ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ರೆಡಿ – ಯಾವ ಕ್ಷೇತ್ರದಲ್ಲಿ ಯಾರ ಸ್ಪರ್ಧೆ..?

ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ರೆಡಿ – ಯಾವ ಕ್ಷೇತ್ರದಲ್ಲಿ ಯಾರ ಸ್ಪರ್ಧೆ..?

ವಿಧಾನಸಭಾ ಚುನಾವಣೆಗೆರ ಈಗಾಗಲೇ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಕಾಂಗ್ರೆಸ್ ನಲ್ಲಿ ಎರಡನೇ ಪಟ್ಟಿ ಅಂತಿಮಗೊಳಿಸಲಾಗಿದೆ. ಸೋಮವಾರ ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ 34 ಕ್ಷೇತ್ರಗಳ ಟಿಕೆಟ್ ಫೈನಲ್  ಮಾಡಲಾಗಿದೆ. ಮೊದಲ ಪಟ್ಟಿಯಲ್ಲಿ 124 ಹೆಸರುಗಳನ್ನು ಕಾಂಗ್ರೆಸ್ ಘೋಷಣೆ ಮಾಡಿತ್ತು. ಉಳಿದ ಕ್ಷೇತ್ರಗಳ ಅಭ್ಯರ್ಥಿ ಅಂತಿಮಗೊಳಿಸುವ ಪ್ರಕ್ರಿಯೆ ಆರಂಭಗೊಂಡಿದೆ.

ಸೋಮವಾರ ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಬಿ.ಕೆ ಹರಿಪ್ರಸಾದ್ ಮತ್ತಿತರರು ಭಾಗಿಯಾಗಿದ್ದರು. ಮೋಹನ್ ಪ್ರಕಾಶ್ ಅಧ್ಯಕ್ಷತೆಯಲ್ಲಿ ಸುದೀರ್ಘ ಏಳು ಗಂಟೆಗಳ ಕಾಲ ನಡೆಸಿದ್ದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ನೂರೂ ಕ್ಷೇತ್ರಗಳ ಟಿಕೆಟ್ ಬಗ್ಗೆ ಸಮಿತಿ ಸದಸ್ಯರು ಚರ್ಚೆ ನಡೆಸಿದರೂ ಎರಡು ಮೂರು ಆಕಾಂಕ್ಷಿಗಳು ಇರುವ 34 ಕ್ಷೇತ್ರಗಳಲ್ಲಿ ಓರ್ವ ಅಭ್ಯರ್ಥಿ ಹೆಸರನ್ನು ಅಂತಿಮಗೊಳಿಸಲಾಗಿದೆ. ಇದೇ ತಿಂಗಳ 30 ರಂದು ಮತ್ತೆ ಸಭೆ ನಡೆಸಲು ನಾಯಕರು ನಿರ್ಧರಿಸಿದ್ದಾರೆ.

ಇದನ್ನೂ ಓದಿ : ವರುಣಾ ಜೊತೆಗೆ ಕೋಲಾರದಿಂದಲೂ ಸ್ಪರ್ಧೆ ಎಂದ ಸಿದ್ದರಾಮಯ್ಯ – ಕಾಂಗ್ರೆಸ್ ನಲ್ಲಿ ಭುಗಿಲೇಳುತ್ತಾ ಭಿನ್ನಮತ?

ಚನ್ನಪಟ್ಟಣದಲ್ಲಿ ಸ್ಪರ್ಧಿಸುವುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಅವರೇ ಘೋಷಿಸಿದ್ದಾರೆ. ಹಾಗಾಗಿ, ಅಲ್ಲಿಗೆ ಕಾಂಗ್ರೆಸ್ ನಿಂದ ಯಾರು ಸ್ಪರ್ಧಿಸಲಿದ್ದಾರೆ ಎಂಬುದು ಹೆಚ್ಚು ಕುತೂಹಲ ಕೆರಳಿಸಿದೆ. ಇನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವರುಣಾ ಟಿಕೆಟ್ ಘೋಷಣೆಯಾಗಿದ್ರೂ ಕೋಲಾರದಲ್ಲಿ ಸ್ಪರ್ಧಿಸುವುದಾಗಿಯೂ ಹೇಳಿದ್ದಾರೆ. ಹಾಗಾಗಿ, ಎರಡನೇ ಪಟ್ಟಿಯಲ್ಲಿ ಕೋಲಾರದಿಂದ ಸಿದ್ದರಾಮಯ್ಯನವರಿಗೆ ಟಿಕೆಟ್ ಸಿಗುತ್ತದೆಯೇ ಎಂಬುದನ್ನು ಎಲ್ಲರ ಕುತೂಹಲ ಹೆಚ್ಚಿಸಿದೆ.

ಏಪ್ರಿಲ್ 3 ರಂದು ದೆಹಲಿಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಅಂದು ಬಹುತೇಕ ಕ್ಷೇತ್ರಗಳನ್ನು ಅಂತಿಮಗೊಳಿಸಿದ ಬಳಿಕ ದೆಹಲಿಗೆ ಎರಡನೇ ಪಟ್ಟಿ ಕಳುಹಿಸಲು ನಿರ್ಧಾರ ಮಾಡಲಾಗಿದೆ‌. ಕೇಂದ್ರ ಚುನಾವಣಾ ಸಮಿತಿ ಸಭೆಯ ಬಳಿಕ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ಕೆಲವು ಕ್ಷೇತ್ರಗಳಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಆಕಾಂಕ್ಷಿಗಳಿದ್ದು ಈ ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ಜಟಿಲವಾಗಲಿದೆ. ಈ ನಿಟ್ಟಿನಲ್ಲಿ ಸಾಕಷ್ಟು ಎಚ್ಚರಿಕೆಯ ಹೆಜ್ಜೆ ಇಡಲು ಕಾಂಗ್ರೆಸ್ ನಾಯಕರು ನಿರ್ಧಾರ ಮಾಡಿದ್ದಾರೆ.

suddiyaana