ಏಕದಿನ ಸರಣಿಗಾಗಿ ಢಾಕಾದಲ್ಲಿ ಟೀಮ್ ಇಂಡಿಯಾ ಆಟಗಾರರಿಂದ ಅಭ್ಯಾಸ
ಟೀಮ್ ಇಂಡಿಯಾ ಆಟಗಾರರು ಢಾಕಾದಲ್ಲಿ ತಮ್ಮ ಅಭ್ಯಾಸವನ್ನು ಆರಂಭಿಸಿದ್ದಾರೆ. ಗುರುವಾರ ಢಾಕಾ ತಲುಪಿದ ಆಟಗಾರರು ಶುಕ್ರವಾರ ಮೊದಲ ಏಕದಿನ ಪಂದ್ಯಕ್ಕಾಗಿ ಅಭ್ಯಾಸ ಶುರುಮಾಡಿದ್ದಾರೆ. ಮಾಜಿ ನಾಯಕ ವಿರಾಟ್ ಕೊಹ್ಲಿ, ಚೇತೇಶ್ವರ್ ಪೂಜಾರ ಹಾಗೂ ವೇಗಿ ಉಮೇಶ್ ಯಾದವ್ ಗುರುವಾರ ತಮ್ಮ ತಂಡವನ್ನು ಸೇರಿಕೊಂಡಿದ್ದರು. ಭಾರತ ಕ್ರಿಕೆಟ್ ತಂಡವು ಬಾಂಗ್ಲಾದೇಶದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ. ವಿರಾಟ್ ಕೊಹ್ಲಿ ತಮ್ಮ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಫೋಟೋವನ್ನು ಹಂಚಿಕೊಂಡಿದ್ದು, ಕೊಹ್ಲಿಗೆ ಪೂಜಾರ ಹಾಗೂ ಉಮೇಶ್ ಯಾದವ್ ಸಾಥ್ ನೀಡಿದ್ದಾರೆ.
ಇದನ್ನೂ ಓದಿ : ಪಾಕ್ ಪ್ರವಾಸದಲ್ಲಿರುವ ಇಂಗ್ಲೆಂಡ್ ಆಟಗಾರರ ಆರೋಗ್ಯದಲ್ಲಿ ಏರುಪೇರು..!
ಆಸ್ಟ್ರೇಲಿಯಾದಲ್ಲಿ ಜರುಗಿದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಬಳಿಕ ಹಲವು ಹಿರಿಯ ಕ್ರಿಕೆಟಿಗರು ವಿಶ್ರಾಂತಿ ಬಯಸಿ ತವರಿಗೆ ವಾಪಾಸಾಗಿದ್ದರು. ಯುವ ಆಟಗಾರರನ್ನೊಳಗೊಂಡ ಭಾರತ ತಂಡವು 3 ಪಂದ್ಯಗಳ ಟಿ20 ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿಯನ್ನಾಡಲು ನ್ಯೂಜಿಲೆಂಡ್ ಪ್ರವಾಸವನ್ನು ಕೈಗೊಂಡಿತ್ತು. ಇದೀಗ ಬಾಂಗ್ಲಾದೇಶ ಎದುರಿನ ಸರಣಿಗೆ ಹಿರಿಯ ಆಟಗಾರರು ಭಾರತ ತಂಡವನ್ನು ಕೂಡಿಕೊಂಡಿದ್ದಾರೆ.
ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವು ಢಾಕಾದ ಮೀರ್‌ಪುರ್ ಕ್ರೀಡಾಂಗಣದಲ್ಲಿ ಡಿಸೆಂಬರ್ 4ರಂದು ನಡೆಯಲಿದೆ. ಡಿಸೆಂಬರ್ 7, ಡಿಸೆಂಬರ್ 10ರಂದು ಏಕದಿನ ಪಂದ್ಯಗಳು ನಡೆಯಲಿವೆ. ಡಿಸೆಂಬರ್ 14ರಿಂದ 18ರ ವರೆಗೂ ಛಟ್ಟೋಗ್ರಾಮ್‌ನಲ್ಲಿ ಮೊದಲ ಟೆಸ್ಟ್, ಡಿ.22ರಿಂದ 26ರ ವರೆಗೂ ಢಾಕಾದಲ್ಲಿ 2ನೇ ಟೆಸ್ಟ್ ನಡೆಯಲಿದೆ. ಟೆಸ್ಟ್ ಸರಣಿಯು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ವ್ಯಾಪ್ತಿಗೆ ಒಳಪಡಲಿದೆ.