ಜಪಾನ್‌ನಲ್ಲಿ ಭೀಕರ ಭೂಕಂಪ, ಒಂದೇ ದಿನ 155 ಬಾರಿ ಕಂಪಿಸಿದ ಭೂಮಿ – 13 ಮಂದಿ ಸಾವು  

ಜಪಾನ್‌ನಲ್ಲಿ ಭೀಕರ ಭೂಕಂಪ, ಒಂದೇ ದಿನ 155 ಬಾರಿ ಕಂಪಿಸಿದ ಭೂಮಿ – 13 ಮಂದಿ ಸಾವು  

ಜಪಾನ್‌ನಲ್ಲಿ ವರ್ಷದ ಮೊದಲ ದಿನವೇ ಭೀಕರ ಭೂಕಂಪ ಸಂಭವಿಸಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 155 ಬಾರಿ ಭೂಮಿ ಕಂಪಿಸಿದ್ದು, 13 ಮಂದಿ ಸಾವನ್ನಪ್ಪಿದ್ದಾರೆ. ಹೊಸ ವರ್ಷದ ದಿನದಂದೇ ಭೂಕಂಪ ಸಂಭವಿಸಿ, ಅಪಾರ ಸಾವು ನೋವಿಗೆ ಕಾರಣವಾಗಿದೆ.

ಸೋಮವಾರ  ಜಪಾನ್‌ನ ಹೊನ್ಶುವಿನ ಮುಖ್ಯ ದ್ವೀಪದಲ್ಲಿರುವ ಇಶಿಕಾವಾ ಪ್ರಾಂತ್ಯದಲ್ಲಿ 7.5 ತೀವ್ರತೆಯ ಭೂಕಂಪ ಸಂಭವಿಸಿದೆ. ಅಷ್ಟೇ ಅಲ್ಲದೇ ಒಂದು ಮೀಟರ್ ಎತ್ತರದ ಸುನಾಮಿ ಅಲೆಗಳನ್ನು ಸೃಷ್ಟಿಯಾಗಿದೆ. ಭೂಕಂಪದ ತೀವ್ರತೆಗೆ ಕಟ್ಟಡಗಳು ನೆಲಕ್ಕುರುಳಿವೆ, ಪ್ರಮುಖ ಬಂದರಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ರಸ್ತೆಗಳು ಬಿರುಕು ಬಿಟ್ಟಿದ್ದು, ಜನಜೀವನ ಸಂಪೂರ್ಣ ಅಸ್ಥವ್ಯಸ್ತವಾಗಿದೆ.

ಇದನ್ನೂ ಓದಿ: ಉಪ್ಪಿನಕಾಯಿ ತಿನ್ನೋದ್ರಿಂದ ನಾಲಿಗೆಗೆ ಟೇಸ್ಟ್‌.. ಆರೋಗ್ಯಕ್ಕೆ ತೊಂದರೆ!

ಈ ಸಂಬಂಧ ಜಪಾನ್‌ ಪ್ರಧಾನ ಮಂತ್ರಿ ಫ್ಯೂಮಿಯೊ ಕಿಶಿಡಾ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಜಪಾನ್‌ನಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದಿಂದಾಗಿ ಹಲವಾರು ಸಾವುನೋವುಗಳು ಉಂಟಾಗಿದೆ. ವಾಜಿಮಾ ಬಂದರಿನಲ್ಲಿ ಏಳು ಮಂದಿ ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ನೂರಾರು ಕಟ್ಟಡಗಳು  ಕುಸಿತಗೊಂಡಿದೆ. ಬೆಂಕಿ ಅವಘಡ ಸೇರಿದಂತೆ ಬಹಳ ವ್ಯಾಪಕ ಹಾನಿಯಾಗಿದೆ ಎಂದು ತಿಳಿಸಿದ್ದಾರೆ.

ಏರಿಯಲ್ ನ್ಯೂಸ್ ಫೂಟೇಜ್ ಬಂದರಿನಲ್ಲಿ ಭೂಕಂಪದಿಂದ ಬೆಂಕಿ ಅವಘಡ ಸಂಭವಿಸಿತು. ಏಳು ಅಂತಸ್ತಿನ ಕಟ್ಟಡವು ಕುಸಿದಿದೆ. ಈ ಪ್ರದೇಶದಲ್ಲಿ ಸುಮಾರು 45,000 ಕುಟುಂಬಗಳು ವಿದ್ಯುತ್‌ ಸಮಸ್ಯೆಯಿಂದ ಕತ್ತಲಲ್ಲಿ ಜೀವನ ನಡೆಸುವಂತಾಗಿದೆ. ಭೂಕಂಪದ ತೀವ್ರತೆ 7.5ರಷ್ಟಿತ್ತು ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ (ಯುಎಸ್‌ಜಿಎಸ್) ತಿಳಿಸಿದೆ. ಜಪಾನ್‌ನ ಹವಾಮಾನ ಸಂಸ್ಥೆ ಇದನ್ನು 7.6 ಎಂದು ಹೇಳಿದೆ.

Shwetha M