ವಿಶ್ವಕಪ್ ಫೈನಲ್‌ನಲ್ಲಿ 240 ರನ್‌ಗಳಿಗೆ ಟೀಮ್ ಇಂಡಿಯಾ ಆಲೌಟ್ –ಕಾಂಗರೂಗಳನ್ನು ಕಟ್ಟಿ ಹಾಕ್ತಾರಾ ಭಾರತದ ಬೌಲರ್ಸ್?
ಕೋಟಿ ಕೋಟಿ ಭಾರತೀಯರ ಪ್ರಾರ್ಥನೆ ಒಂದೇ ಆಗಿದೆ. ಈ ಬಾರಿ ವಿಶ್ವಕಪ್‌ನಲ್ಲಿ ಭಾರತ ಗೆಲ್ಲಲೇಬೇಕು. ಕಪ್ ನಮ್ಮದೇ ಆಗಬೇಕು ಎಂಬುದು. ಆದರೆ, ವಿಶ್ವಕಪ್ ಟೂರ್ನಿಯುದ್ದಕ್ಕೂ ಅದ್ಭುತ ಆಟ ಆಡಿದ ಟೀಮ್ ಇಂಡಿಯಾ ಆಸೀಸ್ ಎದುರು ಕೇವಲ 240 ರನ್‌ಗಳನ್ನು ಕಲೆಹಾಕಿದೆ. ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್‌ಗಳಲ್ಲಿ 10 ವಿಕೆಟ್ ಕಳೆದುಕೊಂಡು 240 ರನ್ ಕಲೆಹಾಕಿದೆ.
ಇದನ್ನೂ ಓದಿ: ಬೌಲಿಂಗ್ ನಲ್ಲಿ ಕುಲದೀಪ್, ಜಸ್ಪ್ರೀತ್, ಜಡೇಜಾ, ಸಿರಾಜ್ ಮ್ಯಾಜಿಕ್ – ಆಸ್ಟ್ರೇಲಿಯಾ ಮೇಲೆ ಮಾರಕ ದಾಳಿ ಮಾಡ್ತಾರಾ ಈ ಬೌಲರ್ಸ್?
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್‌ಗಳಲ್ಲಿ 10 ವಿಕೆಟ್ ಕಳೆದುಕೊಂಡು 240 ರನ್ ಕಲೆಹಾಕಿದೆ. ಹಾಗೆಯೇ ಈ ಬಾರಿಯ ವಿಶ್ವಕಪ್‌ನಲ್ಲಿ ಮೊದಲ ಬಾರಿಗೆ ಟೀಂ ಇಂಡಿಯಾ ಆಲೌಟ್ ಆಗುವ ಮೂಲಕ ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದೆ. ಟೀಂ ಇಂಡಿಯಾ ಪರ ವಿರಾಟ್ ಕೊಹ್ಲಿ 54 ರನ್ ಮತ್ತು ಕೆಎಲ್ ರಾಹುಲ್ 66 ರನ್ ಗಳಿಸಿದರೆ, ನಾಯಕ ರೋಹಿತ್ ಶರ್ಮಾ 31 ಎಸೆತಗಳಲ್ಲಿ 47 ರನ್ ಗಳಿಸಿ ಭಾರತಕ್ಕೆ ವೇಗದ ಆರಂಭ ನೀಡಿದರಾದರೂ ಉಳಿದ ಆಟಗಾರರಿಗೆ ಆವೇಗವನ್ನು ಮುಂದುವರಿಸಲು ಸಾಧ್ಯವಾಗಲಿಲ್ಲ. ಆಸ್ಟ್ರೇಲಿಯಾ ಪರ ಮಿಚೆಲ್ ಸ್ಟಾರ್ಕ್ 3 ವಿಕೆಟ್ ಪಡೆದರೆ, ಪ್ಯಾಟ್ ಕಮಿನ್ಸ್ 2 ವಿಕೆಟ್ ಪಡೆದರು.
ಮೊದಲ 10.2 ಓವರ್‌ಗಳಲ್ಲೇ 81 ರನ್‌ಗಳಿಸಿದ್ದ ಭಾರತ ತಂಡ ಪ್ರಮುಖ 3 ವಿಕೆಟ್‌ಗಳನ್ನು ಕಳೆದುಕೊಂಡು ತೀವ್ರ ಸಂಕಷ್ಟಕ್ಕೀಡಾಗಿತ್ತು. ಇದರಿಂದ 4ನೇ ವಿಕೆಟ್‌ಗೆ ಕೊಹ್ಲಿ ಮತ್ತು ಕೆ.ಎಲ್ ರಾಹುಲ್ ಜೋಡಿ ನಿಧಾನಗತಿಯ ಬ್ಯಾಟಿಂಗೆ ಮುಂದಾಯಿತು. ಈ ಜೋಡಿ 109 ಎಸೆತಗಳಲ್ಲಿ 67 ರನ್‌ಗಳ ಜವಾಬ್ದಾರಿಯುತ ಜೊತೆಯಾಟ ನೀಡಿದರೂ 97 ಎಸೆತಗಳಲ್ಲಿ ಕೇವಲ ಒಂದೇ ಒಂದು ಬೌಂಡರಿ ದಾಖಲಾಗಿತ್ತು. ಉತ್ತಮ ರನ್ ಕಲೆಹಾಕುವ ಭರವಸೆ ಮೂಡಿಸಿದ್ದ ಈ ಜೋಡಿ ಆಟಕ್ಕೆ ಆಸ್ಟ್ರೇಲಿಯಾ ಕ್ಯಾಪ್ಟನ್ ಪ್ಯಾಟ್ ಕಮ್ಮಿನ್ಸ್ ಕೊಹ್ಲಿ ಆಟಕ್ಕೆ ಬ್ರೇಕ್ ಹಾಕಿದರು. 54 ರನ್ (63 ಎಸೆತ, 4 ಬೌಂಡರಿ) ಗಳಿಸಿ ಕೊಹ್ಲಿ ಔಟಾಗುತ್ತಿದ್ದಂತೆ, ಇಡೀ ಸ್ಟೇಡಿಯಂನಲ್ಲಿ ನೀರವ ಮೌನ ಆವರಿಸಿತ್ತು. ಲಕ್ಷಾಂತರ ಅಭಿಮಾನಿಗಳು ತಲೆಯ ಮೇಲೆ ಕೈಹೊತ್ತು ಕುಳಿತರು. ಆ ನಂತರ 107 ಎಸೆತಗಳನ್ನು ಎದುರಿಸಿದ ಕೆ.ಎಲ್ ರಾಹುಲ್ ಕೇವಲ ಒಂದೇ ಒಂದು ಬೌಂಡರಿ ಸಿಡಿಸಿ 66 ರನ್ ಗಳಿಸಿದರು.ನಂತರ ಕಣಕ್ಕಿಳಿದ ಯಾವೊಬ್ಬ ಆಟಗಾರರೂ ಹೆಚ್ಚು ಹೊತ್ತು ಕ್ರೀಸ್ ಉಳಿಯದ ಕಾರಣ ಟೀಂ ಇಂಡಿಯಾ ಅಲ್ಪ ಮೊತ್ತಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಟೀಂ ಇಂಡಿಯಾ ಪರ ಸೂರ್ಯಕುಮಾರ್ ಯಾದವ್ 15 ರನ್, ರವೀಂದ್ರ ಜಡೇಜಾ 9 ರನ್, ಮೊಹಮ್ಮದ್ ಶಮಿ 6 ರನ್, ಜಸ್ಪ್ರೀತ್ ಬುಮ್ರಾ 1 ರನ್, ಕುಲ್ದೀಪ್ ಯಾದವ್ 10 ರನ್ ಹಾಗೂ ಮೊಹಮ್ಮದ್ ಸಿರಾಜ್ 9 ರನ್ ಗಳಿಸಿ ಔಟಾದರು.