ಪತ್ನಿ ಕೊಂದು ಸೂಟ್ ಕೇಸ್ ನಲ್ಲಿ ಶವ ಇಟ್ಟ ಪತಿ – ವಿಷ ಸೇವಿಸಿ ಪೊಲೀಸರಿಗೆ ಶರಣಾದ ಪಾಪಿ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನೇ ದಿನೇ ಕ್ರೈಂ ರೇಟ್ ಜಾಸ್ತಿಯಾಗುತ್ತಿವೆ. ಅದ್ರಲ್ಲೂ ಬೇರೆ ರಾಜ್ಯಗಳಿಂದ ಬೆಂಗಳೂರಿಗೆ ಬರುವ ವಲಸಿಗರೇ ಅಟ್ಟಹಾಸ ಮೆರೆಯುತ್ತಿದ್ದಾರೆ. ಕೆಲ ತಿಂಗಳುಗಳ ಹಿಂದಷ್ಟೇ ಪ್ರೇಯಸಿಯನ್ನ ಕೊಂದು ಯುವಕನೊಬ್ಬ ಶವವನ್ನ ಕತ್ತರಿಸಿ ಫ್ರಿಡ್ಜ್ ನಲ್ಲಿ ಇಟ್ಟಿದ್ದ. ಈಗ ಪತಿಯೊಬ್ಬ ಪತ್ನಿ ಶವವನ್ನ ಸೂಟ್ ಕೇಸ್ ನಲ್ಲಿ ಇಟ್ಟಿರೋ ಭಯಾಕನ ಘಟನೆ ಬೆಳಕಿಗೆ ಬಂದಿದೆ. ದಂಪತಿ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿ ಕೊನೆಗೆ ಪತ್ನಿ ಶವವನ್ನ ಪತಿ ಸೂಟ್ ಕೇಸ್ ನಲ್ಲಿ ತುಂಬಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಇದನ್ನೂ ಓದಿ : ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಫೇಲ್ಯೂರ್ – ಚೆನ್ನೈ ವಿರುದ್ಧ ಆಡಲ್ವಾ ಪಡಿಕ್ಕಲ್?
ಬೆಂಗಳೂರಿನ ಹುಳಿಮಾವಿನಲ್ಲಿ ಇಂಥಾದ್ದೊಂದು ಘಟನೆ ನಡೆದಿದೆ. ಹುಳಿಮಾವು ಸಮೀಪದ ದೊಡ್ಡ ಕಮ್ಮನಹಳ್ಳಿಯಲ್ಲಿ ಪಾಪಿ ಪತಿರಾಯ ಪತ್ನಿಯ ತುಂಡರಿಸಿ ಸೂಟ್ ಕೇಸ್‌ಗೆ ತುಂಬಿದ್ದಾನೆ. ಬಳಿಕ ಮಹಾರಾಷ್ಟ್ರದಲ್ಲಿರುವ ಪತ್ನಿಯ ಪೋಷಕರಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾನೆ. ದೊಡ್ಡ ಕಮ್ಮನಹಳ್ಳಿಯ ಮನೆಯಲ್ಲಿ ಮಹಾರಾಷ್ಟ್ರ ಮೂಲದ ರಾಕೇಶ್, ಗೌರಿ ಅನಿಲ್ ಸಾಂಬೆಕರ್ ವಾಸಿಸುತ್ತಿದ್ದರು. ಗಂಡ, ಹೆಂಡತಿ ಮಧ್ಯೆ ಜಗಳವಾಗಿ ಪತ್ನಿಯನ್ನು ರಾಕೇಶ್ ತುಂಡು, ತುಂಡಾಗಿ ಕತ್ತರಿಸಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಕೊಲೆ ಪ್ರಕರಣದಲ್ಲಿ ಆರೋಪಿ ಪತಿ ಮಹಾರಾಷ್ಟ್ರದಲ್ಲಿ ಪೊಲೀಸ್ ವಶವಾಗಿದ್ದಾನೆ. ಪತ್ನಿಯನ್ನು ಕೊಲೆ ಮಾಡಿ, ಮೃತದೇಹವನ್ನು ತುಂಡು ಮಾಡಿ ಸೂಟ್‌ಕೇಸ್‌ನಲ್ಲಿಟ್ಟು ಪರಾರಿಯಾಗಿದ್ದ ಆರೋಪಿ ಅಸ್ವಸ್ಥನಾಗಿ ಬಿದ್ದಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತದೇಹವನ್ನು ತುಂಡುತುಂಡು ಮಾಡಿ ಸೂಟ್‌ಕೇಸ್‌ನಲ್ಲಿಟ್ಟು ಪರಾರಿಯಾಗಿದ್ದ ಭಯಾನಕ ಘಟನೆ ಸದ್ಯ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಇದೀಗ ಆ ಕೊಲೆ ಪ್ರಕರಣ ಬೆಳಕಿಗೆ ಬಂದಿದ್ಹೇಗೆ ಮತ್ತು ಆರೋಪಿ ಪೊಲೀಸರಿಗೆ ಸಿಕ್ಕಿದ್ದು ಹೇಗೆ ಎಂಬುದನ್ನು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ ಅವರು ಕೊಲೆ ಪ್ರಕರಣದ ಬಗ್ಗೆ ಮಾಹಿತಿ ನೀಡಿದ್ದಾರೆ. ಸದ್ಯ, ಆರೋಪಿಯನ್ನು ದಾಖಲಿಸಲಾಗಿರುವ ಮುಂಬೈ ಆಸ್ಪತ್ರೆಗೆ ಹುಳಿಮಾವು ಪೊಲೀಸರ ತಂಡ ಭೇಟಿ ನೀಡಿದ್ದು, ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ ಎಂದೂ ಅವರು ತಿಳಿಸಿದ್ದಾರೆ.ಕೊಲೆಗೆ ಕೌಟುಂಬಿಕ ಕಾರಣ ಇರುವ ಬಗ್ಗೆ ಮಾಹಿತಿ ಇದೆ. ಇಷ್ಟೇ ಅಲ್ಲದೆ, ಬೇರೆ ಏನಾದರೂ ಕಾರಣ ಇದೆಯೇ ಎಂದು ಕುಟುಂಬದವರ ಬಳಿ ಮಾಹಿತಿ ಪಡೆಯಬೇಕು. ಈಗಾಗಲೇ ಕುಟುಂಬದವರು ಪೊಲೀಸರ ಬೇಟಿ ಮಾಡಿದ್ದಾರೆ. ತನಿಖೆ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.