ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಟೀಮ್ ಇಂಡಿಯಾ ಪ್ರಕಟ – ಮೊದಲೆರೆಡು ಪಂದ್ಯಕ್ಕೆ ಕೆ.ಎಲ್ ರಾಹುಲ್ ನಾಯಕ

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಟೀಮ್ ಇಂಡಿಯಾ ಪ್ರಕಟ – ಮೊದಲೆರೆಡು ಪಂದ್ಯಕ್ಕೆ ಕೆ.ಎಲ್ ರಾಹುಲ್ ನಾಯಕ

ವಿಶ್ವಕಪ್ ಅಭಿಯಾನಕ್ಕೂ ಮೊದಲು ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿ ಆಡುತ್ತಿದೆ. ಏಕದಿನ ವಿಶ್ವಕಪ್‌ಗೂ ಮುನ್ನ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಏಕದಿನ ಸರಣಿಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಮೊದಲೆರಡು ಪಂದ್ಯಗಳಿಗೆ ಆಯ್ಕೆ ಮಾಡಲಾದ 15 ಸದಸ್ಯರ ಬಳಗವನ್ನು ಕೆಎಲ್ ರಾಹುಲ್ ಮುನ್ನಡೆಸಲಿದ್ದಾರೆ.

ಇದನ್ನೂ ಓದಿ: 100 ಓವರ್ ಗಳ ಪಂದ್ಯ ಕೇವಲ 22 ಓವರ್ ಗಳಲ್ಲೇ ಮುಕ್ತಾಯ – ಏಷ್ಯಾಕಪ್ ಫೈನಲ್ ಗೆದ್ದ ಭಾರತ ಬರೆದ ದಾಖಲೆಗಳೆಷ್ಟು..?

ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳಿಂದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಮೂರನೇ ಪಂದ್ಯದ ವೇಳೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಇನ್ನು ಈ ಸರಣಿಯ ಮೂಲಕ ರವಿಚಂದ್ರನ್ ಅಶ್ವಿನ್ ಟೀಮ್ ಇಂಡಿಯಾಗೆ ಮರಳಿದ್ದಾರೆ. ಅಂದರೆ ಏಷ್ಯಾಕಪ್ ಟೂರ್ನಿಗೆ ಅಶ್ವಿನ್ ಅವರನ್ನು ಆಯ್ಕೆ ಮಾಡಿರಲಿಲ್ಲ. ಇದೀಗ ಆಸ್ಟ್ರೇಲಿಯಾ ಸರಣಿಗೆ ಆಯ್ಕೆಯಾಗಿರುವುದು ವಿಶೇಷ. ಒಂದು ವೇಳೆ ಆಸ್ಟ್ರೇಲಿಯಾ ವಿರುದ್ಧ ಮಿಂಚಿದರೆ ಏಕದಿನ ವಿಶ್ವಕಪ್ ತಂಡದಲ್ಲೂ ಸ್ಥಾನ ಪಡೆಯಬಹುದು.

ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಆಯ್ಕೆಯಾದ ಆಟಗಾರರ ಪಟ್ಟಿ

ಕೆಎಲ್ ರಾಹುಲ್ (ನಾಯಕ), ಶುಭ್ಮನ್  ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ,  ರವಿಚಂದ್ರನ್ ಅಶ್ವಿನ್ ಮತ್ತು ವಾಷಿಂಗ್ಟನ್ ಸುಂದರ್.

ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿ ವೇಳಾಪಟ್ಟಿ:

ಮೊದಲ ಏಕದಿನ ಪಂದ್ಯ (ಮೊಹಾಲಿ – ಸೆಪ್ಟೆಂಬರ್ 22, 2023)

ಎರಡನೇ ಏಕದಿನ ಪಂದ್ಯ (ಇಂದೋರ್ – ಸೆಪ್ಟೆಂಬರ್ 24, 2023)

ಮೂರನೇ ಏಕದಿನ ಪಂದ್ಯ (ರಾಜ್ಕೋಟ್ – ಸೆಪ್ಟೆಂಬರ್ 27, 2023).

Sulekha