ಟಿ20 ವಿಶ್ವಕಪ್‌ನಿಂದ ಹೊರಬಿದ್ದ ಟೀಂ ಇಂಡಿಯಾ – ಆಸ್ಟ್ರೇಲಿಯಾ ವಿರುದ್ದ ಸೋತ ಭಾರತದ ವನಿತೆಯರು

ಟಿ20 ವಿಶ್ವಕಪ್‌ನಿಂದ ಹೊರಬಿದ್ದ ಟೀಂ ಇಂಡಿಯಾ –  ಆಸ್ಟ್ರೇಲಿಯಾ ವಿರುದ್ದ ಸೋತ ಭಾರತದ ವನಿತೆಯರು

ಮಹಿಳಾ ಟಿ20 ವಿಶ್ವಕಪ್  ನಿಂದ ಭಾರತದ ಹೊರಬಿದ್ದಿದೆ. ನಿರ್ಣಾಯಕ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ಸೋತು ವಿಶ್ವಕಪ್‌ನಿಂದ ಹೊರನಡೆಯಿತು.

ಇದನ್ನೂ ಓದಿ:ಟೀಮ್ ಇಂಡಿಯಾ ವಿರುದ್ಧ ಸರಣಿ ಗೆದ್ದ ಕ್ರಿಕೆಟ್ ಶಿಶುಗಳು – ಭಾರತದ ಸೊಕ್ಕು ಮುರಿದ ಐರ್ಲೆಂಡ್

ಆಸ್ಟ್ರೇಲಿಯಾ ಹಾಗೂ ಭಾರತ ಮಹಿಳಾ ತಂಡಗಳ ನಡುವಿನ ಪಂದ್ಯದಲ್ಲಿ ಆಸೀಸ್‌ಪಡೆ ಟೀಮ್ ಇಂಡಿಯಾವನ್ನು ಸೋಲಿಸಿದೆ. ಲಂಡನ್‌ನ ಲಾರ್ಡ್ಸ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಭಾರತ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 170 ರನ್ ಗಳಿಸಿತು. ತಂಡದ ಪರ ನಾಯಕಿಯ ಇನ್ನಿಂಗ್ಸ್ ಆಡಿದ ಹರ್ಮನ್‌ಪ್ರೀತ್ ಕೌರ್ ಕೊನೆಯ ಓವರ್‌ನಲ್ಲಿ ಅವರು ಸತತ ಮೂರು ಸಿಕ್ಸರ್‌ಗಳನ್ನು ಬಾರಿಸಿ ತಂಡವನ್ನು ಈ ಮೊತ್ತಕ್ಕೆ ಕೊಂಡೊಯ್ದರು. ಹರ್ಮನ್ ಪ್ರೀತ್ ಕೌರ್ 27 ಎಸೆತಗಳಲ್ಲಿ 56 ರನ್​ಗಳ ಇನ್ನಿಂಗ್ಸ್ ಆಡಿದರೆ, ಸ್ಮೃತಿ ಮಂಧಾನ 37 ಎಸೆತಗಳಲ್ಲಿ 38 ರನ್, ಶಫಾಲಿ ವರ್ಮಾ 26 ಎಸೆತಗಳಲ್ಲಿ 34 ರನ್ ಮತ್ತು ಜೆಮಿಮಾ ರೊಡ್ರಿಗಸ್ 28 ಎಸೆತಗಳಲ್ಲಿ 34 ರನ್ ಗಳಿಸಿದರು. ರಿಚಾ ಘೋಷ್ 1 ರನ್ ಮತ್ತು ದೀಪ್ತಿ ಶರ್ಮಾ 4 ರನ್ ಗಳಿಸಿ ಅಜೇಯರಾಗಿ ಉಳಿದರು.

171 ರನ್‌ಗಳ  ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಮೊದಲ ಓವರ್‌ನಲ್ಲೇ ತನ್ನ ಮೊದಲ ವಿಕೆಟ್ ಕಳೆದುಕೊಂಡಿತು. ಆದರೆ ಆ ನಂತರ ಬಂದ ಬ್ಯಾಟರ್​​ಗಳು ತಂಡದ ಇನ್ನಿಂಗ್ಸ್ ಕಟ್ಟಿದರು. ಎಲಿಸ್ ಪೆರ್ರಿ ಮತ್ತು ಆಶ್ಲೀ ಗಾರ್ಡ್ನರ್ ಭಾರತದ ಬೌಲರ್​ಗಳನ್ನು ಬೆಂಡೆತ್ತಿದರು. ಇವರಿಬ್ಬರು 100 ರನ್‌ಗಳ ಜೊತೆಯಾಟವಾಡುವ ಮೂಲಕ ತಂಡವನ್ನು ಗೆಲ್ಲಿಸಿದರು. ಪೆರ್ರಿ 38 ಎಸೆತಗಳಲ್ಲಿ 56 ಬಾರಿಸಿದರೆ, ಗಾರ್ಡ್ನರ್ 29 ಎಸೆತಗಳಲ್ಲಿ 53 ರನ್‌ ಕಲೆಹಾಕಿದರು.

ಈ ಸೋಲಿನೊಂದಿಗೆ ಭಾರತ ಟಿ20 ವಿಶ್ವಕಪ್​ ಫೈನಲ್​ ರೇಸ್​ನಿಂದ ಹೊರಬಿದ್ದರೆ, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಎ ಗುಂಪಿನಿಂದ ಸೆಮಿಫೈನಲ್‌ಗೆ ಅರ್ಹತೆ ಪಡೆದವು. ಗುಂಪು ಹಂತದಲ್ಲಿ ಆಸ್ಟ್ರೇಲಿಯಾ ಅಜೇಯವಾಗಿ ಉಳಿದರೆ, ದಕ್ಷಿಣ ಆಫ್ರಿಕಾ 8 ಅಂಕಗಳೊಂದಿಗೆ ಎರಡನೇ ಸ್ಥಾನ ಮತ್ತು ಭಾರತ 6 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದವು. ಇದೀಗ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವೆಸ್ಟ್ ಇಂಡೀಸ್ ತಂಡವನ್ನು ಎದುರಿಸಲಿದೆ.

Sulekha

Leave a Reply

Your email address will not be published. Required fields are marked *