ಉಸಿರಾಡುವ ಗಾಳಿಯೇ ಜೀವಕ್ಕೆ ಮಾರಕ! – ಕಳಪೆ ಮಟ್ಟಕ್ಕೆ ಇಳಿಯುತ್ತಿದೆ ರಾಜ್ಯ ರಾಜಧಾನಿ ವಾಯುಗುಣಮಟ್ಟ!

ಉಸಿರಾಡುವ ಗಾಳಿಯೇ ಜೀವಕ್ಕೆ ಮಾರಕ! – ಕಳಪೆ ಮಟ್ಟಕ್ಕೆ ಇಳಿಯುತ್ತಿದೆ ರಾಜ್ಯ ರಾಜಧಾನಿ ವಾಯುಗುಣಮಟ್ಟ!

ದೇಶದಾದ್ಯಂತ ವಾಯುಗುಣಮಟ್ಟ ದಿನೇ ದಿನೆ ಕಳಪೆಯಾಗುತ್ತಿದೆ. ಉಸಿರಾಡುವ ಗಾಳಿಯೇ ಜೀವಕ್ಕೆ ಮಾರಕವಾಗುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಇದೀಗ ರಾಜ್ಯ ರಾಜಧಾನಿ ಬೆಂಗಳೂರಿನ ವಾಯುಗುಣಮಟ್ಟ ಕೂಡ ಕಳೆಪೆಯಾಗುತ್ತಿದೆ ಎಂಬ ಆತಂಕಕಾರಿ ವಿಚಾರ ಬಯಲಾಗಿದೆ.

ದೀಪಾವಳಿಗೂ ಮುನ್ನವೇ ದೆಹಲಿಯಲ್ಲಿ ವಾಯುಗುಣಮಟ್ಟ ತೀರಾ ಕಳಪೆಯಾಗಿದೆ. ಈಗಾಗಲೇ ಜನರಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಳ್ಳುತ್ತಿದೆ. ಇದೀಗ ದೆಹಲಿ ಹಾದಿಯಲ್ಲೇ ಸಿಲಿಕಾನ್‌ ಸಿಟಿ ಬೆಂಗಳೂರು ದಾಪುಗಾಲಿರಿಸುತ್ತಿದ್ದು, ಸಿಲಿಕಾನ್ ಸಿಟಿಯ ಗಾಳಿಯ ಗುಣಮಟ್ಟ ಕಳಪೆ ಮಟ್ಟಕ್ಕೆ ಕುಸಿಯುತ್ತಿದೆ ಖಾಸಗಿ ಹವಾಮಾನ ಸಂಸ್ಥೆ ಆ್ಯಕ್ಯು ವೆದರ್ ವರದಿಯೊಂದನ್ನು ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಟಾಯ್ಲೆಟ್ ಕಮೋಡ್‌ಗಿಂತಲೂ 2,000 ಪಟ್ಟು ಕೊಳಕು ಅಡುಗೆ ಮನೆಯಲ್ಲಿರುವ ಈ ವಸ್ತು!

ಈ ವರದಿಯಲ್ಲಿ ಬೆಂಗಳೂರಿನ ಇಂದಿನ ಗಾಳಿಯ ಗುಣಮಟ್ಟ ಕೆಳಮಟ್ಟಕ್ಕೆ  ತಲುಪಿದೆ. ಇದು ಸೂಕ್ಷ್ಮ ಸಮುದಾಯದ ಜನರ ಗುಂಪುಗಳಿಗೆ ಅನಾರೋಗ್ಯ ಉಂಟುಮಾಡುವ ಸಾಧ್ಯತೆ ಇದೆ. ಉಸಿರಾಟದ ತೊಂದರೆ ಅಥವಾ ಗಂಟಲಿನ ಕಿರಿಕಿರಿಯಂತಹ ರೋಗಲಕ್ಷಣಗಳನ್ನು ನೀವು ಅನುಭವಿಸುತ್ತಿದ್ದರೆ ಅನಾವಶ್ಯಕ ಹೊರಗಿನ ಓಡಾಟ ತಪ್ಪಿಸಿ ಎಂದು ವರದಿಯಲ್ಲಿ ಸಲಹೆ ನೀಡಲಾಗಿದೆ.

ಬೆಂಗಳೂರಿನ ಇಂದಿನ ವಾಯು ಗುಣಮಟ್ಟ PM 2.6 (Fine Particulate Matter) 75 ಆಗಿದ್ದು, PM 10 ನ ಪ್ರಮಾಣ 51ರಷ್ಟಿದೆ. ಈ ಎರಡೂ ಅಂಶಗಳ ಪ್ರಮಾಣ ಕಳಪೆ ಎಂದು ಆ್ಯಕ್ಯುವೆದರ್ ವರದಿ ಮಾಡಿದೆ. ಉಳಿದಂತೆ ನಗರದಲ್ಲಿನ ಗಾಳಿಯಲ್ಲಿನ ಎನ್ಒ2 ಪ್ರಮಾಣ 23ರಷ್ಟಿದ್ದು, ಇದು ಉತ್ತಮ ಪ್ರಮಾಣದಲ್ಲಿದೆ. ಅಂತೆಯೇ ಓಜೋನ್ ದ ಪ್ರಮಾಣ 13ರಷ್ಟಿದ್ದು, ಕಾರ್ಬನ್ ಮಾನಾಕ್ಸೈಡ್ 2ರಷ್ಟಿದ್ದು, ಈ ಎರಡೂ ಅಂಶಗಳ ಪ್ರಮಾಣ ಉತ್ತಮವಾಗಿದೆ ಎಂದು ಆ್ಯಕ್ಯು ವೆದರ್ ವರದಿ ಮಾಡಿದೆ.

Shwetha M