ನಾನ್ವೆಜ್ ಅಡುಗೆ ಯಾಕೆ ಮಾಡಿಲ್ಲ ಎಂದು ಪ್ರಶ್ನಿಸಿದ ಗಂಡನನ್ನ ಕೊಂದ ಪತ್ನಿ!

ಗಂಡ ಹೆಂಡತಿ ಮಧ್ಯೆ ಜಗಳ ಕಾಮನ್. ಸಣ್ಣ ಪುಟ್ಟ ವಿಚಾರಕ್ಕೂ ಜಗಳವಾಡುತ್ತಲೇ ಇರುತ್ತಾರೆ. ಇದೀಗ ಇಲ್ಲೊಂದು ಕಡೆ ಅಡುಗೆ ವಿಚಾರಕ್ಕೆ ದಂಪತಿ ಮಧ್ಯೆ ಜಗಳ ನಡೆದಿದೆ. ಮಾಂಸದ ಅಡುಗೆ ಯಾಕೆ ಮಾಡಿಲ್ಲ ಎಂದು ಕೇಳಿದ ಗಂಡನನ್ನ ಪತ್ನಿ ಹತ್ಯೆ ಮಾಡಿದ್ದಾಳೆ.
ಇದನ್ನೂ ಓದಿ: ರಸ್ತೆ ಬದಿ ಪಾನಿಪುರಿ ತಿಂದ ಬಾಲಕ ಸಾವು! – 18ಕ್ಕೂ ಅಧಿಕ ಮಂದಿ ಆಸ್ಪತ್ರೆಗೆ ದಾಖಲು!
ಈ ಘಟನೆ ತೆಲಂಗಾಣದ ಕಾಮರೆಡ್ಡಿಯಲ್ಲಿ ನಡೆದಿದೆ. ಕೋದಂಡ ಶಿವಾಜಿ ಕೊಲೆಯಾಗಿರುವ ವ್ಯಕ್ತಿ. ಲಕ್ಷ್ಮಿ ಗಂಡನನ್ನು ಹತ್ಯೆ ಮಾಡಿದ್ದಾಳೆ.
ಅಷ್ಟಕ್ಕೂ ಆಗಿದ್ದೇನು?
ಕೋದಂಡ ಶಿವಾಜಿ ಮತ್ತು ಲಕ್ಷ್ಮಿ ದಂಪತಿ ತಮ್ಮ ಇಬ್ಬರು ಪುಟ್ಟ ಹೆಣ್ಣುಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಕಳೆದ ಕೆಲವು ತಿಂಗಳುಗಳಿಂದ ಈ ಕುಟುಂಬವು ತೀವ್ರ ಆರ್ಥಿಕ ಒತ್ತಡಕ್ಕೆ ಸಿಲುಕಿತ್ತು. ಹಣಕಾಸಿನ ತೊಂದರೆಯಿಂದಾಗಿ ದಂಪತಿಗಳ ನಡುವೆ ಪ್ರತಿದಿನ ಕಿತ್ತಾಟ ನಡೆಯುತ್ತಿತ್ತು. ಘಟನೆಯ ರಾತ್ರಿ, ಶಿವಾಜಿ ಮನೆಯಲ್ಲಿ ಮಾಂಸಾಹಾರದ ಅಡುಗೆ ಮಾಡದಿರುವ ಬಗ್ಗೆ ಲಕ್ಷ್ಮಿಯನ್ನು ಪ್ರಶ್ನಿಸಿದ್ದಾರೆ. ಈಗಾಗಲೇ ಆರ್ಥಿಕ ಸಮಸ್ಯೆ ಮತ್ತು ಜೀವನಶೈಲಿಯ ಬಗ್ಗೆ ಬೇಸತ್ತಿದ್ದ ಲಕ್ಷ್ಮಿ ಮತ್ತು ಶಿವಾಜಿ ನಡುವೆ ಈ ವಿಚಾರವಾಗಿ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಕೋಪದ ಭರದಲ್ಲಿ ವಿವೇಚನೆ ಕಳೆದುಕೊಂಡ ಲಕ್ಷ್ಮಿ, ಮನೆಯಲ್ಲಿದ್ದ ಮಚ್ಚಿನಿಂದ ಪತಿ ಶಿವಾಜಿಯ ಕುತ್ತಿಗೆಗೆ ಬಲವಾಗಿ ಹೊಡೆದಿದ್ದಾಳೆ.
ದಾಳಿಯ ತೀವ್ರತೆಗೆ ಶಿವಾಜಿ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಮನೆಯೊಳಗೆ ಕಿರುಚಾಟ ಕೇಳಿ ನೆರೆಹೊರೆಯವರು ಸ್ಥಳಕ್ಕೆ ಧಾವಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಾಯಿ ಜೈಲು ಪಾಲಾಗಿ, ತಂದೆ ಇಹಲೋಕ ತ್ಯಜಿಸಿದ್ದರಿಂದ ಕೇವಲ ಎರಡು ಮತ್ತು ಒಂದು ವರ್ಷದ ಇಬ್ಬರು ಹೆಣ್ಣುಮಕ್ಕಳು ಈಗ ಅನಾಥರಾಗಿದ್ದಾರೆ.
ಸ್ಥಳಕ್ಕೆ ಧಾವಿಸಿದ ಪೊಲೀಸ್ ವೃತ್ತ ನಿರೀಕ್ಷಕ ನರಹರಿ ನೇತೃತ್ವದ ತಂಡವು ಲಕ್ಷ್ಮಿಯನ್ನು ವಶಕ್ಕೆ ಪಡೆದಿದೆ. ದಂಪತಿ ನಡುವೆ ಇದ್ದ ದೀರ್ಘಕಾಲದ ಆರ್ಥಿಕ ಸಮಸ್ಯೆಗಳೇ ಈ ಹಿಂಸಾತ್ಮಕ ಕೃತ್ಯಕ್ಕೆ ಪ್ರೇರಣೆಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಅವರು ತಿಳಿಸಿದ್ದಾರೆ.

ನೋಡಿರಿ

