ಎರಡನೇ ಗೆಲುವಿಗೆ ಟೀಮ್ ಇಂಡಿಯಾ ಸಜ್ಜು – ದೆಹಲಿಯಲ್ಲಿ ಅಫ್ಘಾನಿಸ್ತಾನ ವಿರುದ್ಧ ಅಬ್ಬರಿಸಲಿದೆ ಟೀಂ ಇಂಡಿಯಾ

ಎರಡನೇ ಗೆಲುವಿಗೆ ಟೀಮ್ ಇಂಡಿಯಾ ಸಜ್ಜು – ದೆಹಲಿಯಲ್ಲಿ ಅಫ್ಘಾನಿಸ್ತಾನ ವಿರುದ್ಧ ಅಬ್ಬರಿಸಲಿದೆ ಟೀಂ ಇಂಡಿಯಾ

ವಿಶ್ವಕಪ್ ಮೊದಲ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾವನ್ನು ಸೋಲಿಸಿದ ನಂತರ, ಇದೀಗ ಟೀಮ್ ಇಂಡಿಯಾ ತನ್ನ ಎರಡನೇ ಪಂದ್ಯವನ್ನು ಆಡಲು ಸಿದ್ಧವಾಗಿದೆ. ಅಫ್ಘಾನಿಸ್ತಾನ ವಿರುದ್ಧ ಟೀಂ ಇಂಡಿಯಾ ತನ್ನ ಎರಡನೇ ಪಂದ್ಯವನ್ನು ಆಡಲಿದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ ಗೆಲುವಿನ ಓಟವನ್ನು ಮುಂದುವರೆಸಲು ರೋಹಿತ್ ಪಡೆ ಸಜ್ಜಾಗಿದೆ. ಅದರಲ್ಲೂ ಮುಖ್ಯವಾಗಿ ಅಫ್ಘಾನ್ ಬೌಲರ್ ನವೀನ್ ಉಲ್ ಹಕ್‌ನನ್ನು ಕೆಣಕುವ ಸಲುವಾಗಿಯೇ ಮೈದಾನದಲ್ಲಿ ಕೊಹ್ಲಿ ಅಬ್ಬರಿಸೋದನ್ನ ನೋಡಲು ಅಭಿಮಾನಿಗಳು ಕಾದು ಕುಳಿತಿದ್ದಾರೆ.

ಇದನ್ನೂ ಓದಿ: ಭಾರತ- ಅಫ್ಘಾನಿಸ್ತಾನ ಪಂದ್ಯಕ್ಕೆ ಶುರುವಾಯ್ತು ಕೌಂಟ್‌ಡೌನ್ –ಹೋಮ್‌ಗ್ರೌಂಡ್‌ನಲ್ಲಿ ವಿರಾಟ್ ಕೊಹ್ಲಿ ಮೇಲೆ ಅಭಿಮಾನಿಗಳ ಕಣ್ಣು

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಬುಧವಾರ ಮಧ್ಯಾಹ್ನ 2 ಗಂಟೆಗೆ ಪಂದ್ಯ ಆರಂಭಗೊಳ್ಳಲಿದೆ. ಭಾರತ ತಂಡ ನಿರಾಯಾಸವಾಗಿ ಗೆಲ್ಲುವ ಗುರಿ ಹೊಂದಿದೆ.

ಇತ್ತ ಬಾಂಗ್ಲಾದೇಶದ ವಿರುದ್ಧದ ತನ್ನ ಮೊದಲ ಪಂದ್ಯದಲ್ಲಿ ಸೋತಿದ್ದ ಅಫ್ಘಾನಿಸ್ತಾನ ಗೆಲುವಿನ ಖಾತೆ ತೆರೆಯುವ ಪ್ರಯತ್ನದಲ್ಲಿದೆ. ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ತಂಡಗಳು ಮೂರು ಬಾರಿ ಮುಖಾಮುಖಿಯಾಗಿದ್ದು, ಭಾರತ 2 ಬಾರಿ ಗೆಲುವು ಸಾಧಿಸಿದೆ. ಒಂದು ಬಾರಿ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಪಂದ್ಯಕ್ಕೆ ಮಳೆಯಾಗುವ ಸಾಧ್ಯತೆಯಿದೆ ಎಂಬ ಮಾತು ಕೇಳಿಬಂದಿತ್ತು. ಹವಾಮಾನ ಇಲಾಖೆಯ ಪ್ರಕಾರ ಈ ಮೋಡ ಕವಿದ ವಾತಾವರಣ ಪಂದ್ಯದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ವರದಿಯಾಗಿದೆ.

ಅಫ್ಘಾನಿಸ್ತಾನ ತಂಡ: ಹಶ್ಮತುಲ್ಲಾ ಶಾಹಿದಿ (ನಾಯಕ), ರೆಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಝದ್ರಾನ್, ರಿಯಾಜ್ ಹಸನ್, ರಹಮತ್ ಶಾ, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್, ಅಜ್ಮತುಲ್ಲಾ ಉಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ ರೆಹಮಾನ್, ನೂರ್ ಅಹ್ಮದ್, ಫಝುಲ್ ಹಕ್ವಿನ್, ಫಜಲ್ಹಾ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್.

Sulekha