ಗಿಲ್, ಜೈಸ್ವಾಲ್ ಭರ್ಜರಿ ಶತಕ – 518 ರನ್‌ಗಳಿಗೆ ಡಿಕ್ಲೇರ್ ಘೋಷಿಸಿದ ಟೀಮ್ ಇಂಡಿಯಾ

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಮೊತ್ತ ಪೇರಿಸಿದೆ. ಯಶಸ್ವಿ ಜೈಸ್ವಾಲ್ ಹಾಗೂ ಶುಭ್ಮನ್ ಗಿಲ್ ಭರ್ಜರಿ ಶತಕಗಳ ಕೊಡುಗೆಯೊಂದಿಗೆ ಟೀಮ್ ಇಂಡಿಯಾ 518 ರನ್ ಗಳಿಸಿ, ಡಿಕ್ಲೇರ್ ಘೋಷಿಸಿದೆ.
ಇದನ್ನೂ ಓದಿ: ಮುಂಬೈ ತಂಡದಿಂದ ಸೂರ್ಯಕುಮಾರ್‌ಗೆ ಗೇಟ್‌ಪಾಸ್ – ರಣಜಿಗೂ ಲಾಯಕ್ ಇಲ್ವಾ ಸೂರ್ಯ?
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಮೊತ್ತ ಪೇರಿಸಿದೆ. ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾ 2 ವಿಕೆಟ್ ಕಳೆದುಕೊಂಡು 318 ರನ್ ಕಲೆಹಾಕಿತು. ಇನ್ನು ದ್ವಿತೀಯ ದಿನದಾಟದ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ (175) ರನೌಟ್ ಆಗುವ ಮೂಲಕ ನಿರಾಸೆ ಮೂಡಿಸಿದರು. ನಂತರ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಟೀಮ್ ಇಂಡಿಯಾ ನಾಯಕ ಶುಭ್ಮನ್ ಗಿಲ್ 196 ಎಸೆತಗಳಲ್ಲಿ 16 ಫೋರ್ ಹಾಗೂ 2 ಸಿಕ್ಸರ್ಗಳೊಂದಿಗೆ ಅಜೇಯ 128 ರನ್ ಬಾರಿಸಿದರು. ಗಿಲ್ಗೆ ಉತ್ತಮ ಸಾಥ್ ನೀಡಿದ ನಿತೀಶ್ ಕುಮಾರ್ ರೆಡ್ಡಿ 43 ರನ್ ಬಾರಿಸಿದರೆ, ಧ್ರುವ್ ಜುರೆಲ್ 44 ರನ್ಗಳಿಸಿ ಔಟಾದರು. ಜುರೆಲ್ ಔಟಾಗುತ್ತಿದ್ದಂತೆ ಟೀಮ್ ಇಂಡಿಯಾ ಡಿಕ್ಲೇರ್ ಘೋಷಿಸಿತು. ಅದರಂತೆ ಭಾರತ ತಂಡವು ಮೊದಲ ಇನಿಂಗ್ಸ್ನಲ್ಲಿ 5 ವಿಕೆಟ್ ಕಳೆದುಕೊಂಡು 518 ರನ್ ಕಲೆಹಾಕಿದೆ.

ನೋಡಿರಿ

