ಕೋರಮಂಗಲದಲ್ಲಿ ಧಗಧಗನೆ ಹೊತ್ತಿಯುರಿದ ಕಟ್ಟಡ – ಬೆಂಕಿಯಿಂದ ತಪ್ಪಿಸಿಕೊಳ್ಳಲು ಜಿಗಿದ ವ್ಯಕ್ತಿಯ ಸ್ಥಿತಿ ಚಿಂತಾಜನಕ

ಕೋರಮಂಗಲದಲ್ಲಿ ಧಗಧಗನೆ ಹೊತ್ತಿಯುರಿದ ಕಟ್ಟಡ – ಬೆಂಕಿಯಿಂದ ತಪ್ಪಿಸಿಕೊಳ್ಳಲು ಜಿಗಿದ ವ್ಯಕ್ತಿಯ ಸ್ಥಿತಿ ಚಿಂತಾಜನಕ

ಬೆಂಗಳೂರಿನ ಕೊರಮಂಗಲದಲ್ಲಿ ಕಟ್ಟಡವೊಂದರಲ್ಲಿ ನಾಲ್ಕನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದು, ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾರೆ. ಇದರ ಮಧ್ಯೆ ಬೆಂಕಿಕಂಡು ಹೆದರಿದ ವ್ಯಕ್ತಿಯೊಬ್ಬರು ನಾಲ್ಕನೇ ಮಹಡಿಯಿಂದ ಜಿಗಿದಿದ್ದಾರೆ.

ಇದನ್ನೂ ಓದಿ: ಗಾಜಾ ಆಸ್ಪತ್ರೆ ಮೇಲಿನ ವೈಮಾನಿಕ ದಾಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಸಾವು –  ದಾಳಿ ಮಾಡಿದವರು ಇಸ್ರೇಲಿಗರಲ್ಲವಾ?

ಕೋರಮಂಗಲದ ಮಡ್ ಪೈಪ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದಿದೆ. ಈ ವೇಳೆ ಬೆಂಕಿಯ ಕೆನ್ನಾಲಿಗೆಯಿಂದ ತಪ್ಪಿಸಿಕೊಳ್ಳಲು ವ್ಯಕ್ತಿಯೊಬ್ಬರು ಟೆರೇಸ್‌ನಿಂದ ಕೆಳಗೆ ಜಿಗಿದಿದ್ದಾರೆ. ಸ್ಥಳೀಯರು ಇದರ ವೀಡಿಯೋ ಚಿತ್ರೀಕರಿಸಿದ್ದಾರೆ. ಇದೀಗ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ. ಕೊರಮಂಗಲದ ಸೈಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಕೋರಮಂಗಲದ 4 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ವ್ಯಕ್ತಿಯೊಬ್ಬ ಜೀವ ಉಳಿಸಿಕೊಳ್ಳಲು ಕಟ್ಟಡದ ಟೆರೇಸ್‌ನಿಂದ ಜಿಗಿದಿರುವ ಆಘಾತಕಾರಿ ಘಟನೆ ನಡೆದಿದೆ. ಸಿಲಿಂಡರ್ ಬ್ಲಾಸ್ಟ್‌ನಿಂದ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಬಿಲ್ಡಿಂಗ್‌ನ ಮೇಲೆ ಇರುವ ಮಳಿಗೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಅಗ್ನಿ ಅವಘಡವಾದ ಬಳಿಕ 6 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿವೆ. ಬೆಂಕಿ ನಿಯಂತ್ರಿಸಲು ಅಗ್ನಿಶಾಮಕ ದಳದವರು ಹರಸಾಹಸಪಡುತ್ತಿದ್ದಾರೆ. ಕಟ್ಟಡದ ಮೇಲ್ಬಾಗದಲ್ಲಿ 5-6 ಸಿಲಿಂಡರ್‌ಗಳನ್ನು ಇಡಲಾಗಿತ್ತು ಎನ್ನಲಾಗಿದೆ. ಬಿಲ್ಡಿಂಗ್ ಹತ್ತಿರವೂ ಸುಳಿಯಲು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯರು ಅಕ್ಕ-ಪಕ್ಕದ ಬಿಲ್ಡಿಂಗ್ಗೆ ಬೆಂಕಿ ಆವರಿಸುವ ಆತಂಕದಲ್ಲಿದ್ದಾರೆ.

ನಾಲ್ಕು ಮಹಡಿಯ ಕಟ್ಟಡದಲ್ಲಿ, ಗ್ರೌಂಡ್ ಮತ್ತು ಮೊದಲ ಮಹಡಿಯಲ್ಲಿ ಕಾರು ಷೋ ರೂಂ ಇದೆ. ಎರಡು ಮತ್ತು ಮೂರನೇ ಮೂರನೇ ಮಹಡಿಯಲ್ಲಿ ಹುಕ್ಕಾ ಬಾರ್ ನಡೆಸಲಾಗುತ್ತಿತ್ತು. ಮಡ್ ಪೈಪ್ ಹುಕ್ಕಾ ಕೆಫೆನಲ್ಲಿ ಧಿಡೀರನೆ ಬೆಂಕಿ ಕಾಣಿಸಿಕೊಂಡಿತ್ತು.

Sulekha