ಕದ್ದು ಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್, ಬಿಜೆಪಿ ಈಗ ಅಧಿಕೃತವಾಗಿ ಹಾರ ಬದಲಿಸಿಕೊಂಡಿವೆ – ಕಾಂಗ್ರೆಸ್‌ ವ್ಯಂಗ್ಯ

ಕದ್ದು ಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್, ಬಿಜೆಪಿ ಈಗ ಅಧಿಕೃತವಾಗಿ ಹಾರ ಬದಲಿಸಿಕೊಂಡಿವೆ – ಕಾಂಗ್ರೆಸ್‌ ವ್ಯಂಗ್ಯ

ಬೆಂಗಳೂರು: ಜಾತ್ಯಾತೀತ ಮತದಾರರ ಹಿತಕ್ಕಿಂತ ಕುಟುಂಬದ ಹಿತವೇ ಮುಖ್ಯವಾಯಿತೆ ಎಂದು ಕಾಂಗ್ರೆಸ್‌, ಜೆಡಿಎಸ್‌ ವಿರುದ್ಧ ಕಿಡಿಕಾರಿದೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌, ಕೇವಲ ಕುಟುಂಬದ ಹಿತಾಸಕ್ತಿಗಾಗಿ ಜಾತ್ಯಾತೀತತೆಯನ್ನು ವಿಸರ್ಜಿಸಿರುವ ಜೆಡಿಎಸ್ ತನ್ನ ಅಲ್ಪಸಂಖ್ಯಾತ ಮತದಾರರಿಗೆ ಏನೆಂದು ಉತ್ತರಿಸುತ್ತದೆ? ಬಿಜೆಪಿಯ ಅಲ್ಪಸಂಖ್ಯಾತ ಹಾಗೂ ದಲಿತ ವಿರೋಧಿ ನೀತಿಗಳಿಗೆ ಜೆಡಿಎಸ್ ನ ಸಮ್ಮತಿಯೂ ಇದೆಯೇ? ಹಿಂದೆ ಜೆಡಿಎಸ್ ಪಕ್ಷದಲ್ಲೇ ಇದ್ದ ಸಂಸದ ಡ್ಯಾನಿಷ್ ಅಲಿ ಅವರ ಬಗ್ಗೆ ಅತ್ಯಂತ ತುಚ್ಛವಾಗಿ ಮಾತಾಡಿದ ಬಿಜೆಪಿ ಸಂಸದನ ಮಾತನ್ನು ಜೆಡಿಎಸ್ ಕೂಡ ಅನುಮೋದಿಸುತ್ತದೆಯೇ? ಜಾತ್ಯಾತೀತ ಮತದಾರರ ಹಿತಕ್ಕಿಂತ ಕುಟುಂಬದ ಹಿತವೇ ಮುಖ್ಯವಾಯ್ತೆ? ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ದಳಪಡೆಗೆ ಬಿಗ್ ಶಾಕ್ – ಜೆಡಿಎಸ್ ಗೆ ರಾಜೀನಾಮೆ ನೀಡಿದ ಮುಸ್ಲಿಂ ನಾಯಕರು

ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೂ ಜೆಡಿಎಸ್ ಬಿಜೆಪಿಯ ಬಿ ಟೀಮ್ ಆಗಿಯೇ ವರ್ತಿಸುತ್ತಿತ್ತು, ವಿರೋಧ ಪಕ್ಷವಾಗಿದ್ದರೂ ಬಿಜೆಪಿಯ ದುರಾಡಳಿತವನ್ನು ಪ್ರಶ್ನಿಸುವ, ವಿರೋಧಿಸುವ ಕೆಲಸ ಮಾಡಿರಲೇ ಇಲ್ಲ. ಕದ್ದು ಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್ ಹಾಗೂ ಬಿಜೆಪಿ ಈಗ ಅಧಿಕೃತವಾಗಿ ಹಾರ ಬದಲಿಸಿಕೊಂಡಿವೆ ಅಷ್ಟೇ. ಜೆಡಿಎಸ್ ನವರ ಕಣ್ಣೀರಿನಂತೆ ಅವರ ಜಾತ್ಯತೀತತೆಯ ಮುಖವಾಡವೂ ನಕಲಿ ಎಂದು ಕಾಂಗ್ರೆಸ್‌ ಲೇವಡಿ ಮಾಡಿದೆ.

Shwetha M