ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೆ ಮೂವರು ಬಲಿ – 40 ದಿನಗಳಲ್ಲಿ 21 ಮಂದಿಯ ದಾರುಣ ಅಂತ್ಯ
ಆರೋಗ್ಯ ಇಲಾಖೆಯಿಂದ ಅಧ್ಯಯನ ಆರಂಭ

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೆ ಮೂವರು ಬಲಿಯಾಗಿದ್ದಾರೆ. ಹಾಸನದಲ್ಲಿ ಇದುವರೆಗೆ ಕೇವಲ 40 ದಿನಗಳಲ್ಲಿ 21 ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಈ ವಿಚಾರಕ್ಕೆ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ಇದನ್ನೂ ಓದಿ: 5 ಹುಲಿ ಕೊ*ದ ಕೇಸ್‌ಗೆ ಬಿಗ್ ಟ್ವಿಸ್ಟ್ – ಹಸುವಿನ ಮಾಲೀಕ ಸೇರಿದಂತೆ ಮೂವರು ಅಂದರ್
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ವ್ಯಕ್ತಿ 38 ವರ್ಷದ ಲೋಹಿತ್ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಬೇಲೂರಿನ ನಿವಾಸಿ 50 ವರ್ಷದ ಜೆಪಿ. ಲೇಪಾಕ್ಷಿ ಎಂಬವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೊಳೆನರಸೀಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇಂಗ್ಲಿಷ್ ಪ್ರಾಧ್ಯಾಪಕರಾದ 58 ವರ್ಷದ ಮುತ್ತಯ್ಯ ಎಂಬವರು ಕೂಡಾ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.
ಲೋಹಿತ್ ಕಳೆದ 18 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಜೆಯಲ್ಲಿ ಊರಿಗೆ ಬಂದಿದ್ದ ಅವರು, ಜುಲೈ 3ರಂದು ರಜೆ ಮುಗಿಸಿ ಕರ್ತವ್ಯಕ್ಕೆ ಮರಳುವವರಿದ್ದರು. ಲೋಹಿತ್ ಅವರು ಕಳೆದ 18 ವರ್ಷಗಳಿಂದ ಸೈನಿಕರಾಗಿ ದೇಶ ಸೇವೆ ಮಾಡಿದ್ದಾರೆ. 7 ವರ್ಷದ ಹಿಂದೆ ಮದುವೆಯಾಗಿದ್ದು ಲೋಹಿತ್ ಅವರಿಗೆ 3 ವರ್ಷದ ಹೆಣ್ಣು ಮಗಳಿದ್ದಾಳೆ. ರಜೆ ಮುಗಿಸಿ ಲೋಹಿತ್ ಜುಲೈ 3 ರಂದು ಕರ್ತವ್ಯಕ್ಕೆ ಮರಳಬೇಕಿತ್ತು.
ಹಾಸನ ನಗರ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂಗ್ಲಿಷ್ ಪ್ರೊಫೆಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮುತ್ತಯ್ಯ ಅವರು ದಿಢೀರ್ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಸೋಮವಾರ ಬೆಳಿಗ್ಗೆ 9:00 ಗಂಟೆ ಸಮಯಲ್ಲಿ ಕಲ್ಯಾಣ ಮಂಟಪದ ಪಕ್ಕದಲ್ಲಿ ಟಿ ಕುಡಿಯುತ್ತಿರುವ ವೇಳೆ ಕುಸಿದು ಬಿದ್ದಿದ್ದಾರೆ. ಸ್ಥಳದಲ್ಲಿದ್ದ ಕೆಲವರು ತಕ್ಷಣ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮುತ್ತಯ್ಯ ಹೃದಯಘಾತದಿಂದ ಮೃತಪಟ್ಟಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಹಾಸನದ ಸಿದ್ದೇಶ್ವರ್ ನಗರದ ನಿವಾಸಿ ಗೋವಿಂದ (37) ಎಂಬವರು ಹೃದಯಾಘಾತದಿಂದ ಮೃತಪಟ್ಟಿದ್ದರು. ಆಟೋ ಚಾಲಕರಾಗಿರುವ ಗೋವಿಂದ ಅವರಿಗೆ ಆಟೋ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರೇ ಆಟೋ ಚಲಾಯಿಸಿಕೊಂಡು ಜಿಲ್ಲಾಸ್ಪತ್ರೆಗೆ ತೆರಳಿದ್ದರು. ಆದಾಗ್ಯೂ, ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು.
ಸದ್ಯ ಹಾಸನದಲ್ಲಿನ ಹೃದಯಾಘಾತ ಪ್ರಕರಣಗಳ ವಿಷಯದ ಬಗ್ಗೆ ಆರೋಗ್ಯ ಇಲಾಖೆ ಗಂಭೀರವಾಗಿ ಕ್ರಮ ಕೈಗೊಂಡಿದೆ. ಈ ಸಮಸ್ಯೆಯನ್ನು ಆಳವಾಗಿ ಅಧ್ಯಯನ ಮಾಡಲು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಅವರ ನೇತೃತ್ವದಲ್ಲಿ 10 ಜನ ತಜ್ಞರ ತಾಂತ್ರಿಕ ಕಮಿಟಿಯನ್ನು ರಚಿಸಲು ಸೂಚನೆ ನೀಡಲಾಗಿದೆ.

ನೋಡಿರಿ

