ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ – ಎಸ್‌ಐಟಿ ಸಮಿತಿ ರಚನೆ ಬೇಡಿಕೆ ತಳ್ಳಿ ಹಾಕಿದ ಸಿಎಂ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ – ಎಸ್‌ಐಟಿ ಸಮಿತಿ ರಚನೆ ಬೇಡಿಕೆ ತಳ್ಳಿ ಹಾಕಿದ ಸಿಎಂ

ಉಡುಪಿ: ಉಡುಪಿಯ ಪ್ಯಾರಾಮೆಡಿಕಲ್‌ ಕಾಲೇಜಿನ ವಿದ್ಯಾರ್ಥಿನಿ ಶೌಚಾಲಯಕ್ಕೆ ತೆರಳಿದ್ದ ವೇಳೆ ಮೂವರು ವಿದ್ಯಾರ್ಥಿನಿಯರು ವಿಡಿಯೋ ಚಿತ್ರೀಕರಣ ಮಾಡಿದ್ದರು. ಈ ಪ್ರಕರಣ ರಾಜ್ಯದಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಸಿಎಂ ಸಿದ್ದರಾಮಯ್ಯ ಅವರು ಈ ಪ್ರಕರಣದ ಕುರಿತು ಮಾತನಾಡಿದ್ದಾರೆ. ಉಡುಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಡಿವೈಎಸ್ಪಿ ನೇತ್ವದಲ್ಲಿ ತನಿಖೆ ನಡೆಯುತ್ತಿದ್ದು, ಅದು ಮೊದಲು ನಡೆಯಲಿ ಎಂದು ಹೇಳಿದ್ದಾರೆ.

ಉಡುಪಿ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಸಿದ್ದರಾಮಯ್ಯ ಬಂದಿಳಿದಿದ್ದಾರೆ. ಈ ವೇಳೆ  ಸುದ್ದಿಗಾರೊಂದಿಗೆ ಮಾತನಾಡಿದ್ದಾರೆ. ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮೊಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಎಫ್‌ಐಆರ್ ಆಗಿದೆ. ಡಿವೈಎಸ್ಪಿ ಮಟ್ಟದ ಅಧಿಕಾರಿಗಳಿಂದ ತನಿಖೆ ನಡೆಯುತ್ತಿದೆ. ಕೇಂದ್ರ ಮಹಿಳಾ ಆಯೋಗದ ಸದಸ್ಯೆ ಕೂಡ ಬಂದು ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣವನ್ನು ಎಸ್‌ಐಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು  ಹೇಳಿದ್ದಾರೆ.

ಇದನ್ನೂ ಓದಿ: ಅಪ್ಪ, ಅಪ್ಪ ಒಪ್ಪಿದರೆ ಮಾತ್ರವೇ ಪ್ರೇಮ ವಿವಾಹಕ್ಕೆ ಅವಕಾಶ – ಸರ್ಕಾರದಿಂದ ಶೀಘ್ರದಲ್ಲೇ ಹೊಸ ಆದೇಶ?

ಮಹಿಳಾ ಆಯೋಗ ಸದಸ್ಯೆ ಖುಷ್ಬೂ ಅವರು ಬಂದು ಪರಿಶೀಲನೆ ಮಾಡಿ ಶೌಚಾಲಯದಲ್ಲಿ ಕ್ಯಾಮರಾ ಇಟ್ಟಿರಲಿಲ್ಲ ಎಂದು ಹೇಳಿದ್ದಾರೆ. ತನಿಖೆಯಾಗಿ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಕಾಲೇಜಿನಲ್ಲಿ ವಿದ್ಯಾರ್ಥಿಗಳು ಜೊತೆ ಸೇರಿ ಮಕ್ಕಳಾಟವೆಂದು ಈ ರೀತಿ ವಿಡಿಯೊ ಚಿತ್ರೀಕರಣ ಮಾಡಿದ್ದರೆ ಕೇಸು ಹೇಗೆ ದಾಖಲಾಗುತ್ತದೆ. ಗೃಹ ಸಚಿವ ಪರಮೇಶ್ವರ್ ಅವರು ಕಾಲೇಜಿನಲ್ಲಿ ಮಕ್ಕಳು ತಮಾಷೆಗೆ ಈ ರೀತಿ ಮಾಡಿರಬಹುದು ಎಂದು ಹೇಳಿರಬಹುದು. ಆದರೆ ಕೇಸು ದಾಖಲಾಗಿದೆ. ಎಫ್ಐಆರ್ ನ್ನು ಕೋರ್ಟ್ ಗೆ ಸಲ್ಲಿಸಲಾಗಿದ್ದು ತನಿಖೆ ಮುಂದುವರಿಯಲಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ಈ ಬಾರಿ ಬಜೆಟ್ ನಲ್ಲಿ ಕರಾವಳಿ ಭಾಗದ ಅಭಿವೃದ್ಧಿಗೆ ಅನೇಕ ಕೊಡುಗೆಗಳನ್ನು ಪ್ರಕಟಿಸಿದ್ದೇವೆ. ಜುಲೈ ತಿಂಗಳಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಿದೆ. ಜೂನ್ ತಿಂಗಳಲ್ಲಿ ಅಷ್ಟೊಂದು ಬಂದಿರಲಿಲ್ಲ. ಮಳೆ ಹೆಚ್ಚು ಬಿದ್ದ ಪ್ರದೇಶಗಳಲ್ಲಿ ಏನಾಗಿದೆ ಎಂದು ತಿಳಿಯಲು ಮತ್ತು ಪರಿಶೀಲನೆ ಸಭೆ ನಡೆಸಲು ಇಲ್ಲಿಗೆ ಬಂದಿದ್ದೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

suddiyaana