‘ಹೂವು’ ಚಿಹ್ನೆಗೆ ವೋಟು ಹಾಕುತ್ತೇನೆ ಎಂದ ಮಹಿಳೆ – ಕಪಾಳಮೋಕ್ಷ ಮಾಡಿದ ಕೈ ಅಭ್ಯರ್ಥಿ!

‘ಹೂವು’ ಚಿಹ್ನೆಗೆ ವೋಟು ಹಾಕುತ್ತೇನೆ ಎಂದ ಮಹಿಳೆ – ಕಪಾಳಮೋಕ್ಷ ಮಾಡಿದ ಕೈ ಅಭ್ಯರ್ಥಿ!

ಲೋಕಸಭೆ ಚುನಾವಣೆಯ ಅಖಾಡ ರಂಗೇರಿದೆ. ರಾಜ್ಯ ದೇಶದೆಲ್ಲೆಡೆ ಎಲೆಕ್ಷನ್‌ ಭರಾಟೆಯಿದೆ. ಈಗಾಗಲೇ ದೇಶದಲ್ಲಿ ಎರಡನೇ ಹಂತದ ಮತದಾನ ನಡೆದಿದೆ. ಇದೀಗ ಮೂರನೇ ಹಂತದ ಮತದಾನಕ್ಕೆ ಭರ್ಜರಿ ಸಿದ್ದತೆ ನಡೆಯುತ್ತಿದು, ಅಭ್ಯರ್ಥಿಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇದೀಗ ಇಲ್ಲೊಬ್ಬ ಕಾಂಗ್ರೆಸ್‌ ಅಭ್ಯರ್ಥಿ ಪ್ರಚಾರದ ವೇಳೆ ಮಹಿಳೆಗೆ ಕಪಾಳಮೋಕ್ಷ ಮಾಡಿದ್ದಾರೆ. ಇದರ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗಿದೆ.

ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ – ಸ್ಥಳ ಮಹಜರಿಗೆ ರೇವಣ್ಣ ನಿವಾಸಕ್ಕೆ ಸಂತ್ರಸ್ತೆ ಜೊತೆ SIT ತಂಡ ಎಂಟ್ರಿ!

ಮೂರನೇ ಹಂತದ ಚುನಾವಣೆ ಹಿನ್ನೆಲೆ ಎಲ್ಲಾ ಅಭ್ಯರ್ಥಿಗಳು ಪ್ರಚಾರದಲ್ಲಿ ಬ್ಯೂಸಿಯಾಗಿದ್ದಾರೆ. ಪ್ರಚಾರದ ವೇಳೆ ಕೆಲ ನಾಯಕರು ವಿವಾದವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಇದೀಗ ತೆಲಂಗಾಣದ ನಿಜಾಮಾಬಾದ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹಾಗೂ ಕಾಂಗ್ರೆಸ್‌ ಹಿರಿಯ ನಾಯಕ ಟಿ.ಜೀವನ್‌ ರೆಡ್ಡಿ. ಚುನಾವಣಾ ಪ್ರಚಾರದ ಮೇಲೆ ಮಹಿಳೆಯ ಕೆನ್ನೆಗೆ ಅವರು ಹೊಡೆದಿದ್ದಾರೆ. ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಕೈ ನಾಯಕನ  ನಡೆಗೆ ವ್ಯಾಪಕ ಟೀಕೆಯೂ ವ್ಯಕ್ತವಾಗುತ್ತಿದೆ.

ಇತ್ತೀಚೆಗೆ ಅರ್ಮೂರ್ ವಿಧಾನಸಭಾ ಕ್ಷೇತ್ರದ ಗ್ರಾಮವೊಂದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೀವನ್‌ ರೆಡ್ಡಿ ಇತರ ಕೆಲವು ನಾಯಕರೊಂದಿಗೆ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಬಳಿ, ಮೇ 13ರಂದು ನಡೆಯಲಿರುವ ಚುನಾವಣೆಯಲ್ಲಿ ತಮಗೆ ಮತ ಹಾಕಬೇಕೆಂದು ಜೀವನ್‌ ರೆಡ್ಡಿ ಹೇಳಿದ್ದರು. ಆದರೆ ಆ ಮಹಿಳೆ ತಾನು ‘ಹೂವು’ ಚಿಹ್ನೆಗೆ ವೋಟು ಮಾಡುವುದಾಗಿ ತಿಳಿಸಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕಿದ್ದೆ. ಆದರೆ ಪಿಂಚಣಿ ಸಿಗುತ್ತಿಲ್ಲ ಎಂದು ಮಹಿಳೆ ಕಾರಣ ನೀಡಿ ಈ ಬಾರಿ ಬಿಜೆಪಿಗೆ ವೋಟು ಹಾಕಲಿದ್ದೇನೆ ಅಂತಾ ಹೇಳಿದ್ದಾರೆ. ಇದರಿಂದ ಸಿಟ್ಟಿಗೆದ್ದ ಜೀವನ್‌ ರೆಡ್ಡಿ ಎಲ್ಲರೆದುರೆ ಮಹಿಳೆಗೆ ಕೆನ್ನೆಗೆ ಹೊಡೆದಿದ್ದಾರೆ. ಕಾಂಗ್ರೆಸ್‌ ಮುಖಂಡರು ನೋಡುತ್ತಿರುವಂತೆಯೇ ಈ ಘಟನೆ ನಡೆದಿದ್ದು, ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Shwetha M

Leave a Reply

Your email address will not be published. Required fields are marked *