ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಶುರುವಾಯ್ತು ಪೈಪೋಟಿ – ಯಾರ್ಯಾರು ಲಾಬಿ ನಡೆಸಿದ್ದಾರೆ ಗೊತ್ತಾ..?

 ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಶುರುವಾಯ್ತು ಪೈಪೋಟಿ – ಯಾರ್ಯಾರು ಲಾಬಿ ನಡೆಸಿದ್ದಾರೆ ಗೊತ್ತಾ..?

ಒತ್ತಡ, ಹೋರಾಟಗಳ ನಡುವೆ ಸಂಪುಟ ರಚನೆ ಮಾಡಿದ್ದಾಯ್ತು. ಅಳೆದು ತೂಗಿ ಮುನಿಸು ಮರೆಸಿ ಖಾತೆಯನ್ನೂ ಹಂಚಿದ್ದಾಯ್ತು. ಆದ್ರೀಗ ಸಚಿವ ಸ್ಥಾನ ಸಿಗದೆ ಸಿಡಿಮಿಡಿಗೊಂಡಿರುವ ಕೆಲ ಶಾಸಕರು ಪ್ರಮುಖ ನಿಗಮ ಮತ್ತು ಮಂಡಳಿಗಳ ಮೇಲೆ ಕಣ್ಣಿಟ್ಟಿದ್ದಾರೆ. ಅದರಲ್ಲೂ ವಿಶೇಷವಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಹುದ್ದೆಗೆ ಭಾರೀ ಪೈಪೋಟಿ ಎದುರಾಗಿದೆ. ಕಾಂಗ್ರೆಸ್​ಗೆ ಈಗ ಮತ್ತೊಂದು ಒಳಬೇಗುದಿ ಸಂಕಷ್ಟ ಎದುರಾಗಿದೆ.

ಸಿದ್ದರಾಮಯ್ಯ ಸಂಪುಟದಲ್ಲಿ ಹಲವು ಹಿರಿಯ ಶಾಸಕರಿಗೆ ಸಚಿವ ಸ್ಥಾನ ಕೈತಪ್ಪಿದೆ. ಸಚಿವ ಸ್ಥಾನ ವಂಚಿತ ಕೆಲ ಶಾಸಕರು ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಲಾಬಿ ನಡೆಸಿದ್ದಾರೆ. ಅದರಲ್ಲೂ ಮುಖ್ಯವಾಗಿ ಟಿ.ಬಿ ಜಯಚಂದ್ರ ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇದಕ್ಕೆ ಪೂರಕವೆಂಬಂತೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿರುವ ಜಯಚಂದ್ರ, ಬಿಡಿಎ ಚೇರ್ಮನ್ ಹುದ್ದೆ ನಿಡುವಂತೆ ಬೇಡಿಕೆ ಇಟ್ಟಿದ್ದಾರೆ. ಒಂದು ವೇಳೆ ಬಿಡಿಎ ನೀಡದಿದ್ದರೆ ದೆಹಲಿ ವಿಶೇಷ ಪ್ರತಿನಿಧಿಯನ್ನಾಗಿಯಾದರೂ ಮಾಡಿ ಎಂದು ಮನವಿ ಮಾಡಿದ್ದಾರೆ. ಹಾಗೇ ಸಿದ್ದರಾಮಯ್ಯನವರ ಆಪ್ತ ಶಾಸಕ ಬಸವರಾಜ ರಾಯರೆಡ್ಡಿ, ದೆಹಲಿ ವಿಶೇಷ ಪ್ರತಿನಿಧಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ.

ಇದನ್ನೂ ಓದಿ : ನಾಯಕರ ನಡುವೆ ‘ಗ್ಯಾರಂಟಿ’ ಗುದ್ದಾಟ – ಫ್ರೀ ಆಫರ್ ಪಡೆಯಲು ಯಾವೆಲ್ಲಾ ಷರತ್ತುಗಳು ಅನ್ವಯ?

ಜಯಚಂದ್ರ ಜೊತೆಗೆ ಬೆಂಗಳೂರಿನ ವಿಜಯನಗರ ಶಾಸಕ ಪ್ರಿಯಾಕೃಷ್ಣ ಹಾಗೂ ಶಾಂತಿನಗರ ಕ್ಷೇತ್ರದ ಶಾಸಕ ಎನ್.​ಎ ಹ್ಯಾರಿಸ್ ಸಹ ಬಿಡಿಎ ಚೇರ್ಮನ್ ಬೇಕೆಂದು ಪಟ್ಟು ಹಿಡಿದಿದ್ದಾರೆ. ಬಿಡಿಎ ಚೇರ್ಮನ್ ಹುದ್ದೆಯನ್ನು ಸ್ಥಳೀಯ ಶಾಸಕರಿಗೇ ನೀಡಿ ಎಂದು ಬೆಂಗಳೂರು ಶಾಸಕರು ಡಿ.ಕೆ ಶಿವಕುಮಾರ್ ಮೇಲೆ ಒತ್ತಡ ಹಾಕುತ್ತಿದ್ದಾರೆ. ಸದ್ಯಕ್ಕೆ ಮೂರ್ನಾಲ್ಕು ಶಾಸಕರು ರೇಸ್​​ನಲ್ಲಿ ಇದ್ದಾರೆ. ಹೀಗಾಗಿ ಮುಂದಿನ ಲೋಕಸಭೆ ಚುನಾವಣೆ ದೃಷ್ಟಿಯಿಂದ ಕಾರ್ಯಕರ್ತರಿಗೆ ನಿಗಮ ಮಂಡಗಳಿಗಳನ್ನು ನಿಡಬೇಕೋ ಅಥವಾ ಶಾಸಕರಿಗೆ ನೀಡಬೇಕೋ ಎಂದು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ. ಹೀಗಾಗಿ ಅಂತಿಮವಾಗಿ ಬಿಡಿಎ ಅಧ್ಯಕ್ಷ ಪಟ್ಟ ಯಾರಿಗೆ ಸಿಗುತ್ತೆ ಅನ್ನೋದನ್ನ ಕಾದು ನೋಡಬೇಕಾಗಿದೆ.

suddiyaana