ಎರಡು ಸೂಪರ್ ಓವರ್ ನೋಡಿದ ಅಭಿಮಾನಿಗಳಿಗೆ ಸಂಭ್ರಮ – ಹೊಸ ಇತಿಹಾಸ ನಿರ್ಮಿಸಿದ ಟೀಮ್ ಇಂಡಿಯಾ

ಎರಡು ಸೂಪರ್ ಓವರ್ ನೋಡಿದ ಅಭಿಮಾನಿಗಳಿಗೆ ಸಂಭ್ರಮ – ಹೊಸ ಇತಿಹಾಸ ನಿರ್ಮಿಸಿದ ಟೀಮ್ ಇಂಡಿಯಾ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಅಭಿಮಾನಿಗಳಿಗೆ ಟೀಮ್ ಇಂಡಿಯಾ ಅಭಿಮಾನಿಗಳು ಸಂಕ್ರಾಂತಿಯ ಸವಿ ನೀಡಿದ್ದರು. ಬುಧವಾರ ರಾತ್ರಿ ಅಭಿಮಾನಿಗಳ ಪಾಲಿಗಂತೂ ಸುಗ್ಗಿಯ ಹಬ್ಬವೇ ಆಗಿತ್ತು. ಎರಡು ಸೂಪರ್ ಓವರ್ ಗಳನ್ನು ಕಂಡ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ತಂಡ ಭರ್ಜರಿ ಜಯ ದಾಖಲಿಸಿದೆ.

ಇದನ್ನೂ ಓದಿ: ಕೂಚ್ ಬೆಹರ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಮಿಂಚಿದ ಕನ್ನಡಿಗ – 18 ವರ್ಷದ ಪ್ರಖರ್ ಚತುರ್ವೇದಿಯ ಅಮೋಘ ಬ್ಯಾಟಿಂಗ್

ಅಫ್ಘಾನಿಸ್ತಾನ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿ, ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಭಾರತ ನೀಡಿದ 213 ರನ್‍ಗಳ ಟಾರ್ಗೆಟ್ ಬೆನ್ನತ್ತಿದ ಅಫ್ಘಾನಿಸ್ತಾನ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 212 ರನ್ ಗಳಿಸಿ ಮ್ಯಾಚ್ ಟೈ ಆಯ್ತು. ಇದರಿಂದಾಗಿ ಆಟ ಸೂಪರ್ ಓವರ್ ಹಂತಕ್ಕೆ ದಾಟಿತು. ಬಳಿಕ ಎರಡೆರಡು ಸೂಪರ್ ಓವರ್ ನಡೆದು ಇದರಲ್ಲಿ ಭಾರತ ಜಯ ಸಾಧಿಸಿತು. ರಣರೋಚಕ ಸೂಪರ್ ಓವರ್ ಕಂಡು ಅಭಿಮಾನಿಗಳು ಕುಣಿದು ಕುಪ್ಪಳಿಸಿದರು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು ರೋಹಿತ್ ಶರ್ಮಾ (121) ಶತಕದ ನೆರವಿನಿಂದ 212 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಅಫ್ಘಾನಿಸ್ತಾನ್ ತಂಡ 212 ರನ್ ಬಾರಿಸಿ ಪಂದ್ಯವನ್ನು ಟೈ ಮಾಡಿಕೊಂಡಿತು. ಅದರಂತೆ ಸೂಪರ್ ಓವರ್​ನತ್ತ ಸಾಗಿದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ 6 ಎಸೆತಗಳಲ್ಲಿ 16 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೂಡ 16 ರನ್​ಗಳಿಸಲಷ್ಟೇ ಶಕ್ತರಾದರು. ಸೂಪರ್ ಓವರ್ ಕೂಡ​ ಟೈನಲ್ಲಿ ಅಂತ್ಯಕಂಡಿತು. ಇದರೊಂದಿಗೆ ಪಂದ್ಯವು 2ನೇ ಸೂಪರ್ ಓವರ್​ನತ್ತ ಸಾಗಿತು. ದ್ವಿತೀಯ ಸೂಪರ್ ಓವರ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 5 ಎಸೆತಗಳಲ್ಲಿ 2 ವಿಕೆಟ್ ಕಳೆದುಕೊಂಡು 11 ರನ್ ಕಲೆಹಾಕಿತು. 12 ರನ್​ಗಳ ಗುರಿಯನ್ನು ಬೆನ್ನತ್ತಿದ ಅಫ್ಘಾನಿಸ್ತಾನ್ ತಂಡವು 1 ರನ್​ಗಳಿಸುವಷ್ಟರಲ್ಲಿ 2 ವಿಕೆಟ್​ ಕಳೆದುಕೊಂಡು 10 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಅಫ್ಘಾನಿಸ್ತಾನ್ ವಿರುದ್ಧದ ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಪಾಕಿಸ್ತಾನ್ ತಂಡದ ವಿಶ್ವ ದಾಖಲೆಯನ್ನು ಮುರಿದಿರುವುದು ವಿಶೇಷ. ಅಂದರೆ ಅಫ್ಘಾನಿಸ್ತಾನ್ ವಿರುದ್ಧದ 3 ಪಂದ್ಯಗಳ ಸರಣಿಯನ್ನು ಭಾರತ ತಂಡ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಮೂಲಕ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡ ವಿಶೇಷ ವಿಶ್ವ ದಾಖಲೆಯನ್ನು ಭಾರತ ತಂಡ ನಿರ್ಮಿಸಿದೆ. ಇದಕ್ಕೂ ಮುನ್ನ ಈ ದಾಖಲೆ ಪಾಕಿಸ್ತಾನ್ ತಂಡದ ಹೆಸರಿನಲ್ಲಿತ್ತು. ಪಾಕಿಸ್ತಾನ್ ತಂಡವು ಟಿ20 ಕ್ರಿಕೆಟ್​ನಲ್ಲಿ 8 ಸರಣಿಗಳನ್ನು ಕ್ಲೀನ್ ಸ್ವೀಪ್ ಮಾಡಿ ಗೆದ್ದುಕೊಂಡಿದೆ. ಇದೀಗ ಈ ದಾಖಲೆಯನ್ನು ಮುರಿದು ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ.

Sulekha