ಟಿಕೆಟ್ ಸಿಕ್ಕಿಲ್ಲ ಎಂದು ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಹಾಲಿ ಸಂಸದ ಚಿಕಿತ್ಸೆ ಫಲಿಸದೇ ಸಾವು

ಟಿಕೆಟ್ ಸಿಕ್ಕಿಲ್ಲ ಎಂದು ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಹಾಲಿ ಸಂಸದ ಚಿಕಿತ್ಸೆ ಫಲಿಸದೇ ಸಾವು

ಲೋಕಸಭೆ ಚುನಾವಣಗೆ ಕೆಲವೇ ವಾರಗಳು ಮಾತ್ರ ಬಾಕಿ ಉಳಿದಿದೆ. ಈ ಹೊತ್ತಲ್ಲೇ ತಮಿಳುನಾಡಿನಿಂದ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ. ಟಿಕೆಟ್‌ ಸಿಕ್ಕಿಲ್ಲ ಅನ್ನೋ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡಿನ ಎಂಡಿಎಂಕೆ ಪಕ್ಷದ ಸಂಸದ ಗಣೇಶಮೂರ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ! – ನಿರ್ಮಲಾ ಸೀತಾರಾಮನ್‌ ಈ ನಿರ್ಧಾರಕ್ಕೆ ಕಾರಣವೇನು?

ಗಣೇಶ್ ಮೂರ್ತಿ ಅವರು ಎಂಡಿಎಂಕೆ ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿ ಈರೋಡೆ ಕ್ಷೇತ್ರದಲ್ಲಿ ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದರಾಗಿದ್ದರು. 2024ರ ಸಂಸತ್ ಚುನಾವಣೆಯಲ್ಲೂ ತಮಗೆ ಮತ್ತೊಮ್ಮೆ ಸೀಟು ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ಈ ಬಾರಿ ಡಿಎಂಕೆ ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳದೇ ಸ್ವತಂತ್ರವಾಗಿ ಸ್ಪರ್ಧೆ ಮಾಡ್ತಿದೆ. ಸೀಟು ಸಿಗದಿರೋದಕ್ಕೆ ಹತಾಸೆಗೊಂಡು ಮಾರ್ಚ್​ 24ರಂದು ಆತ್ಮಹತ್ಯೆಗೆ ಯತ್ನಿಸಿದ್ದರು.

ಆತ್ಮಹತ್ಯೆಗೆ ಯತ್ನಿಸಿದ್ದ ಗಣೇಶಮೂರ್ತಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.    ಅವರು ಕೊಯಮತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಗುರುವಾರ ಮುಂಜಾನೆ 5 ಗಂಟೆಗೆ ಹಠಾತ್ ಹೃದಯಾಘಾತವಾಗಿ ಗಣೇಶಮೂರ್ತಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

Shwetha M