31 ವರ್ಷಗಳ ನಂತರ ಗೆಲುವು ಸಾಧಿಸಿದ ಟೀಮ್ಇಂಡಿಯಾ – ಸೌತ್ಆಫ್ರಿಕಾ ನೆಲದಲ್ಲಿ ಇತಿಹಾಸ ಸೃಷ್ಟಿಸಿದ ರೋಹಿತ್ ಶರ್ಮಾ ಪಡೆ

31 ವರ್ಷಗಳ ನಂತರ ಗೆಲುವು ಸಾಧಿಸಿದ ಟೀಮ್ಇಂಡಿಯಾ – ಸೌತ್ಆಫ್ರಿಕಾ ನೆಲದಲ್ಲಿ ಇತಿಹಾಸ ಸೃಷ್ಟಿಸಿದ ರೋಹಿತ್ ಶರ್ಮಾ ಪಡೆ

ಮೊದಲ ಟೆಸ್ಟ್‌ ಪಂದ್ಯದಲ್ಲಿ ಹೀನಾಯ ಸೋಲನುಭವಿಸಿದ್ದ ಟೀಂ ಇಂಡಿಯಾ 2ನೇ ಟೆಸ್ಟ್‌ ಪಂದ್ಯದಲ್ಲಿ ಗೆದ್ದು ಸೇಡು ತೀರಿಸಿಕೊಂಡಿತು. ಇದೀಗ 31 ವರ್ಷಗಳ ಬಳಿಕ ಇಲ್ಲಿ ಏಳನೇ ಪಂದ್ಯ ಆಡುತ್ತಿರುವ ಟೀಂ ಇಂಡಿಯಾ ಮೊದಲ ಗೆಲುವು ಸಾಧಿಸಿದೆ. ಗೆಲುವಿಗಾಗಿ ಮೂರು ದಶಕಗಳ ಕಾಯುವಿಕೆ ಅಂತ್ಯಗೊಂಡಿದೆ.

ಇದನ್ನೂ ಓದಿ: 11 ಬಾಲ್.. 6 ವಿಕೆಟ್ – ಟೆಸ್ಟ್ ಇತಿಹಾಸದಲ್ಲೇ ಕಳಪೆ ದಾಖಲೆ ಬರೆದ ಟೀಮ್ ಇಂಡಿಯಾ

ಕೇಪ್ ಟೌನ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು 7 ವಿಕೆಟ್‌ಗಳಿಂದ ಗೆಲ್ಲುವ ಮೂಲಕ ಭಾರತ ತಂಡ ಇತಿಹಾಸ ಸೃಷ್ಟಿಸಿದೆ. ಈ ಗೆಲುವಿನೊಂದಿಗೆ ಪ್ರಸಕ್ತ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಟೀಂ ಇಂಡಿಯಾಗೆ ಭರ್ಜರಿ ಮುಂಬಡ್ತಿ ಕೂಡ ಸಿಕ್ಕಿದೆ. ಕೇವಲ ಎರಡೇ ದಿನದಲ್ಲಿ ಆತಿಥೇಯರನ್ನು ಮಣಿಸಿದ ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಇದೀಗ ಅಗ್ರಸ್ಥಾನಕ್ಕೇರಿದೆ. ಈ ಹಿಂದೆ ಸೆಂಚುರಿಯನ್ ಟೆಸ್ಟ್ ಸೋಲಿನ ನಂತರ ಟೀಂ ಇಂಡಿಯಾ ಟಾಪ್ 3 ಅಲ್ಲಿಯೂ ಇರಲಿಲ್ಲ. ಅಲ್ಲದೆ ಸ್ಲೋ ಓವರ್ ರೇಟ್‌ಗೆ ಎರಡು ಅಂಕಗಳನ್ನು ಸಹ ಕಡಿತಗೊಳಿಸಲಾಗಿತ್ತು. ಇದೀಗ ಕೇಪ್ ಟೌನ್ ಟೆಸ್ಟ್‌ನಲ್ಲಿ ಐತಿಹಾಸಿಕ ಗೆಲುವಿನ ನಂತರ ಭಾರತ ನಂಬರ್ 1 ಸ್ಥಾನವನ್ನು ಅಲಂಕರಿಸಿದೆ . ಈ ಗೆಲುವಿನೊಂದಿಗೆ ಟೀಂ ಇಂಡಿಯಾ 12 ಅಂಕ ಗಳಿಸಿದೆ.

ಕೇಪ್‌ಟೌನ್‌ನಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾವನ್ನು 7 ವಿಕೆಟ್‌ಗಳಿಂದ ಸೋಲಿಸಿ ಸರಣಿಯನ್ನು 1-1 ರಿಂದ ಸಮಬಲಗೊಳಿಸಿತು. ಈ ಗೆಲುವಿನೊಂದಿಗೆ ಭಾರತ ಸರಣಿಯನ್ನು ಉಳಿಸಿಕೊಂಡಿದ್ದು ಮಾತ್ರವಲ್ಲದೆ 31 ವರ್ಷಗಳ ನಂತರ ಕೇಪ್ ಟೌನ್‌ನಲ್ಲಿ ಮೊದಲ ಟೆಸ್ಟ್ ಜಯ ದಾಖಲಿಸಿದೆ.

ಮೊದಲ ಇನ್ನಿಂಗ್ಸ್‌ನಲ್ಲಿ ಮೊಹಮ್ಮದ್‌ ಸಿರಾಜ್‌ ಮಾರಕ ದಾಳಿಗೆ ತುತ್ತಾದ ದಕ್ಷಿಣ ಆಫ್ರಿಕಾ ಕೇವಲ 55 ರನ್‌ಗಳಿಗೆ ಸರ್ವಪತನ ಕಂಡಿತು. ಅಲ್ಪ ಮೊತ್ತದ ಗುರಿ ಬೆನ್ನತ್ತಿದ್ದ ಭಾರತ ಸಹ 153 ರನ್‌ಗಳಿಗೆ ಆಲೌಟ್‌ ಆಯಿತು. ಪುನಃ ಇನ್ನಿಂಗ್ಸ್‌ ಆರಂಭಿಸಿದ ದಕ್ಷಿಣ ಆಫ್ರಿಕಾ 17 ಓವರ್‌ಗಳಲ್ಲಿ 62 ರನ್‌ಗಳಿಗೆ ಪ್ರಮುಖ 3 ವಿಕೆಟ್‌ ಕಳೆದುಕೊಂಡು ಮೊದಲ ದಿನದ ಇನ್ನಿಂಗ್ಸ್‌ ಅಂತ್ಯಗೊಳಿಸಿತ್ತು. ಗುರುವಾರ ತನ್ನ ಸರದಿ ಆರಂಭಿಸಿದ ಹರಿಣರು ಏಡನ್‌ ಮಾರ್ಕ್ರಮ್‌ ಭರ್ಜರಿ ಶತಕದೊಂದಿಗೆ 36.5 ಓವರ್‌ಗಳಲ್ಲಿ 176 ರನ್‌ಗಳಗೆ ಸರ್ವಪತನ ಕಂಡಿತು. ಇದರಿಂದ ಟೀಂ ಇಂಡಿಯಾಕ್ಕೆ 79 ರನ್‌ಗಳ ಗುರಿ ನೀಡಿತು.

79 ರನ್‌ಗಳ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ, ನಾಯಕ ರೋಹಿತ್‌ ಶರ್ಮಾ ಅವರ ತಾಳ್ಮೆಯ ಬ್ಯಾಟಿಂಗ್‌ನಿಂದ 12 ಓವರ್‌ಗಳಲ್ಲೇ 3 ವಿಕೆಟ್‌ ನಷ್ಟಕ್ಕೆ 80 ರನ್‌ ಗಳಿಸಿ ಗೆಲುವು ಸಾಧಿಸಿತು. ಟೀಂ ಇಂಡಿಯಾ ಪರ ಯಶಸ್ವಿ ಜೈಸ್ವಾಲ್‌ 28 ರನ್‌, ರೋಹಿತ್‌ ಶರ್ಮಾ 16 ರನ್‌, ಶುಭಮನ್‌ ಗಿಲ್‌ 10 ರನ್‌, ವಿರಾಟ್‌ ಕೊಹ್ಲಿ 12 ರನ್‌, ಶ್ರೇಯಸ್‌ ಅಯ್ಯರ್‌ 4 ರನ್‌ ಗಳಿಸಿದರು. ಅಂತಿಮ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ 13.5 ಓವರ್‌ಗಳಲ್ಲಿ 61 ರನ್‌ ಬಿಟ್ಟುಕೊಟ್ಟ ಬುಮ್ರಾ 6 ವಿಕೆಟ್‌ ಕಿತ್ತರೆ, ಮುಕೇಶ್‌ ಕುಮಾರ್‌ 2, ಸಿರಾಜ್‌ ಹಾಗೂ ಪ್ರಸಿದ್ಧ್‌ ಕೃಷ್ಣ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

Sulekha