ಟಿಕೆಟ್ ಸಿಕ್ಕಿಲ್ಲ ಎಂದು ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಹಾಲಿ ಸಂಸದ ಚಿಕಿತ್ಸೆ ಫಲಿಸದೇ ಸಾವು
ಲೋಕಸಭೆ ಚುನಾವಣಗೆ ಕೆಲವೇ ವಾರಗಳು ಮಾತ್ರ ಬಾಕಿ ಉಳಿದಿದೆ. ಈ ಹೊತ್ತಲ್ಲೇ ತಮಿಳುನಾಡಿನಿಂದ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ. ಟಿಕೆಟ್ ಸಿಕ್ಕಿಲ್ಲ ಅನ್ನೋ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡಿನ ಎಂಡಿಎಂಕೆ ಪಕ್ಷದ ಸಂಸದ ಗಣೇಶಮೂರ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ! – ನಿರ್ಮಲಾ ಸೀತಾರಾಮನ್ ಈ ನಿರ್ಧಾರಕ್ಕೆ ಕಾರಣವೇನು?
ಗಣೇಶ್ ಮೂರ್ತಿ ಅವರು ಎಂಡಿಎಂಕೆ ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿ ಈರೋಡೆ ಕ್ಷೇತ್ರದಲ್ಲಿ ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದರಾಗಿದ್ದರು. 2024ರ ಸಂಸತ್ ಚುನಾವಣೆಯಲ್ಲೂ ತಮಗೆ ಮತ್ತೊಮ್ಮೆ ಸೀಟು ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ಈ ಬಾರಿ ಡಿಎಂಕೆ ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳದೇ ಸ್ವತಂತ್ರವಾಗಿ ಸ್ಪರ್ಧೆ ಮಾಡ್ತಿದೆ. ಸೀಟು ಸಿಗದಿರೋದಕ್ಕೆ ಹತಾಸೆಗೊಂಡು ಮಾರ್ಚ್ 24ರಂದು ಆತ್ಮಹತ್ಯೆಗೆ ಯತ್ನಿಸಿದ್ದರು.
ಆತ್ಮಹತ್ಯೆಗೆ ಯತ್ನಿಸಿದ್ದ ಗಣೇಶಮೂರ್ತಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಕೊಯಮತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಗುರುವಾರ ಮುಂಜಾನೆ 5 ಗಂಟೆಗೆ ಹಠಾತ್ ಹೃದಯಾಘಾತವಾಗಿ ಗಣೇಶಮೂರ್ತಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.