ್?

ಇನ್ನು ಪ್ರಧಾನಿ ಮೋದಿಯವರು ಸೋಮವಾರ ಮಧ್ಯಾಹ್ನ 2 ಗಂಟೆ 45 ನಿಮಿಷಕ್ಕೆ ಚೆನ್ನೈ ಏರ್ಪೋರ್ಟ್​​ಗೆ ಆಗಮಿಸಲಿದ್ದಾರೆ. ಬಳಿಕ ಅಲ್ಲಿಂದ ಕಲ್ಪಕಂಗೆ ಹೆಲಿಕಾಪ್ಟರ್ ಮೂಲಕ ತೆರಳಲಿದ್ದಾರೆ. ಅಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಾರ್ಯಕ್ರಮ ಮುಗಿದ ಮೇಲೆ 5 ಗಂಟೆಗೆ ವಿಮಾನ ನಿಲ್ದಾಣಕ್ಕೆ ಹಿಂತಿರುಗಿ ರಸ್ತೆ ಮಾರ್ಗವಾಗಿ ನಂದನಂನಲ್ಲಿರುವ ವೈಎಂಸಿಎ ಮೈದಾನಕ್ಕೆ ತೆರಳಲಿದ್ದಾರೆ. ಸಂಜೆ 6.35ಕ್ಕೆ ನಗರದಿಂದ ವಿಶೇಷ ವಿಮಾನದ ಮೂಲಕ ತೆಲಂಗಾಣಕ್ಕೆ ಪ್ರಯಾಣ ಮಾಡಲಿದ್ದಾರೆ.

Shwetha M